ಮೋದಿಧಿ-ರಾಹುಲ್ ವಾಕ್ಸಮರ

Contributed byshree vijendra|Vijaya Karnataka

ಬಿಹಾರ ವಿಧಾನಸಭೆ ಚುನಾವಣೆ ಕಣ ರಂಗೇರಿದೆ. ಪ್ರಧಾನಿ ನರೇಂದ್ರ ಮೋದಿ ಮತ್ತು ರಾಹುಲ್ ಗಾಂಧಿ ಪರಸ್ಪರ ವಾಗ್ದಾಳಿ ನಡೆಸಿದ್ದಾರೆ. ಮೋದಿ ಅವರು ಸೇನೆ ಕಾರ್ಯಾಚರಣೆ ಮತ್ತು ಕಾಂಗ್ರೆಸ್-ಆರ್‌ಜೆಡಿ ಹೊಂದಾಣಿಕೆ ಬಗ್ಗೆ ಮಾತನಾಡಿದ್ದಾರೆ. ರಾಹುಲ್ ಗಾಂಧಿ ಅವರು ಮೋದಿ ಅವರು ಟ್ರಂಪ್‌ಗೆ ಹೆದರುತ್ತಾರೆ ಮತ್ತು ಅದಾನಿ-ಅಂಬಾನಿ ನಿಯಂತ್ರಣದಲ್ಲಿದ್ದಾರೆ ಎಂದು ಹೇಳಿದ್ದಾರೆ. ಉಭಯ ನಾಯಕರು ಬಿರುಸಿನ ಪ್ರಚಾರ ನಡೆಸಿದ್ದಾರೆ.

serious political clash between modi and rahul in bihar
ಬಿಹಾರ ವಿಧಾನಸಭೆ ಚುನಾವಣೆ ಕಣ ರಂಗೇರಿದ್ದು, ಪ್ರಧಾನಿ ನರೇಂದ್ರ ಮೋದಿ ಮತ್ತು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಭಾನುವಾರ ಪರಸ್ಪರ ವಾಗ್ದಾಳಿ ನಡೆಸಿದರು. ಮೋದಿ ಅವರು ಕಾಂಗ್ರೆಸ್-ಆರ್‌ಜೆಡಿ ಮೈತ್ರಿಕೂಟದ ಹೊಂದಾಣಿಕೆಯ ಕೊರತೆ ಮತ್ತು ಉಗ್ರರ ವಿರುದ್ಧದ ಸೇನಾ ಕಾರ್ಯಾಚರಣೆ ಬಗ್ಗೆ ಕಾಂಗ್ರೆಸ್‌ನ ನಿಲುವು ಟೀಕಿಸಿದರೆ, ರಾಹುಲ್ ಗಾಂಧಿ ಅವರು ಮೋದಿ ಅವರು ಅಮೆರಿಕ ಅಧ್ಯಕ್ಷ ಟ್ರಂಪ್‌ಗೆ ಹೆದರುತ್ತಾರೆ ಮತ್ತು ಅದಾನಿ-ಅಂಬಾನಿಯವರ ಹಿಡಿತದಲ್ಲಿದ್ದಾರೆ ಎಂದು ವ್ಯಂಗ್ಯವಾಡಿದರು.

ಅರಾರಾದಲ್ಲಿ ಮಾತನಾಡಿದ ಪ್ರಧಾನಿ ಮೋದಿ, "ಉಗ್ರರ ಸಂಹಾರಕ್ಕೆ ಸೇನೆ ಕಾರ್ಯಾಚರಣೆ ನಡೆಸಿದರೆ ಕಾಂಗ್ರೆಸ್‌ನ ಮೊದಲ ಕುಟುಂಬ ನಿದ್ದೆಗೆಡುತ್ತದೆ" ಎಂದು ಕಾಂಗ್ರೆಸ್ ವಿರುದ್ಧ ಹರಿಹಾಯ್ದರು. ಅಲ್ಲದೆ, "ಬಿಹಾರ ಗೆಲ್ಲಲು ಹೊರಟಿರುವ ಕಾಂಗ್ರೆಸ್‌-ಆರ್‌ಜೆಡಿ ನಡುವೆಯೇ ಹೊಂದಾಣಿಕೆಯಿಲ್ಲ. ಕಾಂಗ್ರೆಸ್‌ ತಲೆಗೆ ಬಂದೂಕು ಇಟ್ಟು ತೇಜಸ್ವಿ ತಾವೇ ಸಿಎಂ ಅಭ್ಯರ್ಥಿ ಎಂಬುದಾಗಿ ಘೋಷಣೆ ಮಾಡಿಕೊಂಡಿದ್ದಾರೆ" ಎಂದು ಟೀಕಿಸಿದರು.
ಇತ್ತ, ಬೆಗುಸರಾಯ್‌ನಲ್ಲಿ ಮಾತನಾಡಿದ ರಾಹುಲ್ ಗಾಂಧಿ, "ಪ್ರಧಾನಿ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ಗೆ ಹೆದರುತ್ತಾರೆ. ಅಷ್ಟು ಮಾತ್ರವಲ್ಲದೆ ಅದಾನಿ-ಧಿಅಂಬಾನಿಯ ರಿಮೋಟ್‌ ಕಂಟ್ರೋಲ್‌ನಲ್ಲಿದ್ದಾರೆ" ಎಂದು ಲೇವಡಿ ಮಾಡಿದರು. ಈ ಮೂಲಕ ಇಬ್ಬರು ನಾಯಕರು ಬಿಹಾರ ಚುನಾವಣಾ ಪ್ರಚಾರದಲ್ಲಿ ತಮ್ಮ ತಮ್ಮ ಪಕ್ಷಗಳ ಪರವಾಗಿ ಬಿರುಸಿನ ಪ್ರಚಾರ ನಡೆಸಿದರು.