ಕಾರ್ಮಿಕರ ಶ್ರಮದಿಂದ ದೇಶದ ಅಭಿವೃದ್ಧಿ

Contributed byvinaykudrasthe13@gmail.com|Vijaya Karnataka

ಶಾಸಕ ಸಿಮೆಂಟ್‌ ಮಂಜು ಅವರು ಕಾರ್ಮಿಕರ ಶ್ರಮದಿಂದ ದೇಶದ ಅಭಿವೃದ್ಧಿ ಸಾಧ್ಯವಾಗಿದೆ ಎಂದರು. ಸಕಲೇಶಪುರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಕಾರ್ಮಿಕರಿಗೆ ಸುರಕ್ಷತಾ ಕಿಟ್ ವಿತರಿಸಲಾಯಿತು. ಕಾರ್ಮಿಕರ ಕಲ್ಯಾಣಕ್ಕಾಗಿ ಸರಕಾರ ಹಲವು ಯೋಜನೆಗಳನ್ನು ರೂಪಿಸಿದೆ. ಪಿಂಚಣಿ, ವೈದ್ಯಕೀಯ, ಶೈಕ್ಷಣಿಕ ಸಹಾಯಧನ ಸೇರಿದಂತೆ ವಿವಿಧ ಸೌಲಭ್ಯಗಳನ್ನು ಒದಗಿಸಲಾಗುತ್ತಿದೆ. ಅಸಂಘಟಿತ ಕಾರ್ಮಿಕರು ತಮ್ಮ ಹಕ್ಕುಗಳ ಬಗ್ಗೆ ಜಾಗೃತರಾಗಿ ಯೋಜನೆಗಳ ಪ್ರಯೋಜನ ಪಡೆಯಬೇಕು ಎಂದು ತಿಳಿಸಿದರು.

workers efforts as a catalyst for national progress

ಕಾರ ್ಯಕ್ರಮದಲ್ಲಿಶಾಸಕ ಸಿಮೆಂಟ್ ಮಂಜು ಹೇಳಿಕೆ

ವಿಕ ಸುದ್ದಿಲೋಕ ಸಕಲೇಶಪುರ

ಅಭಿವದ್ಧಿ ಹೊಂದುತ್ತಿರುವ ರಾಷ್ಟ್ರಗಳ ಸಾಲಿನಲ್ಲಿಸೇರ್ಪಡೆಯಾಗಲು ದೇಶದ ಕಾರ್ಮಿಕರ ಶ್ರಮವೇ ಕಾರಣ ಎಂದು ಶಾಸಕ ಸಿಮೆಂಟ್ ಮಂಜು ಹೇಳಿದರು.

ಪಟ್ಟಣದ ಪುರಭವನದಲ್ಲಿಏರ್ಪಡಿಸಿದ ಬ್ರಿಡ್ಜ್ ಕೋರ್ಸ್ ತರಬೇತಿ ಹಾಗೂ ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ ಫಲಾನುಭವಿಗಳಿಗೆ ಸುರಕ್ಷತಾ ಕಿಟ್ ವಿತರಿಸಿ ಮಾತನಾಡಿದರು.

‘‘ದೇಶದ ಆರ್ಥಿಕ ಅಭಿವದ್ಧಿಯಲ್ಲಿಕಾರ್ಮಿಕರ ಶ್ರಮ ನಿರ್ಣಾಯಕ ಪಾತ್ರ ವಹಿಸುತ್ತದೆ. ಇಂತಹ ಕಾರ್ಮಿಕರ ನೆರವಿಗಾಗಿ ಹಲವು ಕಾನೂನುಗಳನ್ನು ರಚಿಸಲಾಗಿದೆ. ಕರ್ತವ್ಯ ನಿರ್ವಹಣೆ ಸಮಯದಲ್ಲಿಸಂಭವಿಸುವ ಅವಘಡ ಹಾಗೂ ಕಾರ್ಮಿಕರ ಉದ್ಯೋಗ ಭದ್ರತೆಯಲ್ಲಿಕಾನೂನುಗಳು ಕಾರ್ಮಿಕರಿಗೆ ನೆರವಾಗಲಿವೆ,’’ಎಂದರು.

‘‘ದೇಶದ ಅಭಿವೃದ್ಧಿಯಲ್ಲಿಕಾರ್ಮಿಕರ ಪಾತ್ರ ಅನನ್ಯವಾಗಿದ್ದು, ಈ ನಿಟ್ಟಿನಲ್ಲಿಸರಕಾರಗಳು ಕಾರ್ಮಿಕರ ಅಭಿವೃದ್ಧಿಗೆ ಸಾಕಷ್ಟು ಯೋಜನೆಗಳನ್ನು ರೂಪಿಸಿದೆ. ಪಿಂಚಣಿ, ಟೂಲ್ ಕಿಟ್ , ಮಹಿಳೆಯರಿಗೆ ಹೆರಿಗೆ ಸೌಲಭ್ಯ, ವಿವಾಹ ಹಾಗೂ ಅಂತ್ಯಕ್ರಿಯೆ ವೆಚ್ಚ, ಶೈಕ್ಷಣಿಕ ಸಹಾಯಧನ ವೈದ್ಯಕೀಯ ಸಹಾಯಧನ, ಅಪಘಾತ ಪರಿಹಾರ ಸೌಲಭ್ಯ ಒದಗಿಸಲಾಗುತ್ತಿದೆ,’’ಎಂದು ಹೇಳಿದರು.

‘‘ಅಸಂಘಟಿತ ಕಾರ್ಮಿಕರು ತಮ್ಮ ಹಕ್ಕುಗಳನ್ನು ಪಡೆಯಲು ಜಾಗೃತರಾಗಬೇಕು. ಸರಕಾರ ನಿಮ್ಮ ಶ್ರೇಯೋಭಿವೃದ್ಧಿಗಾಗಿ ಜಾರಿಗೊಳಿಸಿರುವ ಯೋಜನೆಗಳ ಪ್ರಯೋಜನ ಪಡೆಯಬೇಕು.ಆರೋಗ್ಯ, ಮದುವೆ, ಹೆರಿಗೆ, ಮಕ್ಕಳಿಗೆ ಶಿಕ್ಷಣ, ವೈದ್ಯಕೀಯ ನೆರವು ಸೇರಿ ಎಲ್ಲಹಂತದಲ್ಲೂಸರಕಾರಗಳು ಕಾರ್ಮಿಕರ ಬೆನ್ನಿಗೆ ನಿಂತಿದೆ. ಕಟ್ಟಡ ಕಾರ್ಮಿಕರು ಶ್ರಮಜೀವಿಗಳಾಗಿದ್ದು, ಮಕ್ಕಳಿಗೆ ಉತ್ತಮ ವಿದ್ಯಾಭ್ಯಾಸ ಕೊಡಿಸುವ ಮೂಲಕ ಅವರನ್ನು ಸಮಾಜದ ಮುಖ್ಯವಾಹಿನಿಗೆ ತರಬೇಕು. ಶಿಕ್ಷಣವನ್ನೇ ಅವರಿಗೆ ಸಂಪತ್ತನ್ನಾಗಿ ನೀಡಬೇಕು,’’ಎಂದರು.

ಜಿಲ್ಲಾಕಾರ್ಮಿಕ ಅಧಿಕಾರಿ ಯಮುನಾ ಮಾತನಾಡಿ,‘‘ರಾಜ್ಯ ಹಾಗೂ ಕೇಂದ್ರ ಸರಕಾರದಿಂದ ಕಾರ್ಮಿಕರಿಗೆ ದೊರಕುವ ಸೌಲಭ್ಯಗಳ ಕುರಿತು,’’ಮಾಹಿತಿ ಒದಗಿಸಿದರು.

ಅನಿಕೇತನ ಸಂಸ್ಥೆ ಮುಖ್ಯಸ್ಥ ರಾದ ಕಾರ್ತಿಕ್ , ಆಲೂರು ಹಿರಿಯ ಕಾರ್ಮಿಕ ನಿರೀಕ್ಷಕ ಆನಂದ್ ರಾಮ್ , ತಾಲೂಕು ಹಿರಿಯ ಕಾರ್ಮಿಕ ನಿರೀಕ್ಷಕ ರಘು, ಇಲಾಖೆ ಜಯರಾಮ್ ಮತ್ತಿತರರು ಹಾಜರಿದ್ದರು.

ಫೋಟೊ ಸುದ್ದಿ

ಸಕಲೇಪುರ ಪಟ್ಟಣದ ಪುರಭವನದಲ್ಲಿನಡೆದ ಕಾರ ್ಯಕ್ರಮದಲ್ಲಿಕಾರ್ಮಿಕರಿಗೆ ಶಾಸಕ ಸಿಮೆಂಟ್ ಮಂಜು ಸುರಕ್ಷತಾ ಕಿಟ್ ವಿತರಿಸಿದರು.