ಡಿ.1ರಿಂದ 5ರ ವರೆಗೆ ಐ.ಡಿ.ಪೀಠಕ್ಕೆ ಪ್ರವಾಸಿಗರಿಗೆ ನಿರ್ಬಂಧ
ವಿಕ ಸುದ್ದಿಲೋಕ ಚಿಕ್ಕಮಗಳೂರು
ತಾಲೂಕಿನ ಶ್ರೀ ಗುರು ದತ್ತಾತ್ರೇಯ ಸ್ವಾಮಿ ಬಾಬಾಬುಡನ್ ದರ್ಗಾದಲ್ಲಿಡಿಸೆಂಬರ್ 2ರಿಂದ 4ರ ವರೆಗೆ ದತ್ತ ಜಯಂತಿ ಕಾರ್ಯಕ್ರಮ ನಡೆಯಲಿರುವುದರಿಂದ ಜಿಲ್ಲೆಯ ಪ್ರವಾಸಿ ತಾಣಗಳಾದ ಮುಳ್ಳಯ್ಯನಗಿರಿ, ಸೀತಾಳಯ್ಯನಗಿರಿ, ಶ್ರೀ ಗುರು ದತ್ತಾತ್ರೇಯ ಸ್ವಾಮಿ ಬಾಬಾಬುಡನ್ ದರ್ಗಾ, ಗಾಳಿಕೆರೆ ಮತ್ತು ಮಾಣಿಕ್ಯಧಾರಾ ತಾಣಗಳಿಗೆ ಆಗಮಿಸುವ ಪ್ರವಾಸಿಗರು, ಯಾತ್ರಾರ್ಥಿಗಳಿಗೆ ತಾತ್ಕಾಲಿಕವಾಗಿ ನಿಬಂರ್ ಧಿಸಿ ಜಿಲ್ಲಾಧಿಕಾರಿ ಸಿ.ಎನ್ . ಮೀನಾ ನಾಗರಾಜ್ ಆದೇಶಿಸಿದ್ದಾರೆ.
ದತ್ತಜಯಂತಿಗೆ ಜಿಲ್ಲೆಹಾಗೂ ಹೊರ ಜಿಲ್ಲೆಗಳಿಂದ ಸಾವಿರಾರು ಸಂಖ್ಯೆಯಲ್ಲಿಭಕ್ತರು, ವಾಹನಗಳು ಆಗಮಿಸಲಿದ್ದು, ದತ್ತಮಾಲಾಧಾರಿಗಳು, ವಿಶ್ವ ಹಿಂದೂ ಪರಿಷತ್ , ಬಜರಂಗದಳ ಮುಖಂಡರು, ಕಾರ್ಯಕರ್ತರು, ಸುತ್ತಮುತ್ತಲಿನ ವ್ಯಾಪ್ತಿಯ ಸ್ಥಳೀಯರು ಹಾಗೂ ಜಮೀನುಗಳಲ್ಲಿಕೃಷಿ ಚಟುವಟಿಕೆ ಮಾಡುವವರನ್ನು, ಈಗಾಗಲೇ ಹೋಮ್ ಸ್ಟೇ, ರೆಸಾರ್ಟ್ ಗಳಲ್ಲಿಬುಕಿಂಗ್ ಮಾಡಿಕೊಂಡವರನ್ನು ಈ ನಿಬಂರ್ ಧದಿಂದ ಹೊರತುಪಡಿಸಲಾಗಿದೆ.
ಪೀಠಕ್ಕೆ ತೆರಳುವ ರಸ್ತೆಯು ತುಂಬಾ ಕಿರಿದಾಗಿದ್ದು, ಇತ್ತೀಚಿನ ಮಳೆಯಿಂದಾಗಿ ಭೂಕುಸಿತ ಉಂಟಾಗಿದೆ. ಉದ್ದ ಚಾಸ್ಸಿ ಇರುವ, ಎರಡಕ್ಕಿಂತ ಹೆಚ್ಚಿನ ಆಕ್ಸೆಲ್ ಹೊಂದಿರುವ ಲಾರಿ ಮತ್ತು ಬಸ್ ಗಳ ಸಂಚಾರವನ್ನು ಈ ಅವಧಿಯಲ್ಲಿನಿಬಂರ್ ಧಿಸಲಾಗಿದೆ.

