*ಡಾ.ಚಿ.ಸಿ.ನಿಂಗಣ್ಣ ಚಿತ್ರ ಬಳಸಿ*
**
21ರಂದು‘ಕನ್ನಡ ಶ್ರೀ’ ಪ್ರಶಸ್ತಿ ಪ್ರದಾನ
ವಿಕ ಸುದ್ದಿಲೋಕ ಕಲಬುರಗಿ
ಕರ್ನಾಟಕ ವಿಕಾಸ ರಂಗ ಜಿಲ್ಲಾಘಟಕದಿಂದ ನ.21ರಂದು ಸಂಜೆ 4.30ಕ್ಕೆ ನಗರದ ಡಾ.ಎಸ್ .ಎಂ.ಪಂಡಿತ ರಂಗಮಂದಿರದಲ್ಲಿಡಾ.ಚಿ.ಸಿ.ನಿಂಗಣ್ಣ ರಚಿಸಿದ ಕರ್ನಾಟಕ ಸಾಂಸ್ಕೃತಿಕ ನಾಯಕ ಬಸವಣ್ಣ ಕೃತಿ ಲೋಕಾರ್ಪಣೆ, ಸಾಧಕರಿಗೆ ‘ಕನ್ನಡ ಶ್ರೀ’ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ. ಹಾರಕೂಡ ಹಿರೇಮಠ ಸಂಸ್ಥಾನದ ಡಾ.ಚನ್ನವೀರ ಶಿವಾಚಾಯರು ಸಾನ್ನಿಧ್ಯ ವಹಿಸಲಿದ್ದು, ಯರನಾಳ ವಿರಕ್ತಮಠದ ಸಂಗನಬಸವ ಸ್ವಾಮೀಜಿ ನೇತೃತ್ವ ವಹಿಸಲಿದ್ದಾರೆ. ಎಂಎಲ್ಸಿ ತಿಪ್ಪಣ್ಣಪ್ಪ ಕಮಕನೂರು ಉದ್ಘಾಟಕರಾಗಿ ಪಾಲ್ಗೊಳ್ಳಲಿದ್ದಾರೆ. ಬಿಜೆಪಿ ಮುಖಂಡ ಶಿವಕಾಂತ ಮಹಾಜನ್ ಕೃತಿ ಲೋಕಾರ್ಪಣೆ ಮಾಡಲಿದ್ದು, ಬಿಜೆಪಿ ಮುಖಂಡ ನಿತೀನ್ ಗುತ್ತೇದಾರ್ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ಸಾಹಿತಿ ಶಿವರಾಜ ಪಾಟೀಲ್ ಪ್ರೊ.ಶಿವರಾಜ ಪಾಟೀಲ್ ಕೃತಿ ಕುರಿತು ಮಾತನಾಡಲಿದ್ದಾರೆ. ಎಂಎಲ್ಸಿ ಡಾ.ಚಂದ್ರಶೇಖರ ಪಾಟೀಲ್ , ಡಿಡಿಪಿಯು ಸುರೇಶ ಅಕ್ಕಣ್ಣ, ದಿಶಾ ಪಿಯು ಕಾಲೇಜು ಅಧ್ಯಕ್ಷ ಶಿವಾನಂದ ಖಜೂರ್ಗಿ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ. ಶಾಸಕ ಬಸವರಾಜ ಮತ್ತಿಮೂಡ ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ಜಿಲ್ಲಾಘಟಕದ ಅಧ್ಯಕ್ಷ ಡಾ.ಚಿ.ಸಿ.ನಿಂಗಣ್ಣ ತಿಳಿಸಿದ್ದಾರೆ.

