ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆಯಲ್ಲಿ ಶೇ.100 ಪ್ರಗತಿ ಸಾಧಿಸಿ

Contributed bysulibeleprashanth@gmail.com|Vijaya Karnataka
Subscribe

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆಯನ್ನು ಶೇ.100 ಪೂರ್ಣಗೊಳಿಸಲು ಅಧಿಕಾರಿಗಳಿಗೆ ಸೂಚಿಸಲಾಗಿದೆ. ಶಾಲಾ ಕಾಲೇಜುಗಳಲ್ಲಿ ಗುಣಮಟ್ಟದ ಶಿಕ್ಷಣಕ್ಕೆ ಒತ್ತು ನೀಡುವಂತೆ, ರಾಗಿ ಬೆಂಬಲ ಬೆಲೆ ಹಾಗೂ ಬಿತ್ತನೆ ಬೀಜ, ರಸಗೊಬ್ಬರ ವಿತರಣೆಯನ್ನು ಶೀಘ್ರಗೊಳಿಸುವಂತೆ ತಿಳಿಸಲಾಗಿದೆ. ಕೈಮಗ್ಗ ಉದ್ಯಮಕ್ಕೆ ಮಾರುಕಟ್ಟೆ ನಿರ್ಮಾಣ, ಬೀದಿ ನಾಯಿ ಹಾವಳಿ ತಡೆಗಟ್ಟಲು ಜಾಗೃತಿ ಮೂಡಿಸಲು ಆದೇಶಿಸಲಾಗಿದೆ. ಕಾಲುಬಾಯಿ ರೋಗಕ್ಕೆ ಉಚಿತ ಲಸಿಕೆ ನೀಡಲಾಗುವುದು.

achieved progress in social and academic review of 100 marks

ವಿಕ ಸುದ್ದಿಲೋಕ ಬೆಂಗಳೂರು ಗ್ರಾಮಾಂತರ 2024-25ನೇ ಸಾಲಿಗೆ ಅಂದಾಜಿಸಿದಂತೆ ಅಂಕಿ ಅಂಶಗಳ ವರದಿ ಪ್ರಕಾರ ಜಿಲ್ಲೆಯಲ್ಲಿ3,85,237 ಕುಟುಂಬಗಳಿದ್ದು 12,26,357 ಜನಸಂಖ್ಯೆ ಇದೆ. ಇದುವರೆಗೆ 3,01,800 ಕುಟುಂಬಗಳ 10,10,421 ಜನರ ಸಮೀಕ್ಷೆ ನಡೆಸಲಾಗಿದ್ದು, ಶೇ.82.59ರಷ್ಟು ಕುಟುಂಬ ಗಳ ಸಮೀಕ್ಷೆ ಪೂರ್ಣ ಗೊಳಿಸಲಾಗಿದೆ. ಜಿಲ್ಲೆಯಲ್ಲಿ05 ಸಹಾಯವಾಣಿ ಕೇಂದ್ರ ಗಳನ್ನು ಸ್ಥಾಪಿಸಲಾಗಿದ್ದು, ಸಮೀಕ್ಷೆ ಯಲ್ಲಿಬಿಟ್ಟು ಹೋದ ಕುಟುಂಬಗಳು, ಭಾಗವಹಿಸದೇ ಇರುವವರು ಸಹಾಯವಾಣಿ ಸಂಪರ್ಕಿಸಿದರೆ ಗಣತಿದಾರರು ನಿಮ್ಮ ಮನೆ ಬಾಗಿಲಿಗೆ ಬಂದು ಸಮೀಕ್ಷೆ ಮಾಡಲಿದ್ದಾರೆ. ನಿಗದಿತ ಅವಧಿಯೊಳಗೆ ಜಿಲ್ಲೆಯಲ್ಲಿಶೇ.100 ಸಮೀಕ್ಷೆ ಕಾರ್ಯ ಪೂರ್ಣಗೊಳಿಸಬೇಕು ಎಂದು ಜಿಲ್ಲಾಉಸ್ತುವಾರಿ ಕಾರ ್ಯದರ್ಶಿ ಡಾ.ಪಿ.ಸಿ ಜಾಫರ್ ಅಧಿಕಾರಿಗಳಿಗೆ ಸೂಚಿಸಿದರು. ಜಿಲ್ಲಾಡಳಿತ ಭವನದ ಜಿಪಂ ಸಭಾಂಗಣ ದಲ್ಲಿಆಯೋಜಿಸಲಾಗಿದ್ದ 2025-26ನೇ ಸಾಲಿನ ಜಿಲ್ಲಾಪಂಚಾಯಿತಿ ಸಾಮಾನ್ಯ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು ಶಾಲಾ, ಕಾಲೇಜುಗಳಲ್ಲಿಗುಣಮಟ್ಟದ ಶಿಕ್ಷಣಕ್ಕೆ ಹೆಚ್ಚಿನ ಒತ್ತು ನೀಡಿ ಎಸ್ಸೆಸ್ಸೆಲ್ಸಿ, ಪಿಯುಸಿಯಲ್ಲಿಉತ್ತಮ ಫಲಿತಾಂಶ ತರಲು ಕ್ರಮ ವಹಿಸಿ. ಸರಕಾರಿ ಶಾಲೆಗಳಲ್ಲಿ ಎಲ್ ಕೆಜಿ ಮತ್ತು ಯುಕೆಜಿಯನ್ನು ಅಂಗನವಾಡಿ ಕೇಂದ್ರಗಳಲ್ಲಿಆರಂಭ ಮಾಡಲಾಗಿದ್ದು, ಶಾಲೆಗಳಲ್ಲಿಮಕ್ಕಳ ದಾಖಲೆ ಪ್ರಮಾಣ ಹೆಚ್ಚಾಗಲಿದೆ. ಗುಣಮಟ್ಟದ ಶಿಕ್ಷಣ ಹಾಗೂ ಆಧುನಿಕ ಮೂಲ ಸೌಕರ್ಯಗಳನ್ನು ಒಂದು ಶಾಲೆಗೆ ಒದಗಿಸಿದರೆ ವಿದ್ಯಾರ್ಥಿಗಳ ದಾಖಲಾತಿ ಹೆಚ್ಚಾಗಲಿದೆ ಮುಂದಿನ ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿವಿದ್ಯಾರ್ಥಿ ಗಳು ಉತ್ತಮ ಅಂಕಗಳಿಸಿ ಜಿಲ್ಲೆಗೆ ಒಳ್ಳೆಯ ಸ್ಥಾನ ಬರುವಂತೆ ಕ್ರಮವಹಿಸಬೇಕು. ಸರಕಾರಿ ಶಾಲೆಗಳಲ್ಲಿದೊರೆಯುವ ಸೌಲಭ್ಯಗಳ ಬಗ್ಗೆ ಜನರಿಗೆ ತಿಳಿಸುವ ಅಭಿಯಾನ ಮತ್ತು ಕಾರ್ಯಕ್ರಮಗಳನ್ನು ಮಾಡಬೇಕು ಎಂದರು ಬೇಡಿಕೆ ನಿವಾರಿಸಿ: ಜಿಲ್ಲೆಯಲ್ಲಿಈ ಬಾರಿ 61,513 ಹೆಕ್ಟೇರ್ ಪ್ರದೇಶದಲ್ಲಿರಾಗಿ ಬಿತ್ತನೆಯಾಗಿದೆ. ರಾಗಿ ಬೆಳೆಗೆ ರೂ.4886 ಬೆಂಬಲ ಬೆಲೆ ನೀಡಲಾಗುತ್ತಿದೆ, ಇದರ ಬಗ್ಗೆ ಸಾರ್ವಜನಿಕರಿಗೆ ಮಾಹಿತಿ ತಿಳಿಸಬೇಕು. ಮುಂಗಾರು ಹಂಗಾಮಿಗೆ ಬಿತ್ತನೆ ಬೀಜಗಳು ಒಟ್ಟು 3,698 ಕ್ವಿಂಟಾಲ್ ಬಿತ್ತನೆ ಬೀಜಗಳು ಬೇಡಿಕೆ ಇದ್ದು 3,304 ಕ್ವಿಂಟಾಲ್ ವಿತರಿಸಲಾಗಿದೆ. ಪ್ರಸ್ತುತ 31799 ಮೆಟ್ರಿಕ್ ಟನ್ ಮುಂಗಾರು ಹಂಗಾಮಿನ ರಸಗೊಬ್ಬರ ಬೇಡಿಕೆ ಇದೆ ಹಾಗಾಗಿ ಸಂಬಂಧ ಪಟ್ಟ ಅಧಿಕಾರಿಗಳಿಗೆ ಶೀಘ್ರವೇ ರಸಗೊಬ್ಬರ ಬೇಡಿಕೆ ನಿವಾರಿಸಿ ಎಂದರು. ಜಿಲ್ಲೆಯಲ್ಲಿಕೈಮಗ್ಗ ಮತ್ತು ವಿದ್ಯುತ್ ಮಗ್ಗದಿಂದ ಸಿದ್ಧ ಉಡುಪುಗಳನ್ನು ತಯಾರಿಸುತ್ತಿದ್ದು, ಅವರಿಗೆ ಜಿಲ್ಲೆಯಲ್ಲಿಉತ್ಪಾದನಾ ಘಟಕಗಳಿಗೆ ಒಂದು ಮಾರುಕಟ್ಟೆಯ ಅವಶ್ಯಕತೆಯಿದೆ. ಹಾಗಾಗಿ ಒಂದು ಸ್ಥಳವನ್ನು ಗುರುತಿಸಿ ಅಲ್ಲಿಮಾರುಕಟ್ಟೆ ನಿರ್ಮಿಸಿಲಾಗುವುದು. ದೊಡ್ಡಬಳ್ಳಾಪುರ ತಾಲೂಕಿನಲ್ಲಿಕೈಮಗ್ಗವನ್ನು ಹಲವರು ತಮ್ಮ ಮನೆಗಳಲ್ಲಿಹಾಗೂ ಕೆಲವರು ಜಾಗವನ್ನು ಬಾಡಿಗೆಗೆ ಪಡೆದು ನಡೆಸುತ್ತಿದ್ದಾರೆ. ಇವರಿಗೆ ಎಸ್ ಎಂಇ ಯೋಜನೆ ಹಾಗೂ ನಾನಾ ಯೋಜನೆಗಳಿಂದ ಲಭ್ಯವಿರುವ ಪ್ರೋತ್ಸಾಹಧನ, ಸಹಾಯಧನ ಒದಗಿಸುವ ಮೂಲಕ ಉತ್ತೇಜನ ನೀಡಬೇಕು ಎಂದರು. ಜಾಗೃತಿ ಮೂಡಿಸಿ: ಇತ್ತೀಚಿನ ದಿನಗಳಲ್ಲಿಬೀದಿ ನಾಯಿಗಳ ಹಾವಳಿ ಹೆಚ್ಚಾಗುತ್ತಿದ್ದು, ಇದರ ಬಗ್ಗೆ ಜಾಗೃತಿ ಮೂಡಿಸುವ ಕಾರ್ಯಕ್ರಮಗಳು ಹಾಗೂ ಅಭಿಯಾ ಯನಗಳನ್ನು ಇನ್ನೂ ಹೆಚ್ಚಿನ ಮಟ್ಟದಲ್ಲಿನಡೆಸಬೇಕು. ನವೆಂಬರ್ ತಿಂಗಳಿನಲ್ಲಿಕಾಲುಬಾಯಿ ರೋಗಕ್ಕೆ ಉಚಿತವಾಗಿ ಲಸಿಕೆ ನೀಡಲಾಗುವುದು ಎಂದ ಅವರು, ಸಭೆಯಲ್ಲಿಎಲ್ಲ ಇಲಾಖೆಗಳ ಪ್ರಗತಿಯನ್ನು ಉದ್ದೇಶಿಸಿ ಮುಂದಿನ ಬಾರಿ ಯಾವುದೇ ಕಾರಣಗಳನ್ನು ನೀಡದೆ ಬಾಕಿ ಉಳಿದಿರುವ ಕಾರ್ಯಗಳನ್ನು ಸಮಯಕ್ಕೆ ಪೂರ್ಣ ಗೊಳಿಸಿ ಎಂದು ಅಧಿಕಾರಿಗಳಿಗೆ ಸೂಚಿಸಿದರು. ಸಭೆಯಲ್ಲಿಜಿಲ್ಲಾಧಿಕಾರಿ ಎ.ಬಿ.ಬಸವ ರಾಜು, ಜಿಪಂ ಸಿಇಒ ಡಾ ಕೆ.ಎನ್ . ಅನು ರಾಧ, ಎಸ್ಪಿ ಸಿ.ಕೆ. ಬಾಬಾ, ಜಿಲ್ಲಾಪಂಚಾ ಯಿತಿ ಉಪ ಕಾರ್ಯದರ್ಶಿ ಶಿವಕುಮಾರ್ ಸೇರಿದಂತೆ ಜಿಲ್ಲಾಮಟ್ಟದ ಅಧಿಕಾರಿಗಳು ಮತ್ತು ಸಿಬ್ಬಂದಿ ಉಪಸ್ಥಿತರಿದ್ದರು

ಸಂಬಂಧಿತ ಸುದ್ದಿ

Kannada News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ