ಇಧಿನ್ನೆಧಿರಡು ದಿಧಿನ ವ್ಯಾಪಕ ಮಳೆ ಸಾಧಿಧ್ಯಧಿತೆ

Contributed bymahabaleshwar.kalkani@timesgroup.com|Vijaya Karnataka
Subscribe

ಬೆಂಗಳೂರು: ಕರಾವಳಿ ಮತ್ತು ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಮುಂದಿನ ಎರಡು ದಿನಗಳ ಕಾಲ ವ್ಯಾಪಕ ಮಳೆಯಾಗುವ ನಿರೀಕ್ಷೆಯಿದೆ. ಹವಾಮಾನ ಇಲಾಖೆಯು ಯೆಲ್ಲೊ ಅಲರ್ಟ್ ಘೋಷಿಸಿದೆ. ಅಕ್ಟೋಬರ್ 16 ಮತ್ತು 17 ರಂದು ಈ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ. ಉಳಿದ ಜಿಲ್ಲೆಗಳಲ್ಲಿಯೂ ಸಾಮಾನ್ಯ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ. ಉತ್ತರ ಒಳನಾಡಿನ ಕೆಲವು ಕಡೆಗಳಲ್ಲಿಯೂ ಮಳೆಯಾಗಲಿದೆ.

possibility of widespread rain in south interior regions

ಬೆಂಗಳೂರು: ಕರಾವಳಿಯ ಎಲ್ಲಾಜಿಲ್ಲೆಹಾಗೂ ದಕ್ಷಿಣ ಒಳನಾಡಿನ ಕೆಲ ಜಿಲ್ಲೆಗಳಲ್ಲಿಎರಡು ದಿನ ವ್ಯಾಪಕ ಮಳೆಯಾಗುವ ಸಾಧ್ಯತೆ ಇದ್ದು, ಹವಾಮಾನ ಇಲಾಖೆ ಯೆಲ್ಲೊಅಲರ್ಟ್ ನೀಡಿದೆ. ಅ.16 ಮತ್ತು 17ರಂದು ಕರಾವಳಿಯ ಎಲ್ಲಾಜಿಲ್ಲೆಗಳಿಗೆ ಹಾಗೂ ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಹಾಸನ, ಕೊಡಗು ಮತ್ತು ಮೈಸೂರು ಜಿಲ್ಲೆಗಳಲ್ಲಿವ್ಯಾಪಕ ಮಳೆಯಾಗಲಿದೆ. ಇದೇ ಅವಧಿಯಲ್ಲಿಉಳಿದ ಜಿಲ್ಲೆಗಳಲ್ಲಿಸಾಧಾರಣ ಮಳೆಯಾಗಲಿದೆ ಎಂದು ಇಲಾಖೆ ಮುನ್ಸೂಚನೆ ನೀಡಿದೆ. ಇದೇ ವೇಳೆ ಉತ್ತರ ಒಳನಾಡಿನ ಕೆಲವು ಜಿಲ್ಲೆಗಳಲ್ಲಿಹಗುರದಿಂದ ಸಾಧಾರಣ ಮಳೆಯಾಗಲಿದೆ. ಬುಧವಾರ ಕರಾವಳಿ ಕರ್ನಾಟಕದ ಅನೇಕ ಕಧಿಡೆ, ದಕ್ಷಿಣ ಒಳನಾಡಿನ ಕೆಲವೆಧಿಡೆ ಹಾಗೂ ಉತ್ತರ ಒಳನಾಡಿನ ಒಂದೆರೆಡು ಕಡೆ ಮಳೆಯಾಗಿದೆ. ಪ್ರಮುಖವಾಗಿ ದಕ್ಷಿಣ ಕನ್ನಡ ಜಿಲ್ಲೆಯ ಧರ್ಮಸ್ಥಳ, ಚಿಕ್ಕಮಗಳೂರು ಜಿಲ್ಲೆಯ ಕಳಸ, ಉತ್ತರ ಕನ್ನಡ ಜಿಲ್ಲೆಯ ಕುಮಟಾದಲ್ಲಿತಲಾ 4 ಸೆಂ.ಮೀ., ಹಾಸನ ಜಿಲ್ಲೆಯ ಅರಕಲಗೂಡು, ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ, ಬೆಳ್ತಂಗಡಿ, ಎಚ್ .ಡಿ.ಕೋಟೆ, ಉಡುಪಿ ಜಿಲ್ಲೆಯ ಕಾರ್ಕಳದಲ್ಲಿತಲಾ 3 ಸೆಂ.ಮೀ. ಮಳೆಯಾಗಿದೆ.

ಸಂಬಂಧಿತ ಸುದ್ದಿ

Kannada News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ