ನಲ್ಲೂರಿನಲ್ಲಿ ಟ್ರಕ್ ಅಪಘಾತ: ತಂದೆ-ತಾಯಿ ಮತ್ತು ಈರ್ವ ಮಕ್ಕಳು ಸಾವಿಗೀಡಾದ ಕೇಸು

Vijaya Karnataka
Subscribe

ನೆಲ್ಲೂರಿನ ಕಲಿಗಿರಿ ಮಂಡಲದಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಬೈಕ್​ನಲ್ಲಿ ತೆರಳುತ್ತಿದ್ದ ದಂಪತಿ ಹಾಗೂ ಅವರ ಇಬ್ಬರು ಮಕ್ಕಳು ಲಾರಿಗೆ ಡಿಕ್ಕಿ ಹೊಡೆದು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಚೆಲವಮೂಡಿ ಬಾಬು ಮತ್ತು ಮಾಮತಾ ಮೃತಪಟ್ಟ ದಂಪತಿ. ಅವರೊಂದಿಗೆ ಪ್ರಯಾಣಿಸುತ್ತಿದ್ದ ಮತ್ತೊಂದು ಮಗು ಗಂಭೀರವಾಗಿ ಗಾಯಗೊಂಡಿದೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

truck accident in nellore parents and two children killed
ನೆಲ್ಲೂರಿನ ಕಲಿಗಿರಿ ಮಂಡಲದಲ್ಲಿ ಮಂಗಳವಾರದಂದು ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಬೈಕ್ ನಲ್ಲಿ ತೆರಳುತ್ತಿದ್ದ ದಂಪತಿ ಹಾಗೂ ಅವರ ಆರು ವರ್ಷದ ಮಗಳು ಲಾರಿಗೆ ಡಿಕ್ಕಿ ಹೊಡೆದು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಚೆಲವಮೂಡಿ ಬಾಬು (34) ಮತ್ತು ಮಾಮತಾ (27) ಮೃತಪಟ್ಟ ದಂಪತಿ. ಇವರು ದುಬಗುಂಟ ಗ್ರಾಮದ ನಿವಾಸಿಗಳು.

ಕಲಿಗಿರಿಯಿಂದ ದುಬಗುಂಟ ಗ್ರಾಮಕ್ಕೆ ಕುಟುಂಬ ತೆರಳುತ್ತಿದ್ದಾಗ, ಎದುರುಗಡೆಯಿಂದ ಬಂದ ಬೋರ್ ವೆಲ್ ಲಾರಿ ಟೆಲ್ಲಾಡು ಗ್ರಾಮದ ಬಳಿ ಅವರ ಬೈಕ್ ಗೆ ಮುಖಾಮುಖಿ ಡಿಕ್ಕಿ ಹೊಡೆದಿದೆ. ಈ ದುರ್ಘಟನೆಯಲ್ಲಿ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಅವರೊಂದಿಗೆ ಪ್ರಯಾಣಿಸುತ್ತಿದ್ದ ಮತ್ತೊಂದು ಮಗು ಗಂಭೀರವಾಗಿ ಗಾಯಗೊಂಡಿದ್ದು, ತಕ್ಷಣವೇ ಕವಳಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಈ ಬಗ್ಗೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು, ಅಪಘಾತಕ್ಕೆ ಕಾರಣವನ್ನು ತನಿಖೆ ಮಾಡುತ್ತಿದ್ದಾರೆ.

ಸಂಬಂಧಿತ ಸುದ್ದಿ

Kannada News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ