ನಕಲಿ ಯೂಟ್ಯೂಬರ್ಸ್ ವಿರುದ್ಧ ಕ್ರಮಕ್ಕೆ ಆಗ್ರಹ
ವಿಕ ಸುದ್ದಿಲೋಕ ಸಾಗರ
ನಕಲಿ ಯೂಟ್ಯೂಬರ್ಸ್ ಮತ್ತು ಯೂಟ್ಯೂಬ್ ಚಾನಲ್ ಹೆಸರಿನಲ್ಲಿಬ್ಲಾತ್ರ್ಯಕ್ ಮೇಲ್ ಮಾಡುತ್ತಿರುವವರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಗುರುವಾರ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ನೇತೃತ್ವದಲ್ಲಿಪೊಲೀಸ್ ಉಪಾಧೀಕ್ಷಕ ಡಾ. ಬೆನಕ ಪ್ರಸಾದ್ ಅವರಿಗೆ ಮನವಿ ಸಲ್ಲಿಸಲಾಯಿತು.
ಇತ್ತೀಚಿನ ದಿನಗಳಲ್ಲಿಯೂಟ್ಯೂಬ್ ಹೆಸರಿನಲ್ಲಿಪತ್ರಕರ್ತರು ಎಂದು ಹೇಳಿಕೊಂಡು ಪ್ರಮುಖವಾಗಿ ಲೇಔಟ್ ಮಾಲೀಕರು, ಉದ್ಯಮಿಗಳು, ಸರಕಾರಿ ಅಧಿಕಾರಿಗಳು, ಶಿಕ್ಷಕರಿಗೆ ಯೂಟ್ಯೂಬ್ ಚಾನಲ್ ನಲ್ಲಿನಿಮ್ಮ ವಿರುದ್ಧ ಸುದ್ದಿ ಪ್ರಕಟಿಸುತ್ತೇವೆ ಎಂದು ಹೆದರಿಸಿ ಕೆಲವರು ಹಣ ವಸೂಲಿ ಮಾಡುತ್ತಿದ್ದಾರೆ. ಇವರಿಗೂ ಪತ್ರಕರ್ತರ ಸಂಘಕ್ಕೂ ಯಾವುದೇ ಸಂಬಂಧವಿಲ್ಲಎಂದು ಮನವಿಯಲ್ಲಿಹೇಳಲಾಗಿದೆ.
ಸಂಘದ ಅಧ್ಯಕ್ಷ ಜಿ.ನಾಗೇಶ್ , ಕಾರ್ಯದರ್ಶಿ ಮಹೇಶ್ ಹೆಗಡೆ, ಉಪಾಧ್ಯಕ್ಷ ಲೋಕೇಶಕುಮಾರ್ , ಖಜಾಂಚಿ ಎಂ.ಜಿ.ರಾಘವನ್ , ಜಿಲ್ಲಾಕಾರ್ಯದರ್ಶಿ ದೀಪಕ್ ಸಾಗರ್ , ಪ್ರಮುಖರಾದ ಗಿರೀಶ್ ರಾಯ್ಕರ್ , ಇಮ್ರಾನ್ ಸಾಗರ್ , ಸತ್ಯನಾರಾಯಣ ಮತ್ತಿತರರು ಹಾಜರಿದ್ದರು.
ಚಿತ್ರಶೀರ್ಷಿಕೆ
30ಎಸ್ ಜಿಆರ್ 2
ಸಾಗರದಲ್ಲಿಗುರುವಾರ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ನೇತೃತ್ವದಲ್ಲಿಪೊಲೀಸ್ ಉಪಾಧೀಕ್ಷಕ ಡಾ. ಬೆನಕ ಪ್ರಸಾದ್ ಅವರಿಗೆ ಮನವಿ ಸಲ್ಲಿಸಲಾಯಿತು.

