ರೆಡ್ ಕ್ರಾಸ್ ನಿಂದ ಶ್ರವಣ ತಪಾಸಣೆ ಶಿಬಿರ

Contributed bykukkupalke@gmail.com|Vijaya Karnataka
Subscribe

ಉಡುಪಿಯಲ್ಲಿ ರೆಡ್‌ಕ್ರಾಸ್ ವತಿಯಿಂದ ಉಚಿತ ಶ್ರವಣ ತಪಾಸಣೆ ಶಿಬಿರ ನಡೆಯಿತು. ಅಂತಾರಾಷ್ಟ್ರೀಯ ಲಯನ್ಸ್ ಸಂಸ್ಥೆ, ಆಟೋರಿಕ್ಷಾ ಚಾಲಕರು ಮತ್ತು ಮಾಲೀಕರ ಸಂಘ, ಟೀಮ್ ಈಶ್ವರ್ ಮಲ್ಪೆ ಸಹಯೋಗದಲ್ಲಿ ಈ ಕಾರ್ಯಕ್ರಮ ಆಯೋಜಿಸಲಾಗಿತ್ತು. ಈ ಶಿಬಿರದಲ್ಲಿ 10 ಜನರಿಗೆ ಉಚಿತ ಶ್ರವಣ ಸಾಧನಗಳನ್ನು ವಿತರಿಸಲಾಯಿತು. ಶ್ರವಣ ಸಮಸ್ಯೆಯ ಬಗ್ಗೆ ಅರಿವು ಮೂಡಿಸುವ ಉದ್ದೇಶದಿಂದ ಈ ಶಿಬಿರವನ್ನು ನಡೆಸಲಾಯಿತು.

free hearing test camp for hearing issues red cross

ವಿಕ ಸುದ್ದಿಲೋಕ ಉಡುಪಿ

ಇತರ ಅಂಗಗಳಂತೆ ಕಿವಿಯ ಬಗ್ಗೆ ಹೆಚ್ಚು ಮಹತ್ವ ನೀಡಲಾಗುತ್ತಿಲ್ಲ. ಇದರಿಂದ ಶ್ರವಣ ಸಮಸ್ಯೆ ಜಾಗತಿಕ ಮಟ್ಟದಲ್ಲಿಹೆಚ್ಚಾಗುತ್ತಿದೆ. ಈ ದೃಷ್ಟಿಯಿಂದ ಈ ಬಗ್ಗೆ ಅರಿವು ಮೂಡಿಸುವ ಕೆಲಸವನ್ನು ರೆಡ್ ಕ್ರಾಸ್ ಮಾಡುತ್ತಿದೆ ಎಂದು ರೆಡ್ ಕ್ರಾಸ್ ನ ರಾಜ್ಯ ಸಭಾಪತಿ ಬಸ್ರೂರು ರಾಜೀವ್ ಶೆಟ್ಟಿ ಹೇಳಿದರು.

ರೆಡ್ ಕ್ರಾಸ್ ಜಿಲ್ಲಾಶಾಖೆಯ ವಿಶೇಷಚೇತನರ ಪುನರ್ವಸತಿ ಕೇಂದ್ರದ ನೇತೃತ್ವದಲ್ಲಿಅಂತಾರಾಷ್ಟ್ರೀಯ ಲಯನ್ಸ್ ಸಂಸ್ಥೆ ಜಿಲ್ಲೆ317ಸಿ ರ ಪ್ರಾಯೋಜಕತ್ವದಲ್ಲಿಆಟೋರಿಕ್ಷಾ ಚಾಲಕರು ಮತ್ತು ಮಾಲೀಕರ ಸಂಘ ಉಡುಪಿ ಮಣಿಪಾಲ ಹಾಗೂ ಟೀಮ್ ಈಶ್ವರ್ ಮಲ್ಪೆ ಆಶ್ರಯದಲ್ಲಿನಡೆದ ಉಚಿತ ಶ್ರವಣ ತಪಾಸಣೆ ಮತ್ತು ಶ್ರವಣ ಯಂತ್ರಕ್ಕೆ ಸಹಾಯಧನ ಕಾರ್ಯಕ್ರಮ ಹಾಗೂ ವಿತರಣೆ ಕಾರ್ಯಕ್ರಮದಲ್ಲಿಅಧ್ಯಕ್ಷತೆ ವಹಿಸಿ ಮಾತನಾಡಿದರು.

ಜಿಲ್ಲಾಲಯನ್ಸ್ ಗವರ್ನರ್ ಎಂಜೆಎಫ್ ಸಪ್ನಾ ಸುರೇಶ್ ಉದ್ಘಾಟಿಸಿ ಮಾತನಾಡಿ, ಶ್ರವಣ ಸಮಸ್ಯೆಗಳ ಬಗ್ಗೆ ಇಂದು ನಾವು ಗಂಭೀರವಾಗಿ ಚಿಂತಿಸಬೇಕಾಗಿದೆ. ಈ ನಿಟ್ಟಿನಲ್ಲಿಈ ಶಿಬಿರ ಮಹತ್ವಪೂರ್ಣವಾಗಿದೆ ಎಂದರು.

ಜಿಲ್ಲಾರೆಡ್ ಕ್ರಾಸ್ ಕಾರ್ಯದರ್ಶಿ ಡಾ.ಗಣನಾಥ ಶೆಟ್ಟಿ ಎಕ್ಕಾರು ಪ್ರಾಸ್ತಾವಿಕ ಮಾತುಗಳನ್ನಾಡಿ, ಸ್ವಾಗತಿಸಿದರು.

ಜಿಲ್ಲಾಸ್ವತ್ರೆಯ ವಾಕ್ ಮತ್ತು ಶ್ರವಣ ತಜ್ಞೆ ಸಮೀಕ್ಷಾ ಅವರು ಶ್ರವಣ ಆರೋಗ್ಯದ ಬಗ್ಗೆ ಉಪನ್ಯಾಸ ನೀಡಿದರು. ರೆಡ್ ಕ್ರಾಸ್ ಆಡಳಿತ ಮಂಡಳಿ ಸದಸ್ಯ ವಿ.ಜಿ.ಶೆಟ್ಟಿ ಶುಭ ಹಾರೈಸಿದರು.

ಈಶ್ವರ್ ಮಲ್ಪೆ ತಂಡದ ಸಂಚಾಲಕ ಲವ ಬಂಗೇರ ಕಾರ್ಯಕ್ರಮದ ಮಹತ್ವ ವಿವರಿಸಿದರು. ಜಿಲ್ಲಾವಿಶೇಷಚೇತನರ ಪುನರ್ವಸತಿ ಕೇಂದ್ರದ ನೋಡಲ್ ಅಧಿಕಾರಿ ಜಯಶ್ರೀ ವಾಕ್ ಮತ್ತು ಶ್ರವಣ ತಜ್ಞೆ ನೆಲಿಶಾ ಮತ್ತು ಶ್ರವಣ ತಜ್ಞೆ ಅಂಕಿತಾ ಉಪಸ್ಥಿತರಿದ್ದರು.

ರೆಡ್ ಕ್ರಾಸ್ ಖಜಾಂಚಿ ರಮಾದೇವಿ ವಂದಿಸಿದರು. ಈ ಸಂದರ್ಭ ರೆಡ್ ಕ್ರಾಸ್ ವತಿಯಿಂದ 10 ಜನ ಫಲಾನುಭವಿಗಳಿಗೆ ಉಚಿತವಾಗಿ ಶ್ರವಣ ಸಾಧನ ವಿತರಿಸಲಾಯಿತು.

ಫೋಟೊ 30ಯುಕೆ ರೆಡ್ ಕ್ರಾಸ್ : ಶಿಬಿರದ ಉದ್ಘಾಟನೆ.

ಸಂಬಂಧಿತ ಸುದ್ದಿ

Kannada News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ