ರಾತ್ರೋರಾತ್ರಿ ರಾಯಣ್ಣ ಮೂರ್ತಿ ಪ್ರತಿಷ್ಠಾಪನೆಗೆ ಸಿದ್ಧತೆ

Contributed bysachinnk01@gmail.com|Vijaya Karnataka
Subscribe
Vijay Karnataka

ಅವಕಾಶ ನೀಡದ ಅರಣ್ಯ, ಪೊಲೀಸ್ ಇಲಾಖೆ

ವಿಕ ಸುದ್ದಿಲೋಕ ಮುಂಡಗೋಡ(ಉತ್ತರಕನ್ನಡ)

ಪಟ್ಟಣದ ಅಯ್ಯಪ್ಪಸ್ವಾಮಿ ದೇವಸ್ಥಾನ ಬಳಿ ಗುರುವಾರ ರಾತ್ರಿ ಸ್ವಾತಂತ್ರ್ಯ ಹೋರಾಟಗಾರ ಸಂಗೊಳ್ಳಿ ರಾಯಣ್ಣ ಅವರ ಮೂರ್ತಿ ಪ್ರತಿಷ್ಠಾಪನೆಗೆ ಮುಂದಾಗಿದ್ದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅಭಿಮಾನ ಬಳಗಕ್ಕೆ ಅವಕಾಶ ನೀಡದೆ ನಿರ್ಬಂಧ ಹೇರಿರುವುದರಿಂದ ಹೊಸ ವಿವಾದ ಸೃಷ್ಟಿಯಾಗಿದೆ.

ಪಟ್ಟಣದಲ್ಲಿ2021ರಿಂದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅಭಿಮಾನ ಬಳಗ ವತಿಯಿಂದ ಅಯ್ಯಪ್ಪಸ್ವಾಮಿ ದೇವಸ್ಥಾನದ ಬಳಿ ಸಂಗೊಳ್ಳಿ ರಾಯಣ್ಣ ಕುರಿತು ವಿವಿಧ ಕಾರ್ಯಕ್ರಮ ನಡೆಸಿಕೊಂಡು ಬರಲಾಗುತ್ತಿತ್ತು. ಈ ಸಂಬಂಧ ಅಯ್ಯಪ್ಪಸ್ವಾಮಿ ದೇವಸ್ಥಾನದ ಬಳಿಯೇ ಮೂರ್ತಿ ಪ್ರತಿಷ್ಠಾಪನೆಗೆ ಗುರುವಾರ ರಾತ್ರಿ ಸಿದ್ಧತೆ ನಡೆಸಲಾಗಿತ್ತು. ಈ ಕುರಿತು ಮಾಹಿತಿ ಪಡೆದ ಪೊಲೀಸ್ ಹಾಗೂ ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ತೆರಳಿ ಅನುಮತಿ ಇಲ್ಲದೆ ಮೂರ್ತಿ ಪ್ರತಿಷ್ಠಾಪನೆಗೆ ಅವಕಾಶ ನೀಡುವುದಿಲ್ಲಎಂದು ತಡೆಯಲಾಗಿದೆ.

ಇದರಿಂದ ಕೆಲಕಾಲ ಸ್ಥಳದಲ್ಲಿಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿತ್ತು. ಪೊಲೀಸರು ಅಹಿತಕರ ಘಟನೆಗೆ ಆಸ್ಪದ ನೀಡದೆ ಶಾಂತತೆ ಕಾಪಾಡಿದ್ದಾರೆ. ಶುಕ್ರವಾರ ಬೆಳಗ್ಗೆಯಿಂದಲೇ ಅಯ್ಯಪ್ಪಸ್ವಾಮಿ ದೇವಸ್ಥಾನದ ಬಳಿ ಪೊಲೀಸ್ ಹಾಗೂ ಅರಣ್ಯ ಇಲಾಖೆ ಸಿಬ್ಬಂದಿ ನಿಯೋಜನೆಗೊಂಡಿದ್ದು, ಸಂಗೊಳ್ಳಿ ರಾಯಣ್ಣ ಮೂರ್ತಿ ಪ್ರತಿಷ್ಠಾಪನೆಗೆ ಅವಕಾಶ ನೀಡದೆ ಸೂಕ್ತ ಬಂದೋಬಸ್ ್ತ ಕೈಗೊಂಡಿದ್ದಾರೆ.

ಕೋಟ್ ಗಳು

ಅಯ್ಯಪ್ಪಸ್ವಾಮಿ ದೇವಸ್ಥಾನದ ಬಳಿ ಸ್ವಾತಂತ್ರ್ಯ ಹೋರಾಟಗಾರ ಸಂಗೊಳ್ಳಿ ರಾಯಣ್ಣ ಮೂರ್ತಿ ಪ್ರತಿಷ್ಠಾಪಿಸಲು 2 ವರ್ಷಗಳ ಹಿಂದೆ ಅರಣ್ಯ ಇಲಾಖೆ ಮನವಿ ಸಲ್ಲಿಸಿದರೂ ಈವರೆಗೂ ಸ್ಪಂದಿಸಿಲ್ಲ. ಹೀಗಾಗಿ ಈ ಸ್ಥಳದಲ್ಲಿಯೇ ಮೂರ್ತಿ ಪ್ರತಿಷ್ಠಾಪಿಸಲು ಮುಂದಾಗಿದ್ದು, ಪೊಲೀಸ್ ಹಾಗೂ ಅರಣ್ಯ ಇಲಾಖೆ ಅಧಿಕಾರಿಗಳು ಅವಕಾಶ ನೀಡಿಲ್ಲ. ಮೂರ್ತಿ ಪ್ರತಿಷ್ಠಾಪನೆಗೆ ಅವಕಾಶ ನೀಡುವಂತೆ ಮತ್ತೊಮ್ಮೆ ಮನವಿ ಸಲ್ಲಿಸಲಾಗುವುದು.

-ಅಯ್ಯಪ್ಪ ಭಜಂತ್ರಿ, ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅಭಿಮಾನ ಬಳಗ, ಮುಂಡಗೋಡ.

ಮೂರ್ತಿ ಪ್ರತಿಷ್ಠಾಪನೆಗೆ ಕಾನೂನು ಪ್ರಕಾರ ಯಾವುದೇ ಅನುಮತಿ ಪಡೆಯದ ಕಾರಣ ಅವಕಾಶ ನೀಡಿಲ್ಲ. ಅನುಮತಿ ಪಡೆದು ಮೂರ್ತಿ ಪ್ರತಿಷ್ಠಾಪಿಸುವಂತೆ ತಿಳಿಸಿದ್ದೇವೆ.

-ರಂಗನಾಥ ನೀಲಮ್ಮನವರ, ಸಿಪಿಐ ಮುಂಡಗೋಡ

ಅರಣ್ಯ ಇಲಾಖೆ ಅನುಮತಿ ಪಡೆಯದೆ ರಾತೋರಾತ್ರಿ ಸ್ವಾತಂತ್ರ್ಯ ಹೋರಾಟಗಾರ ಸಂಗೊಳ್ಳಿ ಮೂರ್ತಿ ಪ್ರತಿಷ್ಠಾಪನೆಗೆ ಮುಂದಾಗಿದ್ದು, ಅದನ್ನು ತಡೆದಿದ್ದೇವೆ. ಕಾನೂನು ಪ್ರಕಾರ ಮೂರ್ತಿ ಪ್ರತಿಷ್ಠಾಪನೆಗೆ ಅನುಮತಿ ಪಡೆದುಕೊಂಡರೆ ಅವಕಾಶ ನೀಡಲಾಗುವುದು.

- ಅಪ್ಪಾರಾವ್ ಕಲಶೆಟ್ಟಿ, ವಲಯ ಅರಣ್ಯಾಧಿಕಾರಿ, ಮುಂಡಗೋಡ

31ಎಮ್ ಎನ್ ಡಿ2

ಮುಂಡಗೋಡ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಬಳಿ ಪೊಲೀಸ್ ಇಲಾಖೆ ಹಾಗೂ ಅರಣ್ಯ ಇಲಾಖೆ ಸಿಬ್ಬಂದಿ ನಿಯೋಜನೆಗೊಂಡಿರುವುದು.

ಸಂಬಂಧಿತ ಸುದ್ದಿ

Kannada News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ