ವಿಕ ಸುದ್ದಿಲೋಕ ಪಡುಬಿದ್ರಿ
ಶಾಲಾ ಶಿಕ್ಷಣ ಇಲಾಖೆ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಉಡುಪಿ ಹಾಗೂ ವಿದ್ಯಾ ಪ್ರಸಾರ ವಿದ್ಯಾ ಮಂದಿರ ಹೆಜಮಾಡಿ ಕೋಡಿ ಆಶ್ರಯದಲ್ಲಿ17ರ ವಯೋಮಿತಿಯ ಬಾಲಕ ಮತ್ತು ಬಾಲಕಿಯರ ತಾಲೂಕು ಮಟ್ಟದ ಥ್ರೋಬಾಲ್ ಪಂದ್ಯಾವಳಿ ಶಾಲಾ ಆವರಣದಲ್ಲಿನೆರವೇರಿತು.
ಉಡುಪಿ ಕ್ಷೇತ್ರ ಶಿಕ್ಷಣಾಧಿಕಾರಿ ಡಾ. ಯಲ್ಲಮ್ಮ ಕಾರ್ಯಕ್ರಮದ ಉದ್ಘಾಟಿಸಿ, ಕ್ರೀಡಾಪಟುಗಳಿಗೆ ಶುಭ ಹಾರೈಸಿದರು. ಶಾಲಾ ಸಮಿತಿಯ ಅಧ್ಯಕ್ಷ ವಿನೋದ್ ಕೋಟ್ಯಾನ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದರು.
ಕಾಪು ತಾಲೂಕು ಯುವಜನ ಸೇವಾ ಕ್ರೀಡಾಧಿಕಾರಿ ರಿತೇಶ್ ಕುಮಾರ್ ಶೆಟ್ಟಿ, ತಾಲೂಕು ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷ ಕಿರಣ್ ಕುಮಾರ್ ಶೆಟ್ಟಿ ಉಪಸ್ಥಿತರಿದ್ದರು. ಶಾಲಾ ಪ್ರಿನ್ಸಿಪಾಲ್ ರಾಜೇಶ್ವರಿ ಸ್ವಾಗತಿಸಿದರು. ಶಾಲಾ ಶಿಕ್ಷಕಿ ಸುಜನಿ ವಂದಿಸಿದರು. ಶಾಲಾ ಶಿಕ್ಷಕಿ ಅರ್ಪಿತಾ ಕೆ. ಆರ್ . ಕಾರ್ಯಕ್ರಮ ನಿರೂಪಿಸಿದರು. ದೈಹಿಕ ಶಿಕ್ಷಣ ಶಿಕ್ಷಕ ಹರೀಶ್ ಕೋಟ್ಯಾನ್ ಸಹಕರಿಸಿದರು.
ಒಟ್ಟು 26 ತಂಡಗಳು ಭಾಗವಹಿಸಿದ್ದು, ಬಾಲಕಿಯರ ವಿಭಾಗದಲ್ಲಿಪ್ರಥಮ-ಶಿರ್ವ ಹಿಂದೂ ಪದವಿ ಪೂರ್ವ ಕಾಲೇಜು, ದ್ವಿತೀಯ-ಹೆಜಮಾಡಿಕೋಡಿ ವಿದ್ಯಾಪ್ರಸಾರ ವಿದ್ಯಾಮಂದಿರ ಆಂಗ್ಲಮಾಧ್ಯಮ ಶಾಲೆ.
ಬಾಲಕರ ವಿಭಾಗದಲ್ಲಿಪ್ರಥಮ-ಶಿರ್ವ ಹಿಂದೂ ಪದವಿ ಪೂರ್ವ ಕಾಲೇಜು, ದ್ವಿತೀಯ-ಅಲೆವೂರು ಶಾಂತಿನಿಕೇತನ ಆಂಗ್ಲಮಾಧ್ಯಮ ಶಾಲೆ.
ಫೋಟೋ:31ಎಚ್ ಕೆ1
ಕ್ಯಾ: 17ರ ವಯೋಮಿತಿಯ ಬಾಲಕ ಮತ್ತು ಬಾಲಕಿಯರ ತಾಲೂಕು ಮಟ್ಟದ ಥ್ರೋಬಾಲ್ ಪಂದ್ಯಾವಳಿಯನ್ನು ಉಡುಪಿ ಕ್ಷೇತ್ರ ಶಿಕ್ಷಣಾಧಿಕಾರಿ ಡಾ. ಯಲ್ಲಮ್ಮ ಉದ್ಘಾಟಿಸಿದರು.

