ಚಿಕ್ಕಬಳ್ಳಾಪುರ : ಕನ್ನಡ ರಾಜ್ಯೋತ್ಸವದ ಅಂಗವಾಗಿ 2025ರ ನವೆಂಬರ್ ತಿಂಗಳು ಪೂರ್ತಿ ಕನ್ನಡ ಪುಸ್ತಕ ಪ್ರಾಧಿಕಾರದ ಎಲ್ಲಪುಸ್ತಕಗಳನ್ನು ಶೇ.50ರ ರಿಯಾಯಿತಿ ದರಗಳಲ್ಲಿಮಾರಾಟ ಮಾಡಲಾಗುವುದು.
ಬೆಂಗಳೂರಿನ ಕನ್ನಡ ಭವನದ ಸಿರಿಗನ್ನಡ ಪುಸ್ತಕ ಮಳಿಗೆಯಲ್ಲಿ(ಸಂಪರ್ಕ ಸಂಖ್ಯೆ : 080-22107705) ಹಾಗೂ ಎಲ್ಲಜಿಲ್ಲೆಗಳ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕರ ಕಚೇರಿಯಲ್ಲಿಹಾಗೂ ಕನ್ನಡ ಪುಸ್ತಕ ಪ್ರಾಧಿಕಾರದಿಂದ ತೆರೆಯಲಾದ ಎಲ್ಲಸಿರಿಗನ್ನಡ ಪುಸ್ತಕ ಮಾರಾಟ ಮಳಿಗೆಗಳಲ್ಲಿಈ ರಿಯಾಯಿತಿ ಸೌಲಭ್ಯ ದೊರೆಯಲಿದೆ. ಅಲ್ಲದೆ ಕನ್ನಡ ಪುಸ್ತಕ ಪ್ರಾಧಿಕಾರದ ಆನ್ ಲೈನ್ hಠಿಠಿps://kpp.ka್ಟ್ಞaಠಿaka.ಜಟv.ಜ್ಞಿ ನಲ್ಲಿಕೂಡ ಈ ಶೇ.50 ರಿಯಾಯಿತಿ ಲಭ್ಯವಿದೆ.
ಅತ್ಯಂತ ಮೌಲಿಕವಾದ, ಪ್ರಾಜ್ಞರಿಂದ ರಚಿತವಾದ ಈ ಕೃತಿಗಳನ್ನು ಜನಸಾಮಾನ್ಯರಿಗೆ ಸುಲಭ ಬೆಲೆಯಲ್ಲಿತಲುಪಿಸಬೇಕೆಂಬ ಉದ್ದೇಶ ಕನ್ನಡ ಪುಸ್ತಕ ಪ್ರಾಧಿಕಾರದ್ದು ಎಂದು ಪ್ರಾಧಿಕಾರದ ಆಡಳಿತಾಧಿಕಾರಿ ಬಿ.ಕೆ. ಕಿರಣ್ ಸಿಂಗ್ ಪ್ರಕಟಣೆಯಲ್ಲಿತಿಳಿಸಿದ್ದಾರೆ.

