ಸೋಲು-ಗೆಲುವು ಸಮವಾಗಿ ಸ್ವೀಕರಿಸಿ

Contributed byrajeshinamadar7@gmail.com|Vijaya Karnataka

ತಾಳಿಕೋಟೆಯ ಖಾಸ್ಗತೇಶ್ವರ ಮಹಾವಿದ್ಯಾಲಯದಲ್ಲಿ ಕುಸ್ತಿ ಪಂದ್ಯಾವಳಿ ನಡೆಯಿತು. ಕರ್ನಾಟಕ ವಿಶ್ವವಿದ್ಯಾಲಯದ ನಿವೃತ್ತ ಕುಲಪತಿ ಡಾ. ಬಿ.ಎಂ. ಪಾಟೀಲ ಅವರು ಪಂದ್ಯಾವಳಿಯನ್ನು ಉದ್ಘಾಟಿಸಿದರು. ಬಾಲ್ಯದಿಂದ ಬೆಳೆಸಿದ ಆಸಕ್ತಿಯನ್ನು ಶಿಕ್ಷಕರ ಮಾರ್ಗದರ್ಶನದಲ್ಲಿ ಮುಂದುವರಿಸಿ ಸಾಧನೆ ಮಾಡಬೇಕು. ಸೋಲು ಗೆಲುವು ಎರಡನ್ನೂ ಸಮನಾಗಿ ಸ್ವೀಕರಿಸುವಂತೆ ಅವರು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು. ಈ ಸಂದರ್ಭದಲ್ಲಿ ಹಲವು ಗಣ್ಯರು ಉಪಸ್ಥಿತರಿದ್ದರು.

accept wins and losses equally inauguration of wrestling championship

ಸೋಲು-ಗೆಲುವು ಸಮವಾಗಿ ಸ್ವೀಕರಿಸಿ

ವಿಕ ಸುದ್ದಿಲೋಕ ತಾಳಿಕೋಟೆ

‘‘ಬಾಲ್ಯಾವಸ್ಥೆಯಲ್ಲಿಮೂಡಿದ ಆಸಕ್ತಿಯನ್ನು ಪ್ರೌಢಾವಸ್ಥೆ ಮತ್ತು ಯವ್ವನಾಸ್ಥೆವರೆಗೂ ಶಿಕ್ಷಕರ ಮಾರ್ಗದರ್ಶನದಲ್ಲಿಆಟವಾಡಿ ಸಾಧನೆ ಮಾಡಿ. ಸೋಲು-ಗೆಲುವು ಎರಡನ್ನೂ ಸಮನಾಗಿ ಸ್ವೀಕರಿಸಿ,’’ಎಂದು ಕರ್ನಾಟಕ ವಿಶ್ವವಿದ್ಯಾಲಯದ ನಿವೃತ್ತ ಕುಲಪತಿ ಡಾ. ಬಿ.ಎಂ. ಪಾಟೀಲ ಹೇಳಿದರು.

ಪಟ್ಟಣದ ಖಾಸ್ಗತೇಶ್ವರ ಕಲಾ, ವಾಣಿಜ್ಯ ಮತ್ತು ವಿಜ್ಞಾನ ಮಹಾವಿದ್ಯಾಲಯ, ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಆಶ್ರಯದಲ್ಲಿ2025-26ನೇ ಸಾಲಿನ ಪುರುಷ ಮತ್ತು ಮಹಿಳೆಯರ ಕುಸ್ತಿ ಪಂದ್ಯಾವಳಿ ಉದ್ಘಾಟಿಸಿ ಅವರು ಮಾತನಾಡಿದರು.

ವಿವಿ ದೈಹಿಕ ಶಿಕ್ಷಣ ನಿರ್ದೇಶಕ ಡಾ.ರವಿ ಗೋಲಾ, ಮಹಾವಿದ್ಯಾಲಯದ ಅಧ್ಯಕ್ಷ ವಿ.ಸಿ.ಹಿರೇಮಠ ಮಾತನಾಡಿದರು.

ವೀರಶೈವ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ಎಮ್ .ಎಸ್ .ಸರಶೆಟ್ಟಿ, ಸಹಕಾರ್ಯದರ್ಶಿ ಕೆ.ಎಸ್ .ಮುರಾಳ, ಮಹಿಳಾ ಪದವಿ ಪೂರ್ವ ಕಾಲೇಜಿನ ಚೇರಮನ್ ಕೆ.ಸಿ.ಸಜ್ಜನ, ಐ.ಬಿ.ಬಿಳೆಭಾವಿ, ನಿರ್ದೇಶಕ ಸಿ.ಆರ್ .ಕತ್ತಿ ಇದ್ದರು.

ಪೋಟೊ

ತಾಳಿಕೋಟೆ ಪಟ್ಟಣದ ಖಾಸ್ಗತೇಶ್ವರ ಕಲಾ, ವಾಣಿಜ್ಯ ಮತ್ತು ವಿಜ್ಞಾನ ಮಹಾವಿದ್ಯಾಲಯದಲ್ಲಿಕುಸ್ತಿ ಪಂದ್ಯಾವಳಿ ನಡೆಯಿತು.