Attempt To Smuggle Gold Worth 1 Crore Failed At Kozhikode Airport
ಕೋಝಿಕ್ಕೋಡ್ ವಿಮಾನ ನಿಲ್ದಾಣದಲ್ಲಿ 1 ಕೋಟಿ ರೂ. ಮೌಲ್ಯದ ಚಿನ್ನ ಕಳ್ಳಸಾಗಣೆ ಯತ್ನ ವಿಫಲ: ಪ್ರಯಾಣಿಕನ ವಶಕ್ಕೆ
Vijaya Karnataka•
Subscribe
ಕೋಝಿಕ್ಕೋಡ್ ವಿಮಾನ ನಿಲ್ದಾಣದಲ್ಲಿ 1 ಕೋಟಿ ರೂ. ಮೌಲ್ಯದ ಚಿನ್ನ ಕಳ್ಳಸಾಗಣೆ ಯತ್ನ ವಿಫಲವಾಗಿದೆ. ಮಸ್ಕಟ್‌ನಿಂದ ಬಂದ ನೌಫಲ್ ಪುಥನ್‌ಕೋಟ್ಟು ಎಂಬಾತನ ಒಳಉಡುಪಿನಲ್ಲಿ ಚಿನ್ನದ ಗಟ್ಟಿಗಳನ್ನು ಬಚ್ಚಿಟ್ಟಿದ್ದನ್ನು ಕಸ್ಟಮ್ಸ್ ಅಧಿಕಾರಿಗಳು ಪತ್ತೆ ಮಾಡಿದ್ದಾರೆ. ಈತನನ್ನು ವಶಕ್ಕೆ ಪಡೆದು ಹೆಚ್ಚಿನ ವಿಚಾರಣೆ ನಡೆಸಲಾಗುತ್ತಿದೆ. ಚಿನ್ನದ ಮೂಲ ಮತ್ತು ಯಾರಿಗೆ ತಲುಪಿಸಬೇಕಿತ್ತು ಎಂಬ ಬಗ್ಗೆ ತನಿಖೆ ನಡೆಯುತ್ತಿದೆ.
ಕಾಸರಗೋಡು: ಶುಕ್ರವಾರದಂದು ಕಲ್ಲಿಕೋಟೆ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸುಮಾರು 1 ಕೋಟಿ ರೂಪಾಯಿ ಮೌಲ್ಯದ ಚಿನ್ನವನ್ನು ಕಳ್ಳಸಾಗಣೆ ಮಾಡಲು ಯತ್ನಿಸಿದ ಪ್ರಯಾಣಿಕನೊಬ್ಬನನ್ನು ಕಸ್ಟಮ್ಸ್ ತಡೆಗಟ್ಟುವ ಇಲಾಖೆಯ ಅಧಿಕಾರಿಗಳು ಹಿಡಿದಿದ್ದಾರೆ.
ಮಸ್ಕಟ್ ನಿಂದ Salam Air ವಿಮಾನ OV 773 ರಲ್ಲಿ ಆಗಮಿಸಿದ್ದ ನೌಫಲ್ ಪುಥನ್ ಕೋಟ್ಟು ಎಂಬಾತನ ಒಳಉಡುಪಿನಲ್ಲಿ 1000 ಗ್ರಾಂ ತೂಕದ ಎರಡು ಚಿನ್ನದ ಗಟ್ಟಿಗಳನ್ನು ಬಚ್ಚಿಟ್ಟಿದ್ದನ್ನು ಅಧಿಕಾರಿಗಳು ಪತ್ತೆ ಮಾಡಿದ್ದಾರೆ. ಈತ ಕುತ್ತಿಪುರಂನ ನಡುಪಟ್ಟಂ ನಿವಾಸಿಯಾಗಿದ್ದಾನೆ.ಈ ಚಿನ್ನದ ಗಟ್ಟಿಗಳನ್ನು ಅತ್ಯಂತ ಹುಷಾರಾಗಿ ಒಳಉಡುಪಿನಲ್ಲಿ ಬಚ್ಚಿಟ್ಟು ದೇಶಕ್ಕೆ ತರಲು ಯತ್ನಿಸಿದ್ದ. ಆದರೆ ಕಸ್ಟಮ್ಸ್ ಅಧಿಕಾರಿಗಳ ಕಣ್ಣು ತಪ್ಪಿಸಿಕೊಳ್ಳಲು ಸಾಧ್ಯವಾಗಲಿಲ್ಲ. ವಿಮಾನ ನಿಲ್ದಾಣದಲ್ಲಿ ನಿರಂತರ ತಪಾಸಣೆ ನಡೆಸುತ್ತಿದ್ದ ಅಧಿಕಾರಿಗಳು ಈತನನ್ನು ವಶಕ್ಕೆ ಪಡೆದು ಹೆಚ್ಚಿನ ವಿಚಾರಣೆ ನಡೆಸುತ್ತಿದ್ದಾರೆ. ಈ ಚಿನ್ನದ ಮೂಲ ಮತ್ತು ಯಾರಿಗೆ ತಲುಪಿಸಬೇಕಿತ್ತು ಎಂಬ ಬಗ್ಗೆ ತನಿಖೆ ನಡೆಯುತ್ತಿದೆ.
Kannada News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್ ಮಾಡಿಕೊಳ್ಳಿ ಹಾಗೂ ರಿಪೋರ್ಟ್ ಕಳಿಸಿಲೇಟೆಸ್ಟ್ ನ್ಯೂಸ್ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್ ಲೈಕ್ ಮಾಡಿರಿ