(ಪ್ರಮುಖ) ಕಾನೂನು ವಿವಿ ಕೋರ್ಸ್ ಗಳ ಪ್ರವೇಶ ಶುಲ್ಕ ಹೆಚ್ಚಳ ಆದೇಶ ರದ್ದು:

Contributed bysrikanth.g@timesgroup.com|Vijaya Karnataka
Subscribe

ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯದ 5 ಮತ್ತು 3 ವರ್ಷದ ಕೋರ್ಸ್‌ಗಳ ಪ್ರವೇಶ ಶುಲ್ಕ ಹೆಚ್ಚಳ ಆದೇಶವನ್ನು ಹೈಕೋರ್ಟ್ ರದ್ದು ಮಾಡಿದೆ. ಸಂಗ್ರಹಿಸಿದ ಹೆಚ್ಚುವರಿ ಶುಲ್ಕವನ್ನು ಎರಡು ತಿಂಗಳೊಳಗೆ ವಿದ್ಯಾರ್ಥಿಗಳಿಗೆ ಮರುಪಾವತಿಸುವಂತೆ ನ್ಯಾಯಾಲಯ ನಿರ್ದೇಶನ ನೀಡಿದೆ. ಶಾಸನಬದ್ಧ ಅಧಿಕಾರವಿಲ್ಲದೆ ಶುಲ್ಕ ಹೆಚ್ಚಳ ಮಾಡಿದ್ದು ಮಾನ್ಯವಾಗುವುದಿಲ್ಲ ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿದೆ. ಈ ಆದೇಶದಿಂದ ಸಾವಿರಾರು ವಿದ್ಯಾರ್ಥಿಗಳಿಗೆ ಅನುಕೂಲವಾಗಲಿದೆ.

high court major order for law students refund of entrance fee

ಎರಡು ತಿಂಗಳಲ್ಲಿಹೆಚ್ಚುವರಿ ಶುಲ್ಕ ಮರುಪಾವತಿಗೆ ಹೈಕೋರ್ಟ್ ನಿರ್ದೇಶನ

ವಿಕ ಸುದ್ದಿಲೋಕ ಬೆಂಗಳೂರು

ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯದಲ್ಲಿ(ಕೆಎಸ್ ಎಲ್ ಯು) 5 ಮತ್ತು 3 ವರ್ಷದ ಕೋರ್ಸ್ ಗಳ ಪ್ರವೇಶ ಶುಲ್ಕ ಹೆಚ್ಚಿಸಿ ಹೊರಡಿಸಿದ್ದ ಆದೇಶವನ್ನು ರದ್ದುಪಡಿಸಿರುವ ಹೈಕೋರ್ಟ್ , ಸಂಗ್ರಹ ಮಾಡಿರುವ ಹೆಚ್ಚುವರಿ ಶುಲ್ಕವನ್ನು ಎರಡು ತಿಂಗಳೊಳಗೆ ಎಲ್ಲಾವಿದ್ಯಾರ್ಥಿಗಳಿಗೆ ಮರುಪಾವತಿಸುವಂತೆ ವಿಶ್ವವಿದ್ಯಾಲಯಕ್ಕೆ ನಿರ್ದೇಶನ ನೀಡಿದೆ.

ಕೆಎಸ್ ಎಲ್ ಯು ಸಂಯೋಜಿತ ಕಾಲೇಜುಗಳಿಗೆ 2025-26ನೇ ಸಾಲಿನ ವಿವಿಧ ಕೋರ್ಸ್ ಗಳ ಪ್ರವೇಶ ಶುಲ್ಕ ಪರಿಷ್ಕರಿಸಿ 2025ರ ಜು.2ರಂದು ಹೊರಡಿಸಿದ್ದ ಆದೇಶ ರದ್ದು ಕೋರಿ ಬೆಂಗಳೂರಿನ ಕೆ.ಎನ್ .ಪ್ರಣವ ಸೇರಿ 6 ಮಂದಿ ಕಾನೂನು ವಿದ್ಯಾರ್ಥಿಗಳು ಸಲ್ಲಿಸಿದ್ದ ಮೂರು ಪ್ರತ್ಯೇಕ ಅರ್ಜಿಗಳನ್ನು ಪುರಸ್ಕರಿಸಿರುವ ನ್ಯಾಯಮೂರ್ತಿ ಆರ್ . ದೇವದಾಸ್ ಅವರಿದ್ದ ಏಕಸದಸ್ಯ ಪೀಠ ಈ ಆದೇಶ ಮಾಡಿದೆ.

ಅಲ್ಲದೆ, ಆದೇಶದ ಅನುಸಾರ ಸಂಗ್ರಹಿಸಿರುವ ಹೆಚ್ಚುವರಿ ಶುಲ್ಕದ ಮೊತ್ತವನ್ನು ಸಾಧ್ಯವಾದಷ್ಟೂ ಶೀಘ್ರ ನ್ಯಾಯಾಲಯದ ಆದೇಶ ಪ್ರತಿ ದೊರೆತ ಎರಡು ತಿಂಗಳೊಳಗೆ ಹಿಂದಿರುಗಿಸಬೇಕು. ಸುತ್ತೋಲೆ ಪ್ರಶ್ನಿಸಿ ಈ ನ್ಯಾಯಾಲಯದ ಮುಂದೆ ಬಾರದವರೂ ಸೇರಿ ಎಲ್ಲವಿದ್ಯಾರ್ಥಿಗಳಿಗೂ ಹೆಚ್ಚುವರಿ ಶುಲ್ಕದ ಹಣವನ್ನು ಮರುಪಾವತಿಸಬೇಕು ಎಂದು ನ್ಯಾಯಾಲಯ ನಿರ್ದೇಶಿಸಿದೆ.

‘ಧಿ‘ಧಿಶಾಸನಾತ್ಮಕವಾಗಿ ಸೂಚಿಸಲಾದ ಶುಲ್ಕ ವಿಧಿಸಲು ಮತ್ತು ಸಂಗ್ರಹಿಸಲು ವಿಶ್ವವಿದ್ಯಾಲಯದ ಸಿಂಡಿಕೇಟ್ ಅಧಿಕಾರ ಹೊಂದಿದೆಯಾದರೂ ಅಂತಹ ಯಾವುದೇ ಶಾಸನಗಳ ಅನುಪಸ್ಥಿತಿಯಲ್ಲಿಶುಲ್ಕ ಹೆಚ್ಚಳ ಮಾಡುವ ಸಂಬಂಧ ಹೊರಡಿಸಿರುವ ಆಕ್ಷೇಪಾರ್ಹ ಆದೇಶವು ಮಾನ್ಯವಾಗುವುದಿಲ್ಲ. ಈ ಎಲ್ಲಕಾರಣಗಳಿಂದಾಗಿ 2025ರ ಜು.2ರಂದು ವಿಶ್ವವಿದ್ಯಾಲಯ ಹೊರಡಿಸಿರುವ ಆದೇಶ ರದ್ದುಪಡಿಸಲಾಗಿದೆ,’ಧಿ’ ಎಂದು ನ್ಯಾಯಾಲಯ ಆದೇಶಿಸಿದೆ.

ಕೆಎಸ್ ಎಲ್ ಯು 2025-26ನೇ ಸಾಲಿನ ವಿವಿಧ ಕೋರ್ಸ್ ಗಳಿಗೆ ಪ್ರಥಮ ವರ್ಷ ಹಾಗೂ ನಂತರದ ವರ್ಷಗಳಿಗೆ ಪ್ರವೇಶ ಶುಲ್ಕ ಪರಿಷ್ಕರಿಸಿ 2025ರ ಜು. 2ರಂದು ಆದೇಶ ಹೊರಡಿಸಿದೆ. ಅದರ ಪ್ರಕಾರ, ಸಾಮಾನ್ಯ ವರ್ಗದ ವಿದ್ಯಾರ್ಥಿಗಳಿಗೆ 6,580 ರೂ. ಪ್ರವೇಶ ಶುಲ್ಕ ನಿಗದಿಪಡಿಸಲಾಗಿದ್ದು, ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ 4,820ರಿಂದ 5,180 ರೂ.ವರೆಗೆ ಪ್ರವೇಶ ಶುಲ್ಕ ನಿಗದಿಪಡಿಸಲಾಗಿದೆ. ಈ ಶುಲ್ಕವು ಹಿಂದಿನ ಶೈಕ್ಷಣಿಕ ಸಾಲುಗಳಿಗೆ ಹೋಲಿಸಿದರೆ ಅತ್ಯಧಿಕವಾಗಿದೆ. ಶುಲ್ಕ ಪರಿಷ್ಕರಿಸುವಾಗ ವಿದ್ಯಾರ್ಥಿಗಳೊಂದಿಗೆ ಸಮಾಲೋಚಿಸಿ, ಅವರ ಪ್ರತಿಕ್ರಿಯೆ ಪಡೆದುಕೊಳ್ಳದೇ ಏಕಪಕ್ಷೀಯವಾಗಿ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಅರ್ಜಿಯಲ್ಲಿಆಕ್ಷೇಪಿಸಲಾಗಿತ್ತು.

ಅಲ್ಲದೆ, ಶುಲ್ಕ ಪರಿಷ್ಕರಣೆಯು ಶೈಕ್ಷಣಿಕ ಮಂಡಳಿಯ 37ನೇ ಸಭೆಯಲ್ಲಿಅನುಮೋದಿಸಲ್ಪಟ್ಟಿದೆ ಎಂದು ಆದೇಶದಲ್ಲಿಹೇಳಲಾಗಿದೆ. ಆದರೆ, ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯ ಕಾಯಿದೆ-2009ರ ಸೆಕ್ಷನ್ 34ರ ಪ್ರಕಾರ, ಶುಲ್ಕ ನಿಗದಿ, ಸಂಗ್ರಹ ಅಥವಾ ಪರಿಷ್ಕರಿಸಲು ಯಾವುದೇ ಶಾಸನಬದ್ಧ ಅಧಿಕಾರವನ್ನು ಶೈಕ್ಷಣಿಕ ಮಂಡಳಿಯಾಗಲಿ, ಕುಲಪತಿಯಾಗಲಿ ಹೊಂದಿಲ್ಲ. ವಿದ್ಯಾರ್ಥಿಗಳಿಗೆ ಯಾವುದೇ ಸೇವೆ ಅಥವಾ ಪ್ರಯೋಜನ ಒದಗಿಸದೆಯೇ ಈ ರೀತಿಯ ಶುಲ್ಕಗಳನ್ನು ವಿಧಿಸುವುದು ಕಾನೂನುಬಾಹಿರ ಕ್ರಮವಾಗಿದೆ. ಆದ್ದರಿಂದ, ಶುಲ್ಕ ಪರಿಷ್ಕರಣೆ ಸಂಬಂಧ ಕೆಎಸ್ ಎಲ್ ಯು ಹೊರಡಿಸಿರುವ ಅದೇಶ ರದ್ದುಪಡಿಸಬೇಕು ಎಂದು ಅಧಿರ್ಜಿಧಿದಾಧಿರರು ಕೋರಿದ್ದರು.

ಸಂಬಂಧಿತ ಸುದ್ದಿ

Kannada News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ