ಸವಣೂರು: ಕರ್ನಾಟಕ ವಿಧಾನ ಪರಿಷತ್ತಿನ ಪಶ್ಚಿಮ ಪದವೀಧರರ ಕ್ಷೇತ್ರದ ಮತದಾರರ ಪಟ್ಟಿ ತಯಾರಿಕೆ ಪ್ರಕ್ರಿಯೆ ಆರಂಭವಾಗಿದ್ದು ಕೂಡಲೇ ಪದವೀಧರರು ಸೂಕ್ತ ದಾಖಲಾತಿಗಳನ್ನು ನೀಡಿ ನೋಂದಣಿ ಮಾಡಿಕೊಳ್ಳುವಂತೆ ಬಿಜೆಪಿ ಮಹಿಳಾ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಡಾ. ಶೋಭಾ ಎಸ್ . ನಿಸ್ಸೀಮಗೌಡ್ರ ಮತದಾರರಲ್ಲಿಮನವಿ ಮಾಡಿದ್ದಾರೆ.
ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಪಶ್ಚಿಮ ಪದವೀಧರರ ಕ್ಷೇತ್ರದ ವ್ಯಾಪ್ತಿಯಲ್ಲಿಬರುವ ಧಾರವಾಡ, ಗದಗ, ಹಾವೇರಿ ಮತ್ತು ಕಾರವಾರ ನಾಲ್ಕು ಜಿಲ್ಲೆಗಳು ಒಳಪಟ್ಟಿದ್ದು ಮತದಾರರರ ಪಟ್ಟಿಯಲ್ಲಿಹೆಸರನ್ನು ಸೇರಿಸುವ ಸಲುವಾಗಿ ಮತದಾರರರ ನೋಂದಣಿಗಾಗಿ ನಮೂನೆ 18 ರಲ್ಲಿನ ಅರ್ಜಿಯನ್ನು ಭರ್ತಿಮಾಡಿ ನವೆಂಬರ 6 ಒಳಗಾಗಿ ಸಂಬಂದಪಟ್ಟ ತಾಲೂಕು ತಹಸೀಲ್ದಾರ್ ಕಾರ್ಯಾಲಯದ ಚುನಾವಣಾಧಿಕಾರಿಗಳಿಗೆ ತಲುಪಿಸಲು ಮನವಿ ಮಾಡಿದ್ದಾರೆ.
ಪದವೀಧರ ಕ್ಷೇತ್ರದ ಮತದಾರರರ ಪಟ್ಟಿಯನ್ನು ಪ್ರತಿ ಚುನಾವಣೆಯಲ್ಲಿಮೊದಲು ಹೊಸದಾಗಿ ತಯಾರಿಸಬೇಕಾಗಿದ್ದು ಕ್ಷೇತ್ರಕ್ಕೆ ಸಂಬಂಧಿಸಿದಂತೆ ಅಸ್ತಿತ್ವದಲ್ಲಿರುವ ಮತದಾರರರ ಪಟ್ಟಿಯಲ್ಲಿರುವ ಎಲ್ಲಾವ್ಯಕ್ತಿಗಳೂ ಸಹ ನಿಗದಿತ ನಮೂನೆಯಲ್ಲಿಹೊಸದಾಗಿ ಅರ್ಜಿಗಳನ್ನು ಸಲ್ಲಿಸಬೇಕಾಗಿದೆ. ಮತದಾರರಾಗಿ ನೋಂದಣಿಯಾಗಲು ಭಾರತದಲ್ಲಿರುವ ಯಾವುದಾದರೊಂದು ವಿಶ್ವವಿದ್ಯಾಲಯದ ಪದವೀಧರನಾಗಿರುವ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರುವ ಪ್ರತಿಯೊಬ್ಬ ವ್ಯಕ್ತಿಯೂ ಮತದಾರರರ ಪಟ್ಟಿಯಲ್ಲಿತನ್ನ ಹೆಸರು ಸೇರಿಸಲು ಅರ್ಹನಾಗಿರುತ್ತಾನೆ ಎಂದು ತಿಳಿಸಿದ್ದಾರೆ.
ಅರ್ಹ ಪದವೀಧರ ವ್ಯಕ್ತಿಗಳು ತಮ್ಮ ಹೆಸರುಗಳನ್ನು ನೋಂದಾಯಿಸಲು ನಿಗದಿತ ನಮೂನೆ-18ರ ಅರ್ಜಿಯೊಂದಿಗೆ ಪದವಿ ಪ್ರಮಾಣ ಪತ್ರದ ಪ್ರತಿ, ಅಂಕ ಪಟ್ಟಿಯ ಪ್ರತಿಯನ್ನು ಸ್ವಯಂ ದೃಢೀಕರಿಸಿ ಮತ್ತು ಗೆಜೆಟೇಡ್ ಅಧಿಕಾರಿಗಳಿಂದ ದೃಢೀಕರಿಸಿ ಅಡಕದೊಂದಿಗೆ ಸಲ್ಲಿಸಬೇಕು ಮಾಹಿತಿ ಮತ್ತು ಮಾರ್ಗದರ್ಶನ ನೀಡಲು ಕ್ಷೇತ್ರ ವ್ಯಾಪ್ತಿಯ ಪ್ರತಿಯೊಂದು ಜಿಲ್ಲೆಯಲ್ಲಿಬಿಜೆಪಿ ಕಚೇರಿ ಹಾಗೂ ತಾಲೂಕು ಮಟ್ಟದ ಪದಾಧಿಕಾರಿಗಳನ್ನು ಸಂಪರ್ಕ ಮಾಡಬಹುದಾಗಿದೆ ಎಂದು ತಿಳಿಸಿದ್ದಾರೆ.
ಫೋಟೋ 31ಎಸ್ ವಿಆರ್ 2
ಡಾ.ಶೋಭಾ ಎಸ್ . ನಿಸ್ಸೀಮಗೌಡ್ರ

