ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಿಗೆ ಕೆ.ಶಿವಕುಮಾರ್ ಅಭಿನಂದನೆ

Contributed bykeshavmurthy8@gmail.com|Vijaya Karnataka
Subscribe

ಮಾಧ್ಯಮ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದ ಹಿರಿಯ ಪತ್ರಕರ್ತರಾದ ಅಂಶಿ ಪ್ರಸನ್ನಕುಮಾರ್‌, ಬಿ.ಎಂ.ಹನೀಫ್‌, ಎಂ.ಸಿದ್ದಾರಾಜು, ಕೆ.ಸುಬ್ರಹ್ಮಣ್ಯ ಅವರಿಗೆ ಕೆ.ಶಿವಕುಮಾರ್‌ ಅಭಿನಂದನೆ ಸಲ್ಲಿಸಿದ್ದಾರೆ. ವಸ್ತುನಿಷ್ಠ ವರದಿಗಾರಿಕೆ ಮೂಲಕ ವಿಶ್ವಾಸಾರ್ಹ ಸುದ್ದಿಗಳನ್ನು ನೀಡುವ ಪತ್ರಕರ್ತರ ನೈತಿಕ ಹೊಣೆಗಾರಿಕೆಯನ್ನು ಅವರು ಶ್ಲಾಘಿಸಿದ್ದಾರೆ. ಪ್ರಶಸ್ತಿ ಪುರಸ್ಕೃತರು ತಮ್ಮ ವೃತ್ತಿ ಬದುಕಿನಲ್ಲಿ ನೈತಿಕತೆ ಕಾಪಾಡಿಕೊಂಡು ಬಂದಿದ್ದಾರೆ ಎಂದು ತಿಳಿಸಿದ್ದಾರೆ.

k shivakumar congratulates state festival awardees

ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಿಗೆ

ಕೆ.ಶಿವಕುಮಾರ್ ಅಭಿನಂದನೆ

ವಿಕ ಸುದ್ದಿಲೋಕ ಮೈಸೂರು

ಮಾಧ್ಯಮ ಕ್ಷೇತ್ರದಲ್ಲಿಗಣನೀಯ ಸೇವೆ ಸಲ್ಲಿಸಿ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಗೆ ಭಾಜನರಾಗಿರುವ ಹಿರಿಯ ಪತ್ರಕರ್ತ ಅಂಶಿ ಪ್ರಸನ್ನಕುಮಾರ್ , ಬಿ.ಎಂ.ಹನೀಫ್ , ಎಂ.ಸಿದ್ದಾರಾಜು, ಕೆ.ಸುಬ್ರಹ್ಮಣ್ಯ ಅವರಿಗೆ ಹಿರಿಯ ಪತ್ರಕರ್ತ, ವಿಧಾನ ಪರಿಷತ್ ಸದಸ್ಯ ಕೆ.ಶಿವಕುಮಾರ್ ಅಭಿನಂದನೆ ಸಲ್ಲಿಸಿದ್ದಾರೆ.

‘‘ಮಾಧ್ಯಮ ಕ್ಷೇತ್ರದಲ್ಲಿರುವ ಅನೇಕ ಸವಾಲುಗಳ ನಡುವೆ ಯಾವುದೇ ಪೂರ್ವಗ್ರಹವಿಲ್ಲದೆ, ವಸ್ತುನಿಷ್ಠ ವರದಿಗಾರಿಕೆ ಮೂಲಕ ವಿಶ್ವಾಸಾರ್ಹ ಮತ್ತು ನಿಷ್ಪಕ್ಷಪಾತ ಸುದ್ದಿಗಳನ್ನು ಸಾರ್ವಜನಿಕರ ಮುಂದಿಡುವುದು ಪತ್ರಕರ್ತನ ನೈತಿಕ ಹೊಣೆಗಾರಿಕೆಯಾಗಿದೆ. ಈ ನಿಟ್ಟಿನಲ್ಲಿಪ್ರಶಸ್ತಿ ದೊರಕಿರುವ ಹಿರಿಯ ಪತ್ರಕರ್ತರೆಲ್ಲರೂ ತಮ್ಮ ವೃತ್ತಿ ಬದುಕಿನುದ್ದಕ್ಕೂ ನೈತಿಕತೆ ಕಾಪಾಡಿಕೊಂಡು ಬಂದಿದ್ದಾರೆ,’’ ಎಂದು ಪ್ರಕಟಣೆಯಲ್ಲಿತಿಳಿಸಿದ್ದಾರೆ.

ಸಂಬಂಧಿತ ಸುದ್ದಿ

Kannada News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ