ಪದವೀಧರ ಮತದಾರರ ಪಟ್ಟಿ ಸೇರ್ಪಡೆಗೆ ನ.6 ಕೊನೆಯ ದಿನ

Contributed bytsdayananda@gmail.com|Vijaya Karnataka

ತುಮಕೂರಿನಲ್ಲಿ ಪದವೀಧರ ಮತದಾರರ ಪಟ್ಟಿಗೆ ಸೇರಲು ನವೆಂಬರ್ 6 ಕೊನೆಯ ದಿನವಾಗಿದೆ. 2022ರ ನವೆಂಬರ್ 1ರೊಳಗೆ ಪದವಿ ಪಡೆದವರು ಅರ್ಜಿ ಸಲ್ಲಿಸಬಹುದು. ಜಿಲ್ಲಾಧಿಕಾರಿ ಶುಭಾ ಕಲ್ಯಾಣ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಯುವ ಪದವೀಧರರು ಮತದಾನದಲ್ಲಿ ಪಾಲ್ಗೊಳ್ಳಲು ಅರಿವು ಮೂಡಿಸಲಾಗುತ್ತಿದೆ. ಅರ್ಹ ಮತದಾರರು ತಮ್ಮ ಹಕ್ಕನ್ನು ಬಳಸಿಕೊಳ್ಳಬೇಕು.

last day to register for graduate voter list is nov 6

ತುಮಕೂರು: ಪದವೀಧರ ಮತದಾರರ ಪಟ್ಟಿಗೆ 2022ರ ನವೆಂಬರ್ 1ರೊಳಗೆ ಪದವಿ ತೇರ್ಗಡೆಯಾದ ಪದವೀಧರರು ಸೇರ್ಪಡೆ ಮಾಡಿಕೊಳ್ಳಲು ನವೆಂಬರ್ 6 ಕೊನೆಯ ದಿನವಾಗಿರುತ್ತದೆ ಎಂದು ಜಿಲ್ಲಾಧಿಕಾರಿ ಶುಭಾ ಕಲ್ಯಾಣ್ ತಿಳಿಸಿದರು.

ಗುರುವಾರ ಜಿಲ್ಲಾಧಿಕಾರಿ ಕಚೇರಿಯ ಕೇಸ್ವಾನ್ ಸಭಾಂಗಣದಲ್ಲಿಸಂಬಂಧಿಸಿದ ಇಲಾಖೆಗಳೊಂದಿಗೆ ಸಭೆ ನಡೆಸಿ ಮಾತನಾಡಿದ ಅವರು, ಇನ್ನೂ ಪದವೀಧರ ಮತದಾರರ ಪಟ್ಟಿಗೆ ಹೆಸರು ಸೇರಿಸದ ಮತದಾರರಿಂದ ನಿಗದಿತ ಅವಧಿಯೊಳಗೆ ಭರ್ತಿ ಮಾಡಿದ ನಮೂನೆ-18ರ ಅರ್ಜಿಯೊಂದಿಗೆ ಪದವಿ ಪ್ರಮಾಣ ಪತ್ರದ ನಕಲು, ಗುರುತಿನ ದಾಖಲೆ ಹಾಗೂ ಇತ್ತೀಚಿನ 2 ಭಾವಚಿತ್ರವನ್ನು ಪಡೆದು ಮತದಾರರ ಪಟ್ಟಿಗೆ ಸೇರ್ಪಡೆಗೆ ಕ್ರಮವಹಿಸಬೇಕೆಂದು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಪದವೀಧರ ಸ್ಥಾನಗಳಿಗೆ ನಡೆಯುವ ಚುನಾವಣೆಯಲ್ಲಿಯುವ ಪದವೀಧರರ ಭಾಗವಹಿಸುವಿಕೆಯನ್ನು ಹೆಚ್ಚಿಸುವ ಉದ್ದೇಶದಿಂದ ಜಾಗೃತಿ ಕಾರ್ಯಕ್ರಮಗಳನ್ನು ಕೈಗೊಳ್ಳುವ ಮೂಲಕ ಇನ್ನೂ ಪದವೀಧರ ಮತದಾರರ ಪಟ್ಟಿಗೆ ಹೆಸರು ನೋಂದಾಯಿಸದವರಿಂದ ಅರ್ಜಿ ಪಡೆಯಬೇಕು ಹಾಗೂ ಪದವೀಧರ ಮತದಾರರು ತಮ್ಮ ಅಮೂಲ್ಯವಾದ ಮತದಾನದ ಹಕ್ಕನ್ನು ಬಳಸಿಕೊಳ್ಳುವಂತೆ ಅರಿವು ಮೂಡಿಸಬೇಕು ಎಂದು ಹೇಳಿದರು.

ಸಭೆಯಲ್ಲಿಅಪರ ಜಿಲ್ಲಾಧಿಕಾರಿ ಡಾ: ಎನ್ . ತಿಪ್ಪೇಸ್ವಾಮಿ, ತಹಸೀಲ್ದಾರ್ ರಾಜೇಶ್ವರಿ, ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

ಪೊಟೋ30ತುಮಕೂರು1: ತುಮಕೂರಿನಲ್ಲಿಗುರುವಾರ ಜಿಲ್ಲಾಧಿಕಾರಿ ಕಚೇರಿಯ ಕೇಸ್ವಾನ್ ಸಭಾಂಗಣದಲ್ಲಿಜಿಲ್ಲಾಧಿಕಾರಿ ಶುಭಾ ಕಲ್ಯಾಣ್ ಸಭೆ ನಡೆಸಿದರು.