ಡಿಸಿಸಿ ಬ್ಯಾಂಕ್ ನಿರ್ದೇಶಕರಿಂದ ಸಚಿವ ಸಿಆರ್ ಎಸ್ ಗೆ ಅಭಿನಂದನೆ
ವಿಕ ಸುದ್ಧಿಲೋಕ ಮದ್ದೂರು
ಜಿಲ್ಲೆಯಲ್ಲಿಕಾಂಗ್ರೆಸ್ ಸಂಘಟನೆ, ಬಲವರ್ಧನೆ ಜತೆಗೆ ಸ್ಥಳೀಯ ಸಂಸ್ಥೆಗಳ ಚುನಾವಣೆಗಳಲ್ಲಿಪಕ್ಷದ ಬೆಂಬಲಿತ ಅಭ್ಯರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿಗೆಲುವು ಸಾಧಿಸಲು ಜಿಲ್ಲಾಉಸ್ತುವಾರಿ ಸಚಿವ ಎನ್ .ಚಲುವರಾಯಸ್ವಾಮಿಯವರ ಕಾರ್ಯತಂತ್ರಕ್ಕೆ ಉತ್ತಮ ಫಲಿತಾಂಶ ಲಭಿಸಿದೆ ಎಂದು ನಾಗಮಂಗಲ ಗ್ರಾಮಾಂತರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೆ.ಎನ್ .ದಿವಾಕರ್ ತಿಳಿಸಿದರು.
ಡಿ.ಸಿ.ಸಿ ಬ್ಯಾಂಕ್ ಗೆ ನಿರ್ದೇಶಕರಾಗಿ ಆಯ್ಕೆಯಾದವರು ಬೆಂಗಳೂರಿನಲ್ಲಿಜಿಲ್ಲಾಉಸ್ತುವಾರಿ ಸಚಿವ ಎನ್ .ಚಲುವರಾಯಸ್ವಾಮಿ ಅವರನ್ನು ಅಭಿನಂದಿಸಿ ಮಾತನಾಡಿದ ಅವರು,‘‘ಜಿಲ್ಲೆಯ ಸಮಗ್ರ ಅಭಿವೃದ್ಧಿ ಜತೆಗೆ ರೈತರ ಹತ್ತು ಹಲವು ಸಮಸ್ಯೆಗಳನ್ನು ಈಡೇರಿಸುವ ಮೂಲಕ ಜಿಲ್ಲೆಯಲ್ಲಿಶಾಶ್ವತ ಯೋಜನೆಗಳ ಕುರುಹುಗಳನ್ನು ಕೈಗೊಳ್ಳಲಾಗಿದೆ. ಮುಂದಿನ ದಿನಗಳಲ್ಲಿಮತ್ತಷ್ಟು ಯೋಜನೆಗಳ ರೂವಾರಿಯಾಗಲಿದ್ದಾರೆ,’’ ಎಂದು ಬಣ್ಣಿಸಿದರು.
‘‘ಸ್ಥಳೀಯ ಸಂಸ್ಥೆಗಳ ಚುನಾವಣೆ ಮುಂದಿನ ವಿಧಾನಸಭೆ ಮತ್ತು ತಾ.ಪಂ, ಜಿ.ಪಂ. ಚುನಾವಣೆಗಳ ದಿಕ್ಸೂಚಿಯಾಗಲಿದ್ದು , ಡಿ.ಸಿ.ಸಿ ಬ್ಯಾಂಕ್ ಅಧಿಕಾರದ ಚುಕ್ಕಾಣೆ ಹಿಡಿಯಲು ಪ್ರಮುಖ ಕಾರಣರಾಗಿರುವ ಚಲುವರಾಯಸ್ವಾಮಿ ಅವರು ಬ್ಯಾಂಕ್ ನ ಸರ್ವತೋಮುಖ ಅಭಿವೃದ್ಧಿಗೆ ಹಾಗೂ ರೈತಾಪಿ ವರ್ಗದ ಅನುಕೂಲಕ್ಕಾಗಿ ಸರಕಾರದಿಂದ ವಿಶೇಷ ಯೋಜನೆಗಳನ್ನು ಜಾರಿಗೆ ತರಲಿದ್ದಾರೆ,’’ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಡಿ.ಸಿ.ಸಿ. ಬ್ಯಾಂಕ್ ನ ನೂತನ ನಿರ್ದೇಶಕರಾದ ಕೆ.ಸಿ.ಜೋಗಿಗೌಡ, ಪಿ.ಸಂದರ್ಶ, ಚಲುವರಾಜು, ಮನ್ ಮುಲ್ ನಿರ್ದೇಶಕ ಹರೀಶ್ ಬಾಬು ಇತರರಿದ್ದರು.
ಎಂಡಿವೈ31ಎಂಡಿಆರ್ 1ಸಿ
ಜಿಲ್ಲಾಉಸ್ತುವಾರಿ ಸಚಿವ ಎನ್ .ಚಲುವರಾಯಸ್ವಾಮಿ ಅವರನ್ನು ಡಿ.ಸಿ.ಸಿ ಬ್ಯಾಂಕ್ ನ ನೂತನ ನಿರ್ದೇಶಕರಾದ ಕೆ.ಸಿ.ಜೋಗಿಗೌಡ, ಪಿ.ಸಂದರ್ಶ, ಚಲುವರಾಜು ಹಾಗೂ ಮನ್ ಮುಲ್ ನಿರ್ದೇಶಕ ಹರೀಶ್ ಬಾಬು ಅಭಿನಂದಿಸಿದರು.

