ವಿಕ ಸುದ್ದಿಲೋಕ ಧಾರವಾಡ
ಆರ್ .ಎನ್ .ಶೆಟ್ಟಿ ಕ್ರೀಡಾಂಗಣದಲ್ಲಿಜಿಲ್ಲಾಡಳಿತದಿಂದ ನವೆಂಬರ್ 1ರಂದು ಬೆಳಗ್ಗೆ 9ಕ್ಕೆ ಕರ್ನಾಟಕ ರಾಜ್ಯೋತ್ಸವ ಕಾರ್ಯಕ್ರಮವನ್ನು ಅದ್ಧೂರಿಯಾಗಿ ಆಚರಿಸಲಾಗುವುದು.
ಜಿಲ್ಲಾಉಸ್ತುವಾರಿ ಸಚಿವರು ಧ್ವಜಾರೋಹಣ ಮಾಡಲಿದ್ದಾರೆ. ಜಿಲ್ಲೆಯ ಎಲ್ಲಜಿಲ್ಲಾಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಮತ್ತು ಧಾರವಾಡ ಶಹರದ ಎಲ್ಲಸರಕಾರಿ, ಅನುದಾನಿತ, ಅನುದಾನರಹಿತ ಶಾಲೆ, ಕಾಲೇಜು, ಪದವಿ ಕಾಲೇಜು, ವಿಶ್ವವಿದ್ಯಾಲಯಗಳ ವಿದ್ಯಾರ್ಥಿಗಳು, ಶಿಕ್ಷಕರುಗಳು, ಬೋಧಕೇತರ ಅಧಿಕಾರಿ ಮತ್ತು ಸಿಬ್ಬಂದಿಯವರು ಬೆಳಿಗ್ಗೆ 8.30 ರೊಳಗಾಗಿ ಉಪಸ್ಥಿತರಿರುವರು.
ಕಾರ್ಯಕ್ರಮ ನಡೆಯುವ ಸ್ಥಳದಲ್ಲಿಜಂಟಿ ನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಹಾಜರಾತಿಯ ವ್ಯವಸ್ಥೆಯನ್ನು ಕಲ್ಪಸಲಾಗಿದ್ದು, ಹಾಜರಾತಿ ಸಿಬ್ಬಂದಿಯವರು ಇರುವ ಸ್ಥಳದಲ್ಲಿಎಲ್ಲಇಲಾಖೆಗಳ ಅಧಿಕಾರಿ ಮತ್ತು ಸಿಬ್ಬಂದಿಯವರು ಕಡ್ಡಾಯವಾಗಿ ಹಾಜರಾತಿ ದಾಖಲಿಸುವುದು ಹಾಗೂ ಇದನ್ನು ಅತ್ಯಂತ ಕಟ್ಟುನಿಟ್ಟಾಗಿ ಪಾಲನೆ ಮಾಡುವಂತೆ ಸೂಚಿಸಿದೆ.
ಜಿಲ್ಲೆಯ ಎಲ್ಲಇಲಾಖೆಯ ಅಧಿಕಾರಿಗಳು, ಸಿಬ್ಬಂದಿ, ಶಾಲೆ, ಕಾಲೇಜು, ವಿಶ್ವವಿದ್ಯಾಲಯಗಳವರು ಯಾವುದೇ ಸಬೂಬು ಹೇಳದೇ ಕಟ್ಟುನಿಟ್ಟಾಗಿ ಪಾಲನೆ ಮಾಡುವದರ ಜತೆಗೆ ಜಿಲ್ಲಾಡಳಿತದೊಂದಿಗೆ ಸಹಕರಿಸುವಂತೆ ಸೂಚಿಸಿದೆ. ಒಂದು ವೇಳೆ ಇದನ್ನು ಪಾಲನೆ ಮಾಡದೇ ನಿರ್ಲಕ್ಷ್ಯವಹಿಸಿದ್ದು ಕಂಡುಬಂದಲ್ಲಿಅಂತಹ ಅಧಿಕಾರಿ, ಸಿಬ್ಬಂದಿಗಳ ಮೇಲೆ ಶಿಸ್ತುಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾಧಿಕಾರಿ ದಿವ್ಯ ಪ್ರಭು ಸುತ್ತೋಲೆಯಲ್ಲಿತಿಳಿಸಿದ್ದಾರೆ.

