ಬೂದಿಕೋಟೆ: ತಾಲೂಕಿನ ಗಡಿಭಾಗದಲ್ಲಿರುವ ಕಾಮಸಮುದ್ರ ಸರಕಾರಿ ಪದವಿಪೂರ್ವ ಕಾಲೇಜಿನಲ್ಲಿ2025-26ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ85.24% ಫಲಿತಾಂಶ ಬಂದಿದೆ ಎಂದು ಕಾಲೇಜಿನ ಪ್ರಾಂಶುಪಾಲ ಹರೀಶ್ ಹೇಳಿದರು. ತಮಿಳುನಾಡು ಹಾಗೂ ಆಂದ್ರಪ್ರದೇಶಕ್ಕೆ ಹೊಂದಿಕೊಂಡಿರುವ ರಾಜ್ಯದ ಗಡಿಭಾಗದಲ್ಲಿರುವ ಕಾಮಸಮುದ್ರ ಸರಕಾರಿ ಪದವಿಪೂರ್ವ ಕಾಲೇಜಿನಲ್ಲಿಉತ್ತಮ ಫಲಿತಾಂಶ ಬಂದಿದೆ. ವಾಣಿಜ್ಯ ವಿಭಾಗದಲ್ಲಿನಂದಿತಾ (563), ಕಲಾವಿಭಾಗದಲ್ಲಿಕಾವ್ಯ (561) ಹಾಗೂ ವಿಜ್ಞಾನ ವಿಭಾಗದಲ್ಲಿಜಾಸ್ನವಿ (486) ಅಂಕಗಳನ್ನು ಪಡೆದು ಕಾಲೇಜಿಗೆ ಪ್ರಥಮ ವಿದ್ಯಾರ್ಥಿಗಳಾಗಿದ್ದಾರೆ. ಪ್ರಥಮ ಶ್ರೇಣಿಯಲ್ಲಿ38 ವಿದ್ಯಾರ್ಥಿಗಳು, ದ್ವಿತೀಯ ಶ್ರೇಣಿಯಲ್ಲಿ12 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ವಿದ್ಯಾರ್ಥಿಗಳ ಹಾಗೂ ಉಪನ್ಯಾಸಕರ ವರ್ಗದ ಶ್ರಮದಿಂದ ತ್ತಮ ಫಲಿತಾಂಶ ಬಂದಿದೆ ಎಂದು ಪ್ರಾಂಶುಪಾಲರು ಹರ್ಷ ವ್ಯಕ್ತಪಡಿಸಿದ್ದಾರೆ.

