ಕೊಂಚೂರು ಏಕಲವ್ಯ ಮಾದರಿ ವಸತಿ ಶಾಲೆಗೆ ಶೇ.100ರಷ್ಟು ಫಲಿತಾಂಶ

Contributed byvenkatesh.narasappa@timesgroup.com|Vijaya Karnataka

ಕೊಂಚೂರು ಏಕಲವ್ಯ ಮಾದರಿ ವಸತಿ ಶಾಲೆಯ ವಿದ್ಯಾರ್ಥಿಗಳು ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಶೇ.100ರಷ್ಟು ಫಲಿತಾಂಶ ಪಡೆದಿದ್ದಾರೆ. ಇದು ಶಾಲೆಯ ಇತಿಹಾಸದಲ್ಲಿ ಮೊದಲ ಬಾರಿಯಾಗಿದೆ. ವಿಜ್ಞಾನ ಮತ್ತು ವಾಣಿಜ್ಯ ವಿಭಾಗದ ಎಲ್ಲ ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಆರು ವಿದ್ಯಾರ್ಥಿಗಳು ಅತ್ಯುನ್ನತ ಶ್ರೇಣಿ ಗಳಿಸಿದ್ದು, ಉಳಿದವರು ಪ್ರಥಮ ಶ್ರೇಣಿಯಲ್ಲಿ ತೇರ್ಗಡೆಯಾಗಿದ್ದಾರೆ. ಶಾಲೆಯ ಶೈಕ್ಷಣಿಕ ಗುಣಮಟ್ಟಕ್ಕೆ ಇದು ಸಾಕ್ಷಿಯಾಗಿದೆ.

koncchooru ekalavya model residential school achieves historic 100 result

ಚಿತ್ರ: ಸುನೀಲಕುಮಾರ

**

ಕೊಂಚೂರು ಏಕಲವ್ಯ ಮಾದರಿ ವಸತಿ ಶಾಲೆಗೆ ಶೇ.100ರಷ್ಟು ಫಲಿತಾಂಶ

ವಿಕ ಸುದ್ದಿಲೋಕ ಕಲಬುರಗಿ

ಜಿಲ್ಲೆಯ ಕೊಂಚೂರಿನ ಏಕಲವ್ಯ ಮಾದರಿ ವಸತಿ ಶಾಲೆಯ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿಶೇ.100ರಷ್ಟು ಫಲಿತಾಂಶ ದಾಖಲಿಸುವ ಮೂಲಕ ಐತಿಹಾಸಿಕ ಸಾಧನೆ ಮಾಡಿದೆ.

ಶಾಲೆಯ ಇತಿಹಾಸದಲ್ಲೇ ಮೊದಲ ಬಾರಿಗೆ ವಿಜ್ಞಾನ ಮತ್ತು ವಾಣಿಜ್ಯ ಎರಡೂ ವಿಭಾಗಗಳಲ್ಲಿಎಲ್ಲವಿದ್ಯಾರ್ಥಿಗಳು ಉತ್ತೀರ್ಣರಾಗುವ ಮೂಲಕ ಈ ಅಭೂತಪೂರ್ವ ಗೆಲುವು ಸಾಧಿಸಿದ್ದಾರೆ.

*ಗಮನಾರ್ಹ ಶೈಕ್ಷಣಿಕ ಪ್ರಗತಿ: ಈ ಸಾಲಿನ ಫಲಿತಾಂಶವು ಕೇವಲ ಉತ್ತೀರ್ಣಕ್ಕೆ ಸೀಮಿತವಾಗದೆ ಗುಣಮಟ್ಟದಿಂದಲೂ ಕೂಡಿದೆ. ಆರು ವಿದ್ಯಾರ್ಥಿಗಳು ಅತ್ಯುನ್ನತ ಶ್ರೇಣಿ ಪಡೆದಿದ್ದಾರೆ. ಉಳಿದೆಲ್ಲವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿಉತ್ತೀರ್ಣರಾಗಿ ಶಾಲೆಗೆ ಕೀರ್ತಿ ತಂದಿದ್ದಾರೆ.

ವಿದ್ಯಾರ್ಥಿಗಳ ಸಾಧನೆಗೆ ಶಾಲೆ ಆಡಳಿತ ಮಂಡಳಿ ಹರ್ಷ ವ್ಯಕ್ತಪಡಿಸಿದೆ. ಎಲ್ಲವಿದ್ಯಾರ್ಥಿಗಳು ಪ್ರಥಮ ಮತ್ತು ಅತ್ಯುನ್ನತ ಶ್ರೇಣಿಯಲ್ಲಿಪಾಸಾಗಿರುವುದು ನಮ್ಮ ಶಾಲೆಯ ಶೈಕ್ಷಣಿಕ ಗುಣಮಟ್ಟಕ್ಕೆ ಹಿಡಿದ ಕನ್ನಡಿಯಾಗಿದೆ ಎಂದು ಶಾಲೆಯ ಪ್ರಾಚಾರ್ಯ ಸುನೀಲಕುಮಾರ ಬಲಾರಾ ಹೇಳಿದ್ದಾರೆ