ಪುತ್ತೂರು ಸಂತ ಫಿಲೋಮಿನಾ ಕಾಲೇಜಿನ 4 ವಿದ್ಯಾರ್ಥಿಗಳಿಂದ ರಾಜ್ಯ ಮಟ್ಟದ ಸಾಧನೆ

Contributed bysudhakara.kannadamoole@timesofindia.com|Vijaya Karnataka

ಪುತ್ತೂರು ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜು ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಶೇ.96 ಫಲಿತಾಂಶ ಪಡೆದಿದೆ. ವಿಜ್ಞಾನ ವಿಭಾಗದ ಅಪೂರ್ವ ಮತ್ತು ವಾಣಿಜ್ಯ ವಿಭಾಗದ ಸಪೀದಾ, ಸೋನಿಕಾ, ದೀಪ್ತಿ ರಾಜ್ಯಮಟ್ಟದಲ್ಲಿ ಉತ್ತಮ ಸಾಧನೆ ಮಾಡಿದ್ದಾರೆ. 42 ವಿದ್ಯಾರ್ಥಿಗಳು ಶೇ.95ಕ್ಕಿಂತ ಹೆಚ್ಚು ಅಂಕ ಗಳಿಸಿದ್ದಾರೆ. ಒಟ್ಟು 682 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು. 214 ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆಯಾಗಿದ್ದಾರೆ.

students of st philomena college achieve state level success

ವಿಕ ಸುದ್ದಿಲೋಕ ಪುತ್ತೂರು

ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಪುತ್ತೂರಿನ ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿಗೆ ಶೇ.96 ಫಲಿತಾಂಶ ಲಭಿಸಿದೆ. ವಿಜ್ಞಾನ ವಿಭಾಗದಲ್ಲಿಒಬ್ಬರು ಮತ್ತು ವಾಣಿಜ್ಯ ವಿಭಾಗದಲ್ಲಿ3 ವಿದ್ಯಾರ್ಥಿಗಳು ರಾಜ್ಯಮಟ್ಟದ ಸಾಧನೆ ಮಾಡಿದ್ದಾರೆ.

ಶೇ. 95ಕ್ಕಿಂತ ಹೆಚ್ಚಿನ ಅಂಕಗಳನ್ನು ಕಾಲೇಜಿನ 42 ವಿದ್ಯಾರ್ಥಿಗಳು ಪಡೆದುಕೊಂಡಿದ್ದಾರೆ. ವಿಜ್ಞಾನ ವಿಭಾಗದಲ್ಲಿಅಪೂರ್ವ 595, ವಾಣಿಜ್ಯ ವಿಭಾಗದಲ್ಲಿಸಪೀದಾ 595, ಸೋನಿಕಾ ಕುಟಿನ್ನಾ 592, ದೀಪ್ತಿ ಕೆ.ಎಸ್ . 591, ಬಿ.ವಿ.ಅನು 590, ಆಯಿಷಾ ಮಹಪೂಲ 590 ಮತ್ತು ಪ್ರಣಮ್ 590 ಅಂಕ ಗಳಿಸಿದ್ದಾರೆ. ಕಲಾ ವಿಭಾಗದಲ್ಲಿಅಶ್ವಿನ್ ಜಾಜ್ ರ್ 580 ಅಂಕ ಗಳಿಸಿ ಕಾಲೇಜಿಗೆ ಪ್ರಥಮರೆನಿಸಿಕೊಂಡಿದ್ದಾರೆ.

ಒಟ್ಟು 682 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಸರಾಸರಿ ಶೇ. ಫಲಿತಾಂಶ 96 ಬಂದಿದೆ. ಇದರಲ್ಲಿ214 ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿಯಲ್ಲಿ, 362 ಮಂದಿ ಪ್ರಥಮ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ್ದಾರೆ.

ಕಲಾ ವಿಭಾಗದಲ್ಲಿಶೇ. 95, ವಾಣಿಜ್ಯ ವಿಭಾಗದಲ್ಲಿ ಶೇ. 98 ಮತ್ತು ವಿಜ್ಞಾನ ವಿಭಾಗದಲ್ಲಿಶೇ. 94 ಫಲಿತಾಂಶ ಬಂದಿದೆ ಎಂದು ಕಾಲೇಜಿನ ಪ್ರಕಟಣೆ ತಿಳಿಸಿದೆ.

ಫೋಟೋ: 10ಪಿ-ಸಪೀದಾ, 10ಪಿ-ಅಪೂರ್ವ, 10ಪಿ-ಸೋನಿಕಾ, 10ಪಿ-ದೀಪ್ತಿ