ಅದಮಾರು ಶ್ರೀಗಳಿಂದ ಆತ್ಮಲಿಂಗಕ್ಕೆ ಪೂಜೆ
ಗೋಕರ್ಣ:ಉಡುಪಿ ಅದಮಾರು ಮಠದ ಹಿರಿಯ ಸ್ವಾಮಿಗಳಾದ ಶ್ರೀ ವಿಶ್ವಪ್ರಿಯ ತೀರ್ಥರು ಇಲ್ಲಿಯ ಶ್ರೀ ಮಹಾಬಲೇಶ್ವರ ಮಂದಿರಕ್ಕೆ ಭೇಟಿ ನೀಡಿ ಆತ್ಮಲಿಂಗಕ್ಕೆ ಪೂಜೆ ಸಲ್ಲಿಸಿದರು. ಬಳಿಕ ಮಂದಿರದ ವತಿಯಿಂದ ಫಲ ಸಮರ್ಪಿಸಿ ಶ್ರೀಗಳನ್ನು ಗೌರವಿಸಲಾಯಿತು. ಮಂದಿರದ ಮೇಲುಸ್ತುವಾರಿ ಸಮಿತಿ ಸದಸ್ಯ ವೇ.ಸುಬ್ರಹ್ಮಣ್ಯ ಅಡಿ ಪೂಜಾ ಕೈಂಕರ್ಯ ನೆರವೇರಿಸಿದರು. ಈ ವೇಳೆ ಮಂದಿರದ ವ್ಯವಸ್ಥಾಪಕ ಸುಬ್ರಹ್ಮಣ್ಯ ಹೆಗಡೆ ಹಾಗೂ ಶ್ರೀಗಳ ಶಿಷ್ಯರು ಉಪಸ್ಥಿತರಿದ್ದರು. ಇದಕ್ಕೂ ಮೊದಲು ಮಹಾಗಣಪತಿ ಮಂದಿರಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದರು. ಇವೆರಡು ದೇವಾಲಯದ ಭೇಟಿ ಬಳಿಕ ತಾಮ್ರಗೌರಿ ಮಂದಿರಕ್ಕೆ ತೆರಳಿ ದೇವಿ ದರ್ಶನ ಪಡೆದರು. ‘ಶ್ರೀ ಮಧ್ವ ಪಾವನ ಯಾತ್ರೆ’ ಅಂಗವಾಗಿ ಶ್ರೀಕ್ಷೇತ್ರಕ್ಕೆ ಆಗಮಿಸಿದ್ದ ಶ್ರೀಗಳು ಕೋಟಿತೀರ್ಥದ ಸಮೀಪದ ಶ್ರೀ ಸೋದೆ ವಾದಿರಾಜ ಮಠಕ್ಕೆ ಭೇಟಿ ನೀಡಿದ್ದ ಸಂದರ್ಭದಲ್ಲಿಪ್ರಮುಖ ದೇವಾಲಯಗಳಿಗೆ ಭೇಟಿ ನೀಡಿ ತೆರಳಿದ್ದಾರೆ.
9 ಜಿ .P .æಎನ್ 1 ಎ
ಉಡುಪಿ ಅದಮಾರು ಮಠದ ಶ್ರೀ ವಿಶ್ವಪ್ರಿಯ ತೀರ್ಥರು ಆತ್ಮಲಿಂಗಕ್ಕೆ ಪೂಜೆ ಸಲ್ಲಿಸಿದರು.

