ವಿಕ ಸುದ್ದಿಲೋಕ ಬೆಳಗಾವಿ
ಡಿ. ದೇವರಾಜು ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ 2024-25ನೇ ಸಾಲಿನ ಯೋಜನೆಯಡಿ ಆಯ್ಕೆಯಾದ ಗ್ರಾಮೀಣ ಕ್ಷೇತ್ರದ ಅರ್ಹ ಫಲಾನುಭವಿಗಳಿಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರು ಹೊಲಿಗೆ ಯಂತ್ರಗಳನ್ನು ವಿತರಿಸಿದರು.
ಸಚಿವರ ಗೃಹ ಕಚೇರಿಯಲ್ಲಿಶುಕ್ರವಾರ ನಡೆದ ಕಾರ್ಯಕ್ರಮದಲ್ಲಿಒಟ್ಟೂ 18 ಫಲಾನುಭವಿಗಳಿಗೆ ಹೊಲಿಗೆ ಯಂತ್ರಗಳನ್ನು ವಿತರಿಸಲಾಯಿತು. ಬಳಿಕ ಮಾತನಾಡಿದ ಅವರು, ‘‘ಮಹಿಳೆಯರ ಆರ್ಥಿಕ ಸ್ವಾವಲಂಬನೆಯ ಉದ್ದೇಶದಿಂದ ನಾನಾ ಸಾಮಗ್ರಿಗಳನ್ನು ವಿತರಿಸಲಾಗುತ್ತಿದೆ,’’ ಎಂದು ಹೇಳಿದರು.
ಕಾಡಾ ಅಧ್ಯಕ್ಷ ಯುವರಾಜ ಕದಂ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ಚೇತನ್ ಕುಮಾರ, ತಾಪಂ ಇಒ ಯಶವಂತ, ತಹಸೀಲ್ದಾರ್ ಬಸವರಾಜ ನಾಗರಹಾಳ, ಉಚಗಾಂವ್ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಾಳು ದೇಸೂರಕರ್ ಸೇರಿದಂತೆ ಇತರರು ಇದ್ದರು.
-10ಪರಶು3
ಫಲಾನುಭವಿಗಳಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೊಲಿಗೆ ಯಂತ್ರಗಳನ್ನು ವಿತರಿಸಿದರು.

