ಕಾಸರಗೋಡು: ನಗರದ ನುಳ್ಳಿಪ್ಪಾಡಿ ಶ್ರೀ ಅಯ್ಯಪ್ಪ ಸ್ವಾಮಿ ಕ್ಷೇತ್ರದಲ್ಲಿಅಷ್ಟಬಂಧ ಬ್ರಹ್ಮಕಲಶೋತ್ಸವವು ಏ.18ರಿಂದ 23ರವರೆಗೆ ವೈದಿಕ, ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಜರುಗಲಿದೆ.
ಬ್ರಹ್ಮಕಲಶೋತ್ಸವ ಸಮಿತಿ ಕಾರ್ಯಾಧ್ಯಕ್ಷ ಬಾಲಕೃಷ್ಣನ್ ಚೆನ್ನಿಕೆರೆ ಈ ವಿಷಯವನ್ನು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಏ.18ರಂದು ಬೆಳಗ್ಗೆ ಗಣಪತಿ ಹವನ, ಹಸಿರುವಾಣಿ ಹೊರೆಕಾಣಿಕೆ ಶೋಭಾಯಾತ್ರೆಗೆ ಚಾಲನೆ, 9ಗಂಟೆಗೆ ಹಸಿರುವಾಣಿ ಹೊರೆಕಾಣಿಕೆ ಶೋಭಾಯಾತ್ರೆ ಕರಂದಕ್ಕಾಡು ಶ್ರೀ ವೀರ ಹನುಮಾನ್ ಮಂದಿರ ಪರಿಸರದಿಂದ ವಾದ್ಯಘೋಷಗಳೊಂದಿಗೆ ಭವ್ಯ ಮೆರವಣಿಗೆಯೊಂದಿಗೆ ಶ್ರೀ ಕ್ಷೇತ್ರಕ್ಕೆ ಆಗಮನ, ಉಗ್ರಾಣ ಮುಹೂರ್ತ, ಸಂಜೆ ತಂತ್ರಿವರ್ಯ ಬ್ರಹ್ಮಶ್ರೀ ಉಳಿಯತ್ತಾಯ ವಿಷ್ಣು ಆಸ್ರ ಅವರಿಗೆ ಪೂರ್ಣಕುಂಭ ಸ್ವಾಗತ, ಎಡನೀರು ಮಠಾಧಿಧೀಶ ಶ್ರೀ ಸಚ್ಚಿದಾನಂದ ಭಾರತೀ ಸ್ವಾಮೀಜಿಯವರಿಗೆ ಪೂರ್ಣಕುಂಭ ಸ್ವಾಗತ, ಶ್ರೀ ಸನ್ನಿಧಿಧಿಯ ಗರ್ಭಗುಡಿ ಬಾಗಿಲಿಗೆ ಬೆಳ್ಳಿ ಹೊದಿಕೆ ಮತ್ತು ಗರ್ಭಗುಡಿಯ ಮುಂಭಾಗಕ್ಕೆ ಹಿತ್ತಾಳೆ ಹೊದಿಕೆ ಸಮರ್ಪಣೆ, ಸಾಂಸ್ಕೃತಿಕ ಕಾರ ್ಯಕ್ರಮಗಳ ಉದ್ಘಾಟನೆ, ಧಾರ್ಮಿಕ ಸಭೆ ಜರುಗಲಿದೆ.
ಏ.19ರಂದು ಭಜನಾ ತಂಡಗಳಿಂದ ಭಜನೆ, ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ, ಅಪರಾಹ್ನ ಯಕ್ಷಗಾನ ತಾಳಮದ್ದಳೆ, ಸಂಜೆ ಸಭಾ ಕಾರ್ಯಕ್ರಮ, ರಾತ್ರಿ ನಾಟ್ಯೋತ್ಸವಂ ಜರುಗಲಿದೆ.
ಏ.20ರಂದು ಬೆಳಗ್ಗೆ ವಿವಿಧ ವೈದಿಕ ಕಾರ್ಯಕ್ರಮ, ವಿವಿಧ ತಂಡಗಳಿಂದ ಭಜನೆ, ವಿವಿಧ ಸಾಂಸ್ಕೃತಿಕ ಕಾರ ್ಯಕ್ರಮ, ಸಂಜೆ 5.30ಕ್ಕೆ ಸಭಾ ಕಾರ ್ಯಕ್ರಮ, ರಾತ್ರಿ ‘ನಾಗದಿಗಂಬರಿ’ ಮಲೆಯಾಳ ನಾಟಕ ಪ್ರದರ್ಶನಗೊಳ್ಳಲಿದೆ.
ಏ.21ರಂದು ಬೆಳಗ್ಗೆ ವಿವಿಧ ವೈದಿಕ ಕಾರ ್ಯಕ್ರಮ, ವಿವಿಧ ತಂಡಗಳಿಂದ ಭಜನೆ, ತತ್ವಮಸಿ ವೇದಿಕೆಯಲ್ಲಿವಿವಿಧ ಸಾಂಸ್ಕೃತಿಕ ಕಾರ್ಯಕ್ರಮ, ಸಂಜೆ 5.30ಕ್ಕೆ ಸಭಾ ಕಾರ್ಯಕ್ರಮ, ಸ್ಥಳೀಯ ಪ್ರತಿಭೆಗಳಿಂದ ನೃತ್ಯ ವೈಭವ ಜರುಗಲಿದೆ.
ಏ.22ರಂದು ವಿವಿಧ ವೈದಿಕ ಕಾರ್ಯಕ್ರಮಗಳು, ವಿವಿಧ ಭಜನಾ ತಂಡಗಳಿಂದ ಭಜನೆ, ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ, ಸಭಾ ಕಾರ್ಯಕ್ರಮ, ರಾತ್ರಿ 7.30ಕ್ಕೆ ಫ್ಯೂಷನ್ ಭಜನೆ ನಡೆಯಲಿದೆ.
ಏ.23ರಂದು ಗಣಪತಿ ಹೋಮ, ವಿವಿಧ ವೈದಿಕ ಕಾರ್ಯಕ್ರಮಗಳು, 7.34ರಿಂದ 9.37ರ ಮಧ್ಯೆ ವೃಷಭ ಲಗ್ನ ಶುಭಮುಹೂರ್ತದಲ್ಲಿಅಷ್ಟಬಂಧ ಲೇಪನ ಮತ್ತು ಬ್ರಹ್ಮಕಲಶಾಭಿಷೇಕ, ವಿವಿಧ ತಂಡಗಳಿಂದ ಭಜನೆ, ಸಮಾರೋಪ ಸಮಾರಂಭ ನಡೆಯಲಿದೆ. ಸಂಜೆ 5ಕ್ಕೆ ಭರತನಾಟ್ಯ, ರಾತ್ರಿ 8 ಗಂಟೆಗೆ ಭಸ್ಮಾಸುರ ಮೋಹಿನಿ, ಶಬರಿಮಲೆ ಶ್ರೀ ಸ್ವಾಮಿ ಅಯ್ಯಪ್ಪ ಯಕ್ಷಗಾನ ಬಯಲಾಟ ಪ್ರದರ್ಶನಗೊಳ್ಳಲಿದೆ.
ಸುದ್ದಿಗೋಷ್ಠಿಯಲ್ಲಿಬ್ರಹ್ಮಕಲಶೋತ್ಸವ ಸಮಿತಿ ಪ್ರಧಾನ ಕಾರ್ಯದರ್ಶಿ ಕೃಷ್ಣಪ್ರಸಾದ್ ಕೋಟೆಕಣಿ, ಶ್ರೀ ಕ್ಷೇತ್ರ ಟ್ರಸ್ ಅಧ್ಯಕ್ಷ ಗಣೇಶ್ ಅಮೈ, ಬ್ರಹ್ಮಕಲಶೋತ್ಸವ ಸಮಿತಿ ಉಪಾಧ್ಯಕ್ಷ ರವೀಂದ್ರ ಕೋಟೆಕಣಿ, ರಾಮನ್ ಚೆನ್ನಿಕರೆ, ಪ್ರಚಾರ ಸಮಿತಿ ಅಧ್ಯಕ್ಷ ಗುರುಪ್ರಸಾದ್ ಕೋಟೆಕಣಿ ಉಪಸ್ಥಿತರಿದ್ದರು.

