ವಿಕ ಸುದ್ದಿಲೋಕ ಕಡಬ
ಸಾಂಸ್ಕೃತಿಕ, ಶೈಕ್ಷಣಿಕವಾಗಿ ಇವತ್ತು ಹಳ್ಳಿಯ ಪ್ರತಿಭೆಗಳು ವಿಶೇಷ ಸಾಧನೆ ಮಾಡುತ್ತಿದ್ದಾರೆ. ಹಳ್ಳಿಯಲ್ಲಿಇರುವ ಮಕ್ಕಳಿಗೆ ವಿಶೇಷ ಚೈತನ್ಯ ಇದೆ ಎಂದು ಹಿರಿಯ ರಂಗ ನಿರ್ದೇಶಕ ಡಾ. ಜೀವನ್ ರಾಮ್ ಸುಳ್ಯ ಹೇಳಿದರು.
ಕುದ್ಮಾರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಎಸ್ ಡಿಎಂಸಿ, ಹಿರಿಯ ವಿದ್ಯಾರ್ಥಿ ಸಂಘದ ವತಿಯಿಂದ ನಡೆಯುವ ಚಿಣ್ಣರ ವೈಭವ ಬೇಸಿಗೆ ಶಿಬಿರ ಉದ್ಘಾಟಿಸಿ ಅವರು ಮಾತನಾಡಿದರು.
ಎಸ್ ಕೆಪಿಎ ಮಾಜಿ ಜಿಲ್ಲಾಧ್ಯಕ್ಷ ಪದ್ಮಪ್ರಸಾದ್ ಜೈನ್ ಮಾತನಾಡಿ, ಬದಲಾಗುತ್ತಿರುವ ಕಾಲಘಟ್ಟದಲ್ಲಿಮಾನವೀಯ ಮೌಲ್ಯಗಳನ್ನು ಉಳಿಸಿಕೊಳ್ಳುವುದು ಮತ್ತು ತಂತ್ರಜ್ಞಾನವನ್ನು ಮಿತವಾಗಿ ಬಳಸುವುದರ ಮೂಲಕ ಉತ್ತಮ ಜೀವನ ನಡೆಸಲು ಸಾಧ್ಯವಿದೆ. ಅತಿಯಾದ ಮೊಬೈಲ್ ಬಳಕೆಯಿಂದ ಏಕಾಗ್ರತೆ ಕೊರತೆ ಉಂಟಾಗಿ ಮಕ್ಕಳು ಭವಿಷ್ಯ ಹಾಳು ಮಾಡಿಕೊಳ್ಳುತ್ತಿದ್ದಾರೆ. ಪೋಷಕರು ಮಕ್ಕಳೊಂದಿಗೆ ಹೆಚ್ಚಿನ ಸಮಯಕೊಟ್ಟು ಅವರಲ್ಲಿ ಸಮಾಜಮುಖಿ ಕನಸನ್ನು ಬಿತ್ತಬೇಕು ಎಂದರು.
ಅಂತಾರಾಷ್ಟ್ರೀಯ ಮಯೂರ ವಿದ್ಯಾರತ್ನ ಪ್ರಶಸ್ತಿ ಪುರಸ್ಕೃತ ಶಿಕ್ಷಕಿ ವಂದನಾ ರೈ ಕಾರ್ಕಳ ಮಾತನಾಡಿ, ಮಕ್ಕಳಲ್ಲಿರುವ ಸೂಕ್ತ ಪ್ರತಿಭೆಯನ್ನು ಪೋಷಕರು ಹಾಗೂ ಶಿಕ್ಷಕರು ಗುರುತಿಸಿ ಮಾರ್ಗದರ್ಶನ ನೀಡಿದಾಗ ಮಕ್ಕಳು ನಾನಾ ಕ್ಷೇತ್ರಗಳಲ್ಲಿಸಾಧನೆ ಮಾಡಲು ಸಾಧ್ಯವಾಗುತ್ತದೆ ಎಂದರು.
ಎಸ್ ಡಿಎಂಸಿ ಅಧ್ಯಕ್ಷ ದೇವರಾಜ್ ನೂಜಿ ಅಧ್ಯಕ್ಷತೆ ವಹಿಸಿದ್ದರು. ರಾಷ್ಟ್ರಮಟ್ಟದ ಕಬಡ್ಡಿ ಆಟಗಾರ್ತಿ ನವ್ಯಾಶ್ರೀ ಖಂಡಿಗ, ಸವಣೂರು ಕ್ಲಸ್ಟರ್ ಸಿಆರ್ ಪಿ ಜಯಂತ್ ವೈ., ದ.ಕ. ಜಿಲ್ಲಾಯುವಜನ ಒಕ್ಕೂಟದ ಅಧ್ಯಕ್ಷ ಸುರೇಶ್ ರೈ ಸೂಡಿಮುಳ್ಳು, ಕುದ್ಮಾರು ಶಾಲಾ ಮುಖ್ಯಶಿಕ್ಷಕಿ ಮಿನಿ ವರ್ಗಿಸ್ ಮಾತನಾಡಿದರು. ಹಿರಿಯ ವಿದ್ಯಾರ್ಥಿ ಸಂಘದ ಕಾರ್ಯದರ್ಶಿ ನಾಗೇಶ್ ಕೆ. ಕೆಡೆಂಜಿ ಉಪಸ್ಥಿತರಿದ್ದರು. ಕಳೆದ ಎರಡು ತಿಂಗಳಿನಿಂದ ನಿರಂತರವಾಗಿ ಬೆಳಗ್ಗೆ ಒಂದು ಗಂಟೆ ಕಾಲ ಕುದ್ಮಾರು ಮುಖ್ಯರಸ್ತೆ ಬದಿ ಸ್ವಚ್ಛತಾ ಕಾರ್ಯ ಮಾಡುತ್ತಿರುವ ಅಕ್ಷಯ್ ಬರೆಪ್ಪಾಡಿ ಹಾಗೂ ಸತೀಶ್ ಆರ್ವಾರ ಅವರನ್ನು ಸನ್ಮಾನಿಸಲಾಯಿತು. ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ರಾಮಚಂದ್ರ ಬರೆಪ್ಪಾಡಿ ಸ್ವಾಗತಿಸಿದರು. ಶಿಕ್ಷಕಿ ವೀಣಾ ವಂದಿಸಿದರು.
ಫೊಟೋ ಫೈಲ್ ನೇಮ್ 8ಕೆಡಿಬಿ ಯುಜಿ)
ಚಿಣ್ಣರ ವೈಭವ ಬೇಸಿಗೆ ಶಿಬಿರವನ್ನು ಜೀವನ್ ರಾಮ್ ಸುಳ್ಯ ಉದ್ಘಾಟಿಸಿದರು.

