ನೀರಿನ ಸಮಸ್ಯೆಗೆ ತುರ್ತು ಸ್ಪಂದಿಸಿ

Contributed bytvlbdr@gmail.com|Vijaya Karnataka

ಬೀದರ್ ದಕ್ಷಿಣ ಕ್ಷೇತ್ರದ ಶಾಸಕ ಡಾ.ಶೈಲೇಂದ್ರ ಬೆಲ್ದಾಳೆ ಅವರು ನೀರಿನ ಸಮಸ್ಯೆಗೆ ತುರ್ತು ಸ್ಪಂದಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ಬೇಸಿಗೆಯಲ್ಲಿ ಜನತೆ ಕುಡಿಯುವ ನೀರಿನ ಅಭಾವ ಎದುರಿಸುತ್ತಾರೆ. ನೀರಿನ ಕೊರತೆ ಇರುವ ಪ್ರದೇಶಗಳಲ್ಲಿ ತಕ್ಷಣ ಟ್ಯಾಂಕರ್ ವ್ಯವಸ್ಥೆ, ಹಳೆಯ ಪೈಪ್‌ಲೈನ್ ದುರಸ್ತಿ ಹಾಗೂ ಹೊಸ ಮೂಲಗಳನ್ನು ಗುರುತಿಸುವ ಕೆಲಸ ಪೂರ್ಣಗೊಳಿಸಬೇಕು. ಗ್ರಾಮೀಣ ಪ್ರದೇಶಗಳಲ್ಲಿ ನೀರು ಅಭಾವ ನಿವಾರಿಸಲು ತುರ್ತು ಕ್ರಮ ಕೈಗೊಳ್ಳಬೇಕು ಎಂದು ತಿಳಿಸಿದರು.

emergency watersupply issues in bidar guided by legislators

ಚಿತ್ರ:13-4-ಬಿಡಿಆರ್ 3

ಬೀದರ್ ನ ತಾಪಂನಲ್ಲಿಸೋಮವಾರ ನಡೆದ ಸಭೆಯಲ್ಲಿಶಾಸಕ ಡಾ.ಶೈಲೇಂದ್ರ ಬೆಲ್ದಾಳೆ ಮಾತನಾಡಿದರು.

* ಬೀದರ್ ದಕ್ಷಿಣ ಕ್ಷೇತ್ರದ ಶಾಸಕ ಡಾ.ಶೈಲೇಂದ್ರ ಬೆಲ್ದಾಳೆ ಸೂಧಿಚಧಿನೆ

ನೀರಿನ ಸಮಸ್ಯೆಗೆ ತುರ್ತು ಸ್ಪಂದಿಸಿ

ವಿಕಸುದ್ದಿಲೋಕ ಬೀದರ್

ಬೇಸಿಗೆಯಲ್ಲಿಜನತೆ ಕುಡಿಯುವ ನೀರಿನ ಅಭಾವ ಎದುರಿಸುತ್ತಾರೆ. ಇದು ಕೇವಲ ಒಂದು ಸಮಸ್ಯೆಯಲ್ಲ. ಜನರ ದೈನಂದಿನ ಬದುಕಿಗೆ ಸಂಬಂಧಿಸಿದ ಅತ್ಯಂತ ಮುಖ್ಯ ವಿಷಯವಾಗಿದೆ. ಆದ್ದರಿಂದ ಈ ವಿಷಯವನ್ನು ನಾವು ಅತ್ಯಂತ ಗಂಭೀರವಾಗಿ ತೆಗೆದುಕೊಳ್ಳಬೇಕಾಗಿದೆ ಎಂದು ಶಾಸಕ ಡಾ.ಶೈಲೇಂದ್ರ ಬೆಲ್ದಾಳೆ ಹೇಳಿದರು.

ನಗರದ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿತಮ್ಮ ಅಧ್ಯಕ್ಷತೆಯಲ್ಲಿನಡೆದ ಟಾಸ್ಕ್ ಫೋರ್ಸ್ ಸಭೆಯಲ್ಲಿಮಾತನಾಡಿದರು. ನೀರಿನ ಸಮಸ್ಯೆ ನಿವಾರಣೆಗೆ ಸ್ಪಷ್ಟವಾದ ಮಾರ್ಗಸೂಚಿಗಳನ್ನು ತಯಾರಿಸಿ, ನೀರಿನ ಕೊರತೆ ಇರುವ ಪ್ರದೇಶಗಳಲ್ಲಿತಕ್ಷಣ ಟ್ಯಾಂಕರ್ ವ್ಯವಸ್ಥೆ, ಹಳೆಯ ಪೈಪ್ ಲೈನ್ ದುರಸ್ತಿ ಹಾಗೂ ಹೊಸ ಮೂಲಗಳನ್ನು ಗುರುತಿಸುವ ಕೆಲಸ ಪೂರ್ಣಗೊಳಿಸಬೇಕು ಎಂದರು.

ಬೇಸಿಗೆ ಹಿನ್ನೆಲೆಯಲ್ಲಿಉಂಟಾಗುತ್ತಿರುವ ಕುಡಿಯುವ ನೀರಿನ ಸಮಸ್ಯೆ, ಸಾರ್ವಜನಿಕರ ಮೂಲಭೂತ ಸೌಲಭ್ಯಗಳ ಕೊರತೆ ಹಾಗೂ ಅಭಿವೃದ್ಧಿ ಕಾರ್ಯಗಳ ಪ್ರಗತಿ ಕುರಿತು ಸಮಗ್ರವಾಗಿ ಚರ್ಚಿಸಲಾಯಿತು. ವಿಶೇಷವಾಗಿ ಗ್ರಾಮೀಣ ಪ್ರದೇಶಗಳಲ್ಲಿನೀರಿನ ಅಭಾವ ನಿವಾರಿಸಲು ತುರ್ತು ಕ್ರಮಗಳನ್ನು ಕೈಗೊಳ್ಳುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಶಾಸಕರು ಸೂಚನೆ ನೀಡಿದರು.

ಜನಸಾಮಾನ್ಯರಿಗೆ ಯಾವುದೇ ತೊಂದರೆ ಉಂಟಾಗದಂತೆ ಅಧಿಕಾರಿಗಳು ಜವಾಬ್ದಾರಿಯಿಂದ ಕಾರ್ಯನಿರ್ವಹಿಸಬೇಕು. ನೀರಿನ ಸರಬರಾಜು ವ್ಯವಸ್ಥೆ ಸುಧಾರಿಸಲು ಹಾಗೂ ಸಮಸ್ಯೆಗಳು ತ್ವರಿತವಾಗಿ ಪರಿಹಾರವಾಗಲು ಕ್ರಮ ಕೈಗೊಳ್ಳಬೇಕು. ನೀರಿನ ಕೊರತೆ ಇರುವ ಪ್ರದೇಶಗಳಲ್ಲಿತುರ್ತು ಪೂರೈಕೆ ವ್ಯವಸ್ಥೆ ಜಾರಿಗೊಳಿಸಲು ಸೂಚನೆ ನೀಡಿದರು. ಪ್ರಗತಿಯಲ್ಲಿರುವ ಕಾಮಗಾರಿಗಳನ್ನು ಶೀಘ್ರ ಪೂರ್ಣಗೊಳಿಸಲು ನಿರ್ದೇಶನ ನೀಡಿದರು.

ನಾನಾ ಕಾಮಗಾರಿಗಳ ಪ್ರಗತಿ, ಗುಣಮಟ್ಟ ಪರಿಶೀಲನೆ ನಡೆಸುವಂತೆ ಹೇಳಿದ ಅವರು, ಜನರಿಗೆ ಯಾವುದೇ ತೊಂದರೆ ಆಗದಂತೆ ಕಾಮಗಾರಿಗಳನ್ನು ಶೀಘ್ರ ಪೂರ್ಣಗೊಳಿಸಲು ಅಗತ್ಯ ಕ್ರಮ ಕೈಗೊಳ್ಳಬೇಕೆಂದು ತಿಳಿಸಿದರು.

ಈ ಸಂದರ್ಭದಲ್ಲಿತಾಪಂ ಇಒ ಮಾಣಿಕರಾವ ಪಾಟೀಲ, ತಧಿಹಧಿಸೀಧಿಲ್ದಾರ್ ರವಿಕುಮಾರ ದಾಮಾ, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಎಇಇ ರಾಜಕುಮಾರ ದಸಾರೆ, ತಾಪಂ ಸಹಾಯಕ ನಿರ್ದೇಶಕರಾದ ಸಂಜುಕುಮಾರ ಕಾಡವಾದ, ಸುದೇಶ್ , ನಾನಾ ಇಲಾಖೆಗಳ ಅಧಿಕಾರಿಗಳು ಇಧಿದ್ದಧಿರು.