ವಿಧಿವಿಧ ಜಧಿಯಂತಿಧಿಗಳ ಪೂಧಿರ್ವಧಿಭಾವಿ ಸಧಿಭೆ
ವಿಕ ಸುದ್ದಿಲೋಕ ಧಾರವಾಡ
ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿಏ.20ರಂದು ಸಂಜೆ 5ಕ್ಕೆ ಕರ್ನಾಟಕ ಸಾಂಸ್ಕೃತಿಕ ನಾಯಕ ಶ್ರೀ ಬಸವೇಶ್ವರ ಜಯಂತಿ , ಏ. 21ರಂದು ಸಂಜೆ 5ಕ್ಕೆ ಶ್ರೀ ಶಂಕರಾಚಾರ್ಯರ ಜಯಂತಿ ಹಾಗೂ ಏ. 23ರಂದು ಬೆಳಿಗ್ಗೆ 11.30ಕ್ಕೆ ಶ್ರೀ ಭಗೀರಥ ಜಯಂತಿಗಳನ್ನು ಕರ್ನಾಟಕ ಕುಲಪುರೋಹಿತ ಆಲೂರು ವೆಂಕಟರಾವ್ ಸಾಂಸ್ಕೃತಿಕ ಭವನದಲ್ಲಿಆಯೋಜಿಸಲಾಗಿದೆ ಎಂದು ಎಡಿಸಿ ಗೀತಾ ಸಿ.ಡಿ. ಹೇಳಿದರು.
ನಗರದ ಜಿಲ್ಲಾಧಿಕಾರಿಗಳ ಕಚೇರಿ ನೂತನ ಸಭಾಂಗಣದಲ್ಲಿಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಯೋಗದಲ್ಲಿಆಯೋಜಿಸಿದ್ದ ವಿವಿಧ ಜಯಂತಿ ಕಾರ್ಯಕ್ರಮಗಳ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಜಯಂತಿ ಕಾರ್ಯಕ್ರಮ ನಾವೆಲ್ಲರೂ ವಿಜೃಂಭಣೆಯಿಂದ ಪ್ರತಿವರ್ಷದಂತೆ ಆಚರಿಸೋಣ. ವಿವಿಧ ಜಯಂತಿ ಕಾರ್ಯಕ್ರಮಗಳನ್ನು ಅರ್ಥಪೂರ್ಣವಾಗಿ ನಡೆಸಬೇಕು ಎಂದು ಹೇಳಿದರು.
ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಕುಮಾರ ಬೆಕ್ಕೇರಿ ಅವರು ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು. ಸಭೆಯಲ್ಲಿವಿವಿಧ ಸಮಾಜದ ಹಿರಿಯ ಮುಖಂಡರು, ಪದಾಧಿಕಾರಿಗಳು ಉಪಸ್ಥಿತರಿದ್ದರು.
ಫೋಟೊ: 12ನಿಜಗುಣಿ3
ಧಾರವಾಡ ಜಿಲ್ಲಾಧಿಕಾರಿಗಳ ಕಚೇರಿ ನೂತನ ಸಭಾಂಗಣದಲ್ಲಿನಧಿಡೆದ ವಿವಿಧ ಜಯಂತಿ ಕಾರ್ಯಕ್ರಮಗಳ ಪೂರ್ವಭಾವಿ ಸಭೆಯಲ್ಲಿಎಡಿಸಿ ಗೀತಾ ಸಿ.ಡಿ. ಮಾತನಾಡಿದರು.

