ಶಿಕ್ಷಕರ ಸಂಘದ ಚುನಾವಣೆ ರದ್ದುಗೊಳಿಸಿ
ವಿಜಯಪುರ : ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ನಿರ್ದೇಶಕರ ಮತ್ತು ಪದಾಧಿಕಾರಿಗಳ ಚುನಾವಣೆ ಘೋಷಣೆಯಾಗಿ ನಾಮಪತ್ರ ಸಲ್ಲಿಕೆ ಅವಧಿ ಮುಗಿದರೂ ಮತದಾರರ ಪಟ್ಟಿ ಬಿಡುಗಡೆ ಮಾಡಿಲ್ಲ. ಚುನಾವಣಾ ಕಾರ್ಯಾಲಯ ಆರಂಭಿಸಿಲ್ಲ. ಹೀಗಾಗಿ ಚುನಾವಣೆ ರದ್ದುಗೊಳಿಸಬೇಕು ಎಂದು ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ನಿಕಟಪೂರ್ವ ಜಿಲ್ಲಾಧ್ಯಕ್ಷ ಬಿ.ಟಿ.ಗೌಡರ ಆಗ್ರಹಿಸಿದ್ದಾರೆ.
ಚುನಾವಣೆ ನಡೆಯುತ್ತಿರುವ ಬಗ್ಗೆ ಅನೇಕ ಶಿಕ್ಷಕರಿಗೆ ಮಾಹಿತಿ ನೀಡಿಲ್ಲ. ಕೇವಲ ವ್ಯಾಟ್ಸ್ ಆ್ಯಪ್ ನಲ್ಲಿನೋಡುವಂತಾಗಿದೆ. ಮೇಲ್ನೋಟಕ್ಕೆ ಇದೊಂದು ವಾಮಮಾರ್ಗದ ಚುನಾವಣೆಯಾಗಿದೆ. ಪ್ರಜಾಪ್ರಭುತ್ವಕ್ಕೆ ಗೌರವ ನೀಡುವ ಕಡೆ ಗಮನಹರಿಸಬೇಕು ಎಂದು ಬಿ.ಟಿ.ಗೌಡರ ಪ್ರಕಟಣೆಯಲ್ಲಿತಿಳಿಸಿದ್ದಾರೆ.
ಬಿಟಿ-ಬಿಜೆಪಿ13

