ವಿಕ ಸುದ್ದಿಲೋಕ ಮೂಲ್ಕಿ
ಸಂವಿಧಾನ ಶಿಲ್ಪಿ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ರವರು ತಮ್ಮ ಜೀವನದುದ್ದಕ್ಕೂ ಸಮಾನತೆ, ನ್ಯಾಯ ಮತ್ತು ಮಾನವ ಹಕ್ಕುಗಳಿಗಾಗಿ ಹೋರಾಡಿದ ಮಹಾನ್ ವ್ಯಕ್ತಿಯಾಗಿದ್ದರು ಎಂದು ಮೂಲ್ಕಿ ನಗರ ಪಂಚಾಯಿತಿ ಮುಖ್ಯಾಧಿಕಾರಿ ಮಧುಕರ್ ಕೆ. ಹೇಳಿದರು.
ಮೂಲ್ಕಿ ನಗರ ಪಂಚಾಯತಿ ವತಿಯಿಂದ ಸಂವಿಧಾನ ಶಿಲ್ಪಿ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ರವರ 135 ನೇ ಜನ್ಮದಿನಾಚರಣೆ ಅಂಗವಾಗಿ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ, ಅವರ ಆದರ್ಶಗಳು ಕಾಲಕಾಲಕ್ಕೂ ಪ್ರಸ್ತುತ ಎಂದರು. ಮೂಲ್ಕಿ ನ.ಪಂ. ಮಾಜಿ ಸದಸ್ಯರಾದ ಮಂಜುನಾಥ ಕಂಬಾರ, ಭೀಮಾಶಂಕರ್ ಆರ್ .ಕೆ., ಸಾಮಾಜಿಕ ಕಾರ್ಯಕರ್ತರಾದ ಮಂಜುನಾಥ ಆರ್ .ಕೆ., ಶಿವಾನಂದ ಆರ್ .ಕೆ. ಎಸ್ ರಾವ್ ನಗರ ಮತ್ತಿತರರು ಉಪಸ್ಥಿತರಿದ್ದರು.
ಫೋಟೋ:14ಎಮ್ ಎಲ್ ಕೆ1
ಕ್ಯಾ: ಮೂಲ್ಕಿ ನಗರ ಪಂಚಾಯಿತಿ ವತಿಯಿಂದ ಸಂವಿಧಾನ ಶಿಲ್ಪಿ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ರವರ 135 ನೇ ಜನ್ಮದಿನಾಚರಣೆ ನಡೆಯಿತು.

