ಸಂವಿಧಾನ ಪೀಠಿಕೆ ಓದಿ ಆಚರಣೆ
ಮುಧೋಳ: ನಗರದ ಡಾ.ಬಿ.ಆರ್ .ಅಂಬೇಡ್ಕರ್ ಸರ್ಕಲ್ ಬಳಿ ತಾಲೂಕಾಡಳಿತದಿಂದ ಸಂವಿಧಾನ ಶಿಲ್ಪಿ ಡಾ.ಬಿ.ಆರ್ .ಅಂಬೇಡ್ಕರ್ ಅವರ 135 ನೇ ಜಯಂತಿಯನ್ನು ಸರಳವಾಗಿ ಆಚರಿಸಲಾಯಿತು.
ವೃತ್ತದಲ್ಲಿಡಾ.ಅಂಬೇಡ್ಕರ್ ಪ್ರತಿಮೆಗೆ ತಹಸೀಲ್ದಾರ್ ಡಾ.ಚಿಕ್ಕಪ್ಪ ಎಂ.ನಾಯಕ ಮಾಲಾರ್ಪಣೆ ಮಾಡಿದರು. ತಾಲೂಕು ಮಟ್ಟದ ಅಧಿಕಾರಿಗಳು, ದಲಿತ ಸಮುದಾಯದ ಮುಖಂಡರು ಸಂವಿಧಾನದ ಪೀಠಿಕೆ ಓದಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ತಾಪಂ ಇಒ ಮಲ್ಲಿಕಾರ್ಜುನ ಅಂಬಿಗೇರ, ಸಮಾಜ ಕಲ್ಯಾಣ ಸಹಾಯಕ ನಿರ್ದೇಶಕ ಎಚ್ .ಬಿ.ಪಾಟೀಲ, ಸಿಪಿಐ ಮಹಾದೇವ ಶಿರಹಟ್ಟಿ, ಪೌರಾಯುಕ್ತ ಗೋಪಾಲ ಕಾಸೆ, ಯುವ ಮುಖಂಡ ಹಣಮಂತ ತಿಮ್ಮಾಪೂರ ಇದ್ದರು.
ಫೋಟೊ 14 ಎಂಡಿಎಲ್ 3
ಮುಧೋಳದ ಅಂಬೇಡ್ಕರ್ ಸರ್ಕಲ್ ಬಳಿ ತಾಲೂಕಾಡಳಿತದಿಂದ ಸಂವಿಧಾನ ಶಿಲ್ಪಿ ಡಾ.ಬಿ.ಆರ್ .ಅಂಬೇಡ್ಕರ್ ಜಯಂತಿ ಆಚರಿಸಲಾಯಿತು.

