ಸ್ಟ್ರಾಂಗ್ ರೂಮ್ ಗಳಲ್ಲಿ ಮೂರು ಹಂತದ ಭದ್ರತೆ
ಮೇಲ್ವಿಚಾರಣೆಗೆ ಕಾರ ್ಯನಿರ್ವಾಹಕ ದಂಡಾಧಿಕಾರಿ
ವಿಕ ಸುದ್ದಿಲೋಕ ಕಾಸರಗೋಡು
ಮತಯಂತ್ರಗಳನ್ನು ಇರಿಸಿದ ಸ್ಟ್ರಾಂಗ್ ರೂಮ್ ಗಳಲ್ಲಿ ಮೂರು ಹಂತದ ಭದ್ರತೆ ಏರ್ಪಡಿಸಲಾಗಿದೆ. ಇದರ ಮೇಲ್ವಿಚಾರಣೆಗಾಗಿ ಕಾರ ್ಯನಿರ್ವಾಹಕ ದಂಡಾಧಿಕಾರಿ
ಅವರನ್ನು ನೇಮಕ ಮಾಡಲಾಗಿದೆ.
ಜಿಲ್ಲಾಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಅರ್ಜುನ್ ಪಾಂಡ್ಯನ್ ಅವರು ಕಾಸರಗೋಡು ಸರಕಾರಿ ಕಾಲೇಜಿನ ಸ್ಟ್ರಾಂಗ್ ರೂಮ್ ಗಳಿಗೆ ಭೇಟಿ ನೀಡಿದರು.
2026 ರ ವಿಧಾನಸಭಾ ಚುನಾವಣೆಯ ಭಾಗವಾಗಿ ನೋಂದಾಯಿಸಿದ ಎಲೆಕ್ಟ್ರಾನಿಕ್ ಮತಯಂತ್ರಗಳು ಮತ್ತು ಅಂಚೆ ಮತಪತ್ರಗಳನ್ನು ಹೆಚ್ಚಿನ ಭದ್ರತೆಯಲ್ಲಿ ಇರಿಸಲಾಗಿದೆ. ಕೊಠಡಿಗಳಲ್ಲಿಮೂರು ರೀತಿಯ ಭದ್ರತಾ ವ್ಯವಸ್ಥೆಗಳನ್ನು ಮಾಡಲಾಗಿದೆ. ಮತದಾನ ಯಂತ್ರಗಳನ್ನು ಪ್ರತ್ಯೇಕವಾಗಿ ಇರಿಸಲಾಗುತ್ತದೆ. ಹಾಗೂ ಅಂಚೆ ಮತಪತ್ರಗಳನ್ನು ಪ್ರತ್ಯೇಕ ಕೋಣೆಯಲ್ಲಿಇರಿಸಲಾಗುತ್ತದೆ. ಎಲ್ಲಕೊಠಡಿಗಳ ಹೊರಗೆ ಸಿಸಿಟಿವಿ ಕ್ಯಾಮೆರಾ ವ್ಯವಸ್ಥೆಗಳಿದ್ದು, ಇದನ್ನು ಮೇಲ್ವಿಚಾರಣೆ ಮಾಡಲು ಪ್ರತ್ಯೇಕ ನಿಯಂತ್ರಣ ಕೊಠಡಿಯನ್ನು ಸ್ಥಾಪಿಸಲಾಗಿದೆ. ಭದ್ರತಾ ವ್ಯವಸ್ಥೆಗಳ ಭಾಗವಾಗಿ ಸ್ಟ್ರಾಂಗ್ ರೂಮ್ ಗಳ ಭದ್ರತೆಯನ್ನು ಕೇಂದ್ರ ಸೇನೆ ಒದಗಿಸುತ್ತಿದೆ. ಇದರ ಜತೆಗೆ, ಕೇರಳ ಪೊಲೀಸರನ್ನು ಭದ್ರತೆಗಾಗಿ ನಿಯೋಜಿಸಲಾಗಿದೆ.ಮಂಜೇಶ್ವರ, ಕಾಸರಗೋಡು ಮತ್ತು ಉದುಮ ಕ್ಷೇತ್ರಗಳ ಎಲೆಕ್ಟ್ರಾನಿಕ್ ಮತಯಂತ್ರಗಳು ಮತ್ತು ಅಂಚೆ ಮತಪತ್ರಗಳನ್ನು ಪ್ರತ್ಯೇಕ ಸ್ಟ್ರಾಂಗ್ ರೂಮ್ ಗಳಲ್ಲಿಇರಿಸಲಾಗಿದೆ.
ಚಿತ್ರ:13ಕೆಎಸ್ ಡಿಸಿ,1- ಜಿಲ್ಲಾಧಿಕಾರಿ ಅರ್ಜುನ್ ಪಾಂಡ್ಯನ್ ಸ್ಟ್ರಾಂಗ್ ರೂಂಗಳಿಗೆ ಭೇಟಿ ನೀಡಿ ಭದ್ರತೆ ಪರಿಶೀಲಿಸಿದರು.

