ಬಹುಮಾನಗಳಿಗಾಗಿ ಅರ್ಜಿ ಆಹ್ವಾನ

Contributed bymaheshbadiger05@gmail.com|Vijaya Karnataka

ಕನ್ನಡ ಪುಸ್ತಕ ಪ್ರಾಧಿಕಾರವು 2025ರ ಸಾಲಿನ ಪುಸ್ತಕಗಳಿಗೆ ಸೊಗಸು ಬಹುಮಾನ ಘೋಷಿಸಿದೆ. ಮುದ್ರಣ, ಮುಖಪುಟ ವಿನ್ಯಾಸ, ಗುಣಮಟ್ಟ ಪರಿಗಣಿಸಿ ಪ್ರಶಸ್ತಿ ನೀಡಲಾಗುತ್ತದೆ. ಪ್ರಕಾಶಕರು, ಮುದ್ರಕರು, ಕಲಾವಿದರು ಅರ್ಜಿ ಸಲ್ಲಿಸಬಹುದು. ಪುಸ್ತಕದ ವಿವರಗಳೊಂದಿಗೆ ಎರಡು ಪ್ರತಿಗಳನ್ನು ಮೇ 11ರೊಳಗೆ ಬೆಂಗಳೂರಿನ ಕನ್ನಡ ಪುಸ್ತಕ ಪ್ರಾಧಿಕಾರಕ್ಕೆ ಕಳುಹಿಸಬೇಕು. ಹೆಚ್ಚಿನ ಮಾಹಿತಿಗಾಗಿ ವೆಬ್‌ಸೈಟ್ ಅಥವಾ ಕಚೇರಿಯನ್ನು ಸಂಪರ್ಕಿಸಬಹುದು.

invitation for applications for 2025 kannada book awards

15ಮಹೇಶ14

ಗಮನಿಸಿ: ಇಂಗ್ಲಿಷ್ ಅಕ್ಷರಗಳಿವೆ

ಬಹುಮಾನಗಳಿಗಾಗಿ ಅರ್ಜಿ ಆಹ್ವಾನ

ಧಾರವಾಡ: ಕನ್ನಡ ಪುಸ್ತಕ ಪ್ರಾಧಿಕಾರದಿಂದ 2025ರ ಕ್ಯಾಲೆಂಡರ್ ವರ್ಷದಲ್ಲಿ(ಜನವರಿ ಯಿಂದ ಡಿಸೆಂಬರ್ ) ಕನ್ನಡದಲ್ಲಿಪ್ರಕಟವಾದ ಕೃತಿಗಳಿಗೆ, ಅವುಗಳ ಮುದ್ರಣ, ಮುಖಪುಟ ವಿನ್ಯಾಸ, ಗುಣಮಟ್ಟವನ್ನು ಪರಿಗಣಿಸಿ ವಿವಿಧ ಕನ್ನಡ ಪುಸ್ತಕ ಸೊಗಸು ಬಹುಮಾನಗಳಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತ ಪ್ರಕಾಶಕರು, ಮುದ್ರಕರು, ಕಲಾವಿದರು ಅರ್ಜಿ ಸಲ್ಲಿಸಬಹುದಾಗಿದೆ. ಪುಸ್ತಕದ ಹೆಸರು, ಲೇಖಕರ ಹೆಸರು, ಪ್ರಕಟವಾದ ವರ್ಷ, ಪ್ರಕಾಶಕರ ಹೆಸರು, ಮುದ್ರಣಾಲಯದ ಹೆಸರು, ಮುಖಪುಟ ಚಿತ್ರ ರಚನೆಯ ಕಲಾವಿದರ ಹೆಸರು, ಚಿತ್ರ ಕಲಾವಿದರ ಪೂರ್ಣ ವಿಳಾಸ, ದೂರವಾಣಿ ಸಂಖ್ಯೆ ವಿವರಗಳೊಂದಿಗೆ ಪುಸ್ತಕದ ಎರಡು ಪ್ರತಿಗಳನ್ನು ಅರ್ಜಿ ನಮೂನೆಯೊಂದಿಗೆ ಮೇ 11ರೊಳಗಾಗಿ ಆಡಳಿತಾಧಿಕಾರಿಗಳು, ಕನ್ನಡ ಪುಸ್ತಕ ಪ್ರಾಧಿಕಾರ, ಕನ್ನಡ ಭವನ, ಜೆ.ಸಿ.ರಸ್ತೆ, ಬೆಂಗಳೂರು-560002 ವಿಳಾಸಕ್ಕೆ ಸಲ್ಲಿಸಬೇಕು. ಅರ್ಜಿ ನಮೂನೆಯನ್ನು ವೆಬ್ ಸೈಟ್ hಠಿಠಿps://kpp.ka್ಟ್ಞaಠಿaka.ಜಟv.ಜ್ಞಿ ರಲ್ಲಿಪಡೆಯಬಹುದಾಗಿದೆ. ಮಾಹಿತಿಗೆ ಆಡಳಿತಾಧಿಕಾರಿಗಳು, ಕನ್ನಡ ಪುಸ್ತಕ ಪ್ರಾಧಿಕಾರ, ಕನ್ನಡ ಭವನ, ಮೊದಲನೇ ಮಹಡಿ, ಜೆ.ಸಿ. ರಸ್ತೆ, ಬೆಂಗಳೂರು -560002 ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.