(ಇಂಗ್ಲಿಷ್ ಅಕ್ಷರಗಳಿವೆ)
ಹಾವೇರಿ: ಕನ್ನಡ ಪುಸ್ತಕ ಪ್ರಾಧಿಕಾರದ ವತಿಯಿಂದ 2025ರಲ್ಲಿ(ಜನವರಿಯಿಂದ ಡಿಸೆಂಬರ್ ) ಕನ್ನಡದಲ್ಲಿಪ್ರಕಟವಾದ ಕೃತಿಗಳಿಗೆ, ಅವುಗಳ ಮುದ್ರಣ, ಮುಖಪುಟ ವಿನ್ಯಾಸ, ಗುಣಮಟ್ಟವನ್ನು ಪರಿಗಣಿಸಿ ವಿವಿಧ ಕನ್ನಡ ಪುಸ್ತಕ ಸೊಗಸು ಬಹುಮಾನಗಳಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತ ಪ್ರಕಾಶಕರು/ಮುದ್ರಕರು/ಕಲಾವಿದರು ಅರ್ಜಿ ಸಲ್ಲಿಸಬಹುದಾಗಿದೆ. ಪುಸ್ತಕದ ಹೆಸರು, ಲೇಖಕರ ಹೆಸರು, ಪ್ರಕಟವಾದ ವರ್ಷ, ಪ್ರಕಾಶಕರ ಹೆಸರು, ಮುದ್ರಣಾಲಯದ ಹೆಸರು, ಮುಖಪುಟಚಿತ್ರ ರಚನೆಯ ಕಲಾವಿದರ ಹೆಸರು/ಚಿತ್ರಕಲಾವಿದರ ಪೂರ್ಣವಿಳಾಸ/ದೂರವಾಣಿ ಸಂಖ್ಯೆ ವಿವರದೊಂದಿಗೆ ಪುಸ್ತಕದ ಎರಡು ಪ್ರತಿಗಳನ್ನು ಅರ್ಜಿ ನಮೂನೆಯೊಂದಿಗೆ ಮೇ11ರೊಳಗಾಗಿ ಆಡಳಿತಾಧಿಕಾರಿ, ಕನ್ನಡ ಪುಸ್ತಕ ಪ್ರಾಧಿಕಾರ, ಕನ್ನಡಭವನ, ಮೊದಲ ಮಹಡಿ, ಜೆ.ಸಿ.ರಸ್ತೆ, ಬೆಂಗಳೂರು-560 002 ವಿಳಾಸಕ್ಕೆ ಕಳುಹಿಸಿಕೊಡಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಇಲ್ಲಿಗೆ ಸಂಪರ್ಕಿಸಬಹುದು. ಅರ್ಜಿ ನಮೂನೆಯನ್ನು ವೆಬ್ ಸೈಟ್ hಠಿಠಿps://kpp.ka್ಟ್ಞaಠಿaka.ಜಟv.ಜ್ಞಿ ರಲ್ಲಿಪಡೆಯಬಹುದಾಗಿದೆ.

