ನೇರ ಸಂದರ್ಶನ ನಾಳೆ

Contributed byMruthyunjayar77@gmail.com|Vijaya Karnataka

ಚಿಕ್ಕಬಳ್ಳಾಪುರ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ಮತ್ತು ಸರಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಸಹಯೋಗದಲ್ಲಿ ನಾಳೆ ಏ.18ರಂದು ನೇರ ಸಂದರ್ಶನ ನಡೆಯಲಿದೆ. ಕೋಟಕ್‌ ಮಹೀಂದ್ರ ಬ್ಯಾಂಕ್‌ ಮತ್ತು ಗ್ಲೋಬಲ್‌ ಡಿಜಿಟಲ್‌ ಕಾಲೇಜು ಯಲಹಂಕ ಸಂಸ್ಥೆಗಳು ವಿವಿಧ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಿವೆ. ಪಿಯುಸಿ ಮತ್ತು ಪದವಿ ಪಾಸಾದ 18ರಿಂದ 25 ವರ್ಷದೊಳಗಿನ ಯುವಕ-ಯುವತಿಯರು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಬಹುದು. ಹೆಚ್ಚಿನ ಮಾಹಿತಿಗೆ ನೀಡಲಾದ ದೂರವಾಣಿ ಸಂಖ್ಯೆಗಳಿಗೆ ಸಂಪರ್ಕಿಸಬಹುದು.

direct job interview in chikkaballapura submit your documents opportunities await

ಚಿಕ್ಕಬಳ್ಳಾಪುರ : ಜಿಲ್ಲಾಉದ್ಯೋಗ ವಿನಿಮಯ ಕಚೇರಿ ಹಾಗೂ ಸರಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಚಿಕ್ಕಬಳ್ಳಾಪುರ ಇವರ ಸಹಯೋಗದಲ್ಲಿಜಿಲ್ಲೆಯ ಉದ್ಯೋಗಾಕಾಂಕ್ಷಿಗಳಿಗಾಗಿ ಉದ್ಯೋಗಾವಕಾಶ ಕಲ್ಪಿಸುವ ನಿಟ್ಟಿನಲ್ಲಿಏ.18ರಂದು ಕೋಟಕ್ ಮಹೀಂದ್ರ ಬ್ಯಾಂಕ್ , ಚಿಕ್ಕಬಳ್ಳಾಪುರ ಮತ್ತು ಗ್ಲೋಬಲ್ ಡಿಜಿಟಲ್ ಕಾಲೇಜು ಯಲಹಂಕ ಇಲ್ಲಿನಾನಾ ಹುದ್ದೆಗಳಿಗೆ ನೇರ ಸಂದರ್ಶನ ಕಾರ್ಯಕ್ರಮವನ್ನು ಸರಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿನಲ್ಲಿಹಮ್ಮಿಕೊಳ್ಳಲಾಗಿದೆ.

ಅರ್ಹತೆ: ಪಿಯುಸಿ ಮತ್ತು ಪದವಿ ಪಾಸಾದ ವಿದ್ಯಾರ್ಥಿಗಳು ನೇರ ಸಂದರ್ಶನಕ್ಕೆ ಹಾಜರಾಗಬಹುದು. 18ರಿಂದ 25 ವರ್ಷದೊಳಗಿನ ಅಭ್ಯರ್ಥಿಗಳು ಭಾಗವಹಿಸಬಹುದು. ಮಾಹಿತಿಗೆ 9611880265, 7829496079 ಗೆ ಸಂಪರ್ಕಿಸಬಹುದು ಎಂದು ಜಿಲ್ಲಾಉದ್ಯೋಗಾಧಿಕಾರಿ ಎಂ.ಪ್ರಸಾದ್ ಪ್ರಕಟಣೆಯಲ್ಲಿತಿಳಿಸಿದ್ದಾರೆ.