ವಿಕ ಸುದ್ದಿಲೋಕ ಕಡಬ
ಕಡಬ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿಅಭಿವೃದ್ಧಿ ಕಾಮಗಾರಿಗಳನ್ನು ನಡೆಸಲು ರಾಜ್ಯ ಸರಕಾರ ವಿಶೇಷ ಅನುದಾನ ಒದಗಿಸಬೇಕು ಎಂದು ಕಡಬ ಪಟ್ಟಣ ಪಂಚಾಯಿತಿ ವತಿಯಿಂದ ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್ ಅವರಿಗೆ ಮನವಿ ಸಲ್ಲಿಸಲಾಯಿತು.
ಮಂಗಳೂರು ನಗರ ಪಾಲಿಕೆ ವ್ಯಾಪ್ತಿಯಲ್ಲಿ200 ಕೋಟಿ ರೂ ಅನುದಾನದ ಅಭಿವೃದ್ಧಿ ಕಾಮಗಾರಿಗಳಿಗೆ ಶಿಲಾನ್ಯಾಸ ನೆರವೇರಿಸಲು ಶನಿವಾರ ಆಗಮಿಸಿದ್ದ ಸಚಿವ ಬೈರತಿ ಸುರೇಶ್ ಅವರಿಗೆ ಕಡಬ ಪಟ್ಟಣ ಪಂಚಾಯಿತಿ ಅಧ್ಯಕ್ಷೆ ತಮನ್ನಾ ಜಬಿನ್ ಮನವಿ ಸಲ್ಲಿಸಿದರು.
ಕಡಬ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿಮೂಲ ಸೌಕರ್ಯಗಳ ಅಭಿವೃದ್ಧಿಗೆ ಗಮನ ಹರಿಸಬೇಕಾಗಿದೆ. ರಸ್ತೆ, ಕುಡಿಯುವ ನೀರು, ಒಳಚರಂಡಿ, ಸ್ವಚ್ಛತೆ ಹಾಗೂ ಸಾರ್ವಜನಿಕರ ಸೌಲಭ್ಯಗಳ ಸುಧಾರಣೆಗೆ ಅನುದಾನ ಅಗತ್ಯ ಇದೆ. ಈ ಹಿನ್ನೆಲೆಯಲ್ಲಿಸರಕಾರದಿಂದ ವಿಶೇಷ ಅನುದಾನ ಒದಗಿಸಿ ಕಡಬ ಪಟ್ಟಣ ಪಂಚಾಯಿತಿ ಸಮಗ್ರ ಅಭಿವೃದ್ಧಿಗೆ ಸಹಕರಿಸಬೇಕು ಎಂದು ಅಧ್ಯಕ್ಷರು ಮನವಿ ಮಾಡಿದರು.
ಮನವಿಗೆ ಸ್ಪಂದಿಸಿದ ಸಚಿವರು ಅನುದಾನ ನೀಡುವ ಭರವಸೆ ನೀಡಿದರು. ಈ ಸಂದರ್ಭ ಜಿಲ್ಲಾಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್ , ಜಿಲ್ಲಾಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಉಷಾ ಅಂಚನ್ , ಕಡಬ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅಭಿಲಾಷ್ ಪಿ.ಕೆ., ಸಯ್ಯದ್ ಇಕ್ಬಾಲ್ ಮತ್ತಿತರರು ಉಪಸ್ಥಿತರಿದ್ದರು.
(ರಾಜ್ಯ ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್ ಅವರಿಗೆ ಮನವಿ ಸಲ್ಲಿಸಲಾಯಿತು.ಫೋಟೋ.....19ಕೆಡಿಬಿ ಎಮ್ ಎನ್ ವಿ)

