ಆಳ್ವಾಸ್ ನಲ್ಲಿಮಹಾವೀರ ಸ್ವಾಮಿ ಜನ್ಮಕಲ್ಯಾಣ ಮಹೋತ್ಸವ

Contributed byvkbedra@gmail.com|Vijaya Karnataka

ಮೂಡುಬಿದಿರೆಯ ವಿದ್ಯಾಗಿರಿಯಲ್ಲಿ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ವತಿಯಿಂದ ಭಗವಾನ್ ಶ್ರೀ ಮಹಾವೀರ ಸ್ವಾಮಿ ಜನ್ಮ ಕಲ್ಯಾಣ ಮಹೋತ್ಸವ ನಡೆಯಿತು. 3000ಕ್ಕೂ ಅಧಿಕ ಜನರು ಪಾಲ್ಗೊಂಡಿದ್ದರು. ಜಿನಭಜನೆ, ಮೆರವಣಿಗೆ, ದ್ರವ್ಯಾಭಿಷೇಕ, ಅಷ್ಟವಿಧಾರ್ಚನೆ ಪೂಜೆ, ಮಹಾಮಂಗಳಾರತಿ ಜರುಗಿದವು. ಹೊರನಾಡಿನ ಜಯಶ್ರೀ ಧರಣೇಂದ್ರ ಜೈನ್ ಮತ್ತು ಬಳಗದವರಿಂದ ಜಿನಭಕ್ತಿ ಗಾಯನ ನಡೆಯಿತು. ಮಾಜಿ ಸಚಿವ ಕೆ. ಅಭಯಚಂದ್ರ ಜೈನ್, ಅನಿತಾ ಸುರೇಂದ್ರ ಕುಮಾರ್ ಅವರನ್ನು ಸನ್ಮಾನಿಸಲಾಯಿತು.

mahaveer swami birth celebration held grandly in alvas

3000ಕ್ಕೂ ಅಧಿಕ ಜನರು ಭಾಗಿ | ನಾನಾ ಧಾರ್ಮಿಕ ಕಾರ ್ಯಕ್ರಮ

ವಿಕ ಸುದ್ದಿಲೋಕ ಮೂಡುಬಿದಿರೆ

ಕರಾವಳಿ ಹಾಗೂ ಮಲೆನಾಡಿನ ಸಮಸ್ತ ಜೈನ ಬಾಂಧವರ ಸಹಯೋಗದೊಂದಿಗೆ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ವತಿಯಿಂದ ಭಗವಾನ್ ಶ್ರೀ ಮಹಾವೀರ ಸ್ವಾಮಿ ಜನ್ಮ ಕಲ್ಯಾಣ ಮಹೋತ್ಸವ ವಿದ್ಯಾಗಿರಿಯಲ್ಲಿಭಾನುವಾರ ನಡೆಯಿತು.

ಆಳ್ವಾಸ್ ವಿದ್ಯಾರ್ಥಿಗಳಿಂದ ಜಿನಭಜನೆ ನಡೆಯಿತು. ಕೊಂಬು ವಾದ್ಯ, ನಾದಸ್ವರ, ಪೂರ್ಣಕುಂಭದೊಂದಿಗೆ ಮಹಾವೀರ ಸ್ವಾಮಿ ಜಿನಬಿಂಬದ ಮೆರವಣಿಗೆ, ತೋರಣ ಮುಹೂರ್ತ, ದ್ರವ್ಯಾಭಿಷೇಕ, ಅಷ್ಟವಿಧಾರ್ಚನೆ ಪೂಜೆ, ಮಹಾಮಂಗಳಾರತಿ ಹಮ್ಮಿಕೊಳ್ಳಲಾಯಿತು.

ಹೊರನಾಡಿನ ಜಯಶ್ರೀ ಧರಣೇಂದ್ರ ಜೈನ್ ಮತ್ತು ಬಳಗದವರಿಂದ ಜಿನಭಕ್ತಿ ಗಾಯನ ನಡೆಯಿತು. ಸುತ್ತಮುತ್ತಲಿನ ವಾತಾವರಣಕ್ಕೆ ಧಾರ್ಮಿಕ ವೈಭವದ ಸ್ಪರ್ಶ ನೀಡುವ ಉದ್ದೇಶದಿಂದ 24 ತೀಥಂರ್ ಕರರ ವಿಗ್ರಹಗಳನ್ನು ಇಡಲಾಗಿತ್ತು. ಜಲಾಭಿಷೇಕದಿಂದ ಆರಂಭಗೊಂಡ ಪೂಜಾ ವಿಧಿಗಳು ಎಳನೀರು, ಇಕ್ಷುರಸ, ಕ್ಷೀರ, ಕಷಾಯ, ಕಾಶ್ಮೀರಿ ಕೇಸರಿ, ಕಲ್ಕಚೂರ್ಣ, ಅರಿಶಿನ, ಚತುಷ್ಕೋನ ಕಳಶ, ಚಂದನ ಹಾಗೂ ಅಷ್ಟಗಂಧದ ದ್ರವ್ಯಗಳಿಂದ ಅಭಿಷೇಕ ಭಕ್ತಿಭಾವದಿಂದ ನೆರವೇರಿತು. ಬಳಿಕ ಕನಕ ಪುಷ್ಪವೃಷ್ಟಿಯೊಂದಿಗೆ ವಿಶೇಷ ಅಭಿಷೇಕ ನಡೆಯಿತು. ಶಾಂತಿ ಮಂತ್ರಗಳ ಮಂಗಳಧ್ವನಿಯ ನಡುವೆ ಪೂರ್ಣಕುಂಭ ಮತ್ತು ಮಹಾಮಂಗಳಾರತಿ ನಡೆಯಿತು.

ಸಭಾ ಕಾರ್ಯಕ್ರಮದಲ್ಲಿಮಾಜಿ ಸಚಿವ ಕೆ. ಅಭಯಚಂದ್ರ ಜೈನ್ , ಚೌಟರ ಅರಮನೆಯ ಅನಿತಾ ಸುರೇಂದ್ರ ಕುಮಾರ್ ಅವರನ್ನು ಸನ್ಮಾನಿಸಲಾಯಿತು.

ಕಾರ ್ಯಕ್ರಮದಲ್ಲಿಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ. ಮೋಹನ್ ಆಳ್ವ, ಪಟ್ನಶೆಟ್ಟಿ ಸುದೇಶ್ ಕುಮಾರ್ , ಚೌಟರ ಅರಮನೆಯ ಕುಲದೀಪ್ ಎಂ., ಆದಶ್ ರ್ ಜೈನ್ , ಎರ್ಮಾಳು ಬೀಡು ಸೂರಜ್ ಕುಮಾರ್ , ಕುತ್ಯಾರು ಅರಮನೆ ಜಿನೇಶ್ ಬಲ್ಲಾಳ್ , ರತ್ನಾಕರ್ ಜೈನ್ , ಪಡುಬಿದ್ರಿ ಅರಮನೆಯ ಅರಸರು, ಕೂಳೂರಿನ ಆಶಿಕ್ ಕುಮಾರ್ , ದುಗ್ಗಣ್ಣ ಸಾವಂತರು, ಪಡ್ಯಾರ್ ಬೆಟ್ಟಿನ ಜೀವಂಧರ ಕುಮಾರ್ , ಉದ್ಯಮಿ ಶ್ರೀಪತಿ ಭಟ್ , ಟ್ರಸ್ಟಿ ವಿವೇಕ್ ಆಳ್ವ, ಅವಿಭಜಿತ ದ.ಕ. ಹಾಗೂ ಉಡುಪಿ ಜಿಲ್ಲೆಯ ವಿವಿಧ ಅರಸು ಮನೆತನದ ಅರಸರು, ಬೀಡುಮನೆತನದ ಯಜಮಾನರು ಇದ್ದರು. ನಿವೃತ್ತ ಮುಖ್ಯಶಿಕ್ಷಕ ಮುನಿರಾಜ ರೆಂಜಾಳ ಹಾಗೂ ಶಿಕ್ಷಕ ನವೀನಚಂದ್ರ ಅಂಬೂರಿ ಕಾರ್ಯಕ್ರಮ ನಿರೂಪಿಸಿದರು. ಕಾರ ್ಯಕ್ರಮದಲ್ಲಿ3000ಕ್ಕೂ ಅಧಿಕ ಜನರು ಭಾಗವಹಿಸಿದ್ದರು.

ಚಿತ್ರ: 20 ಎಂಡಿಬಿ ಮಹಾವೀರ 1

20 ಎಂಡಿಬಿ ಮಹಾವೀರ 2