ಶ್ರೀ ಶಂಕರಾಚಾರ್ಯ ಜಯಂತ್ಯುತ್ಸವ ಇಂದು

Contributed bytvlbdr@gmail.com|Vijaya Karnataka

ಬೀದರ್‌ನಲ್ಲಿ ಇಂದು ಸಂಜೆ 4.30ಕ್ಕೆ ಶ್ರೀ ಶಂಕರಾಚಾರ್ಯ ಜಯಂತ್ಯುತ್ಸವ ಕಾರ್ಯಕ್ರಮ ನಡೆಯಲಿದೆ. ಪೂಜ್ಯ ಶ್ರೀ ಜ್ಯೋತಿರ್ಮಯಾನಂದ ಮಹಾರಾಜರು ದಿವ್ಯ ಸಾನ್ನಿಧ್ಯ ವಹಿಸಲಿದ್ದಾರೆ. ಸಚಿವ ಈಶ್ವರ ಬಿ.ಖಂಡ್ರೆ ಕಾರ್ಯಕ್ರಮ ಉದ್ಘಾಟಿಸಲಿದ್ದು, ಸಚಿವ ರಹೀಂ ಖಾನ್ ಅಧ್ಯಕ್ಷತೆ ವಹಿಸಲಿದ್ದಾರೆ. ಹಲವು ಗಣ್ಯರು ಭಾಗವಹಿಸಲಿದ್ದಾರೆ. ಹರಿಕೇಶ್‌ ಕುಲಕರ್ಣಿ ಅತಿಥಿ ಉಪನ್ಯಾಸ ನೀಡಲಿದ್ದಾರೆ.

sri shankaracharya jayantyutsava 2023 event details and guests

ಚಿತ್ರ:ಶಂಕರಾಚಾರ ್ಯ, ಚಿತ್ರವಿದೆ ಬಳಸಿ

ಶ್ರೀ ಶಂಕರಾಚಾರ್ಯ ಜಯಂತ್ಯುತ್ಸವ ಇಂದು

ವಿಕಸುದ್ದಿಲೋಕ ಬೀದರ್

ಜಿಲ್ಲಾಡಳಿತ, ಜಿಲ್ಲಾಪಂಚಾಯಿತಿ, ಮಹಾನಗರ ಪಾಲಿಕೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಂಯುಕ್ತಾಶ್ರಯದಲ್ಲಿಏ.21ರಂದು ಸಂಜೆ 4.30ಕ್ಕೆ ಪೂಜ್ಯ ಶ್ರೀ ಡಾ.ಚನ್ನಬಸವ ಪಟ್ಟದೇವರು ರಂಗಮಂದಿರದಲ್ಲಿಶ್ರೀ ಶಂಕರಾಚಾರ್ಯ ಜಯಂತ್ಯುತ್ಸವ ಕಾರ್ಯಕ್ರಮ ಆಯೋಜಿಸಲಾಗಿದೆ.

ಕಾರ್ಯಕ್ರಮದ ದಿವ್ಯ ಸಾನ್ನಿಧ್ಯವನ್ನು ಬೀದರ್ ನ ವಿವೇಕಾನಂದ ಆಶ್ರಮದ ಪೂಜ್ಯ ಶ್ರೀ ಜ್ಯೋತಿರ್ಮಯಾನಂದ ಮಹಾರಾಜರು ವಹಿಸಲಿದ್ದಾರೆ. ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಹಾಗೂ ಬೀದರ್ ಜಿಲ್ಲಾಉಸ್ತುವಾರಿ ಸಚಿವ ಈಶ್ವರ ಬಿ.ಖಂಡ್ರೆ ಅವರು ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಪೌರಾಡಳಿತ ಹಾಗೂ ಹಜ್ ಸಚಿವರಾದ ರಹೀಂ ಖಾನ್ ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಸಂಸದ ಸಾಗರ ಈಶ್ವರ ಖಂಡ್ರೆ, ಕರ್ನಾಟಕ ಮೀನುಗಾರಿಕೆ ಅಭಿವೃದ್ಧಿ ನಿಗಮದ ಅಧ್ಯಕ್ಷ ಮಾಲಾ ನಾರಾಯಣರಾವ್ , ಶಾಸಕರಾದ ಪ್ರಭು ಬಿ.ಚವ್ಹಾಣ್ , ಶರಣು ಸಲಗರ, ಡಾ.ಶೈಲೇಂದ್ರ ಕೆ.ಬೆಲ್ದಾಳೆ, ಡಾ.ಸಿದ್ದು ಪಾಟೀಲ, ವಿಧಾನ ಪರಿಷತ್ ಶಾಸಕರುಗಳಾದ ಡಾ.ಚಂದ್ರಶೇಖರ ಬಿ.ಪಾಟೀಲ್ , ಶಶೀಲ ಜಿ.ನಮೋಶಿ, ಭೀಮರಾವ ಪಾಟೀಲ್ ,ಡಾ.ಎಂ.ಜಿ.ಮೂಳೆ ಹಾಗೂ ಅಚ್ಚುಕಟ್ಟು ಪ್ರದೇಶಾಭಿವೃದ್ಧಿ ಪ್ರಾಧಿಕಾರ,ಕೃಷ್ಣಾ ಮೇಲ್ದಂಡೆ ಯೋಜನೆ (ಕಾಡಾ) ಭೀಮರಾಯನಗುಡಿ ಕಲಬುರಗಿಯ ಅಧ್ಯಕ್ಷ ಬಾಬು ಹೊನ್ನನಾಯ್ಕ, ಮಹಾನಗರ ಪಾಲಿಕೆ ಅಧ್ಯಕ್ಷ ಮಹಮ್ಮದ ಗೌಸ, ಬೀದರ್ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಬಸವರಾಜ ಜಾಬಶೆಟ್ಟಿ ಅವರುಗಳು ಭಾಗವಹಿಸಲಿದ್ದಾರೆ. ಹಾಗೂ ಬೀದರ್ ನ ಋುಗ್ವೇದ ಘನಪಾಠಿಗಳಾದ ಹರಿಕೇಶ್ ಕುಲಕರ್ಣಿ ಅವರು ಅತಿಥಿ ಉಪನ್ಯಾಸ ನೀಡಲಿದ್ದಾರೆ.