ರಾಹುಲ್ ಗಾಂಧಿ ಕೇಸ್ ವಿಚಾರಣೆಯಿಂದ ಜಡ್ಜ್ ಹಿಂದಕ್ಕೆ

Contributed byBeeralinge gowda|Vijaya Karnataka

ರಾಹುಲ್‌ ಗಾಂಧಿ ಅವರ ದ್ವಿಪೌರತ್ವ ಪ್ರಕರಣದ ವಿಚಾರಣೆಯಿಂದ ಅಲಹಾಬಾದ್‌ ಹೈಕೋರ್ಟ್‌ ನ್ಯಾಯಾಧೀಶರು ಹಿಂದೆ ಸರಿದಿದ್ದಾರೆ. ಅರ್ಜಿದಾರರ ಸಾಮಾಜಿಕ ಮಾಧ್ಯಮ ಪೋಸ್ಟ್‌ಗಳ ಬಗ್ಗೆ ನ್ಯಾಯಾಧೀಶರು ಅಸಮಾಧಾನ ವ್ಯಕ್ತಪಡಿಸಿದರು. ಪ್ರಕರಣವನ್ನು ರಾಜಕೀಯ ಲಾಭಕ್ಕಾಗಿ ಬಳಸಲಾಗಿದೆ ಎಂದು ಅವರು ಅಭಿಪ್ರಾಯಪಟ್ಟರು. ಈ ಹಿನ್ನೆಲೆಯಲ್ಲಿ ವಿಚಾರಣೆಯಿಂದ ಹಿಂದೆ ಸರಿಯುವುದಾಗಿ ನ್ಯಾಯಾಧೀಶರು ತಿಳಿಸಿದರು.

judge withdraws from rahul gandhi case serious objections raised

ಲಖನೌ: ಲೋಕಸಭೆ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ವಿರುದ್ಧದ ದ್ವಿಪೌರತ್ವ ಪ್ರಕರಣದ ವಿಚಾರಣೆಯಿಂದ ಅಲಹಾಬಾದ್ ಹೈಕೋರ್ಟ್ ಲಖನೌ ಪೀಠದ ನ್ಯಾ.ಸುಭಾಷ್ ವಿದ್ಯಾರ್ಥಿ ಅವರು ಸೋಮವಾರ ಹಿಂದೆ ಸರಿದಿದ್ದಾರೆ.

ರಾಹುಲ್ ಗಾಂಧಿ ದ್ವಿಪೌರತ್ವ ಹೊಂದಿದಾರೆ ಎಂದು ಆರೋಪಿಸಿರುವ ಅರ್ಜಿದಾರ ವಿಘ್ನೇಶ್ ಶಿಶಿರ್ ಅವರ ಸಾಮಾಜಿಕ ಮಾಧ್ಯಮಗಳ ಪೋಸ್ಟ್ ಗಳು ಮತ್ತು ಮಾಧ್ಯಮ ಸಂದರ್ಶನಗಳಿಗೆ ಕೋರ್ಟ್ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ.

ಸಾಮಾಜಿಕ ಮಾಧ್ಯಮ ಪೋಸ್ಟ್ ಗಳ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ ನ್ಯಾಯಮೂರ್ತಿ ಸುಭಾಷ್ ವಿದ್ಯಾರ್ಥಿ, ಅರ್ಜಿದಾರರು ಪ್ರಕರಣವನ್ನು ‘ರಾಜಕೀಯ ಲಾಭಕ್ಕಾಗಿ‘ ಬಳಸಿಕೊಂಡಿದ್ದಾರೆ ಎಂದು ಮೌಖಿಕವಾಗಿ ಅಭಿಪ್ರಾಯ ವ್ಯಕ್ತಪಡಿಸಿ, ವಿಚಾರಣೆಯಿಂದ ಹಿಂದೆ ಸರಿಯುತ್ತಿರುವುದಾಗಿ ಪ್ರಕಟಿಸಿದರು.