ಬಾಲ್ಯವಿವಾಹ ಮುಕ್ತ ಜಿಲ್ಲೆಗೆ ಶ್ರಮಿಸಿ
ಜಿಲ್ಲಾಮಕ್ಕಳ ರಕ್ಷಣಾ ಘಟಕದ ಶಿವಲೀಲಾ ವನ್ನೂರು ಹೇಳಿಕೆ
ವಿಕ ಸುದ್ದಿಲೋಕ ಕೊಪ್ಪಳ
‘‘ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ತಡೆಗಟ್ಟುವುದು ಮತ್ತು ಬಾಲ್ಯವಿವಾಹ ಮುಕ್ತ ಜಿಲ್ಲೆಯನ್ನಾಗಿ ಮಾಡಲು ಮುಂದಾಗಬೇಕು,’’ ಎಂದು ಜಿಲ್ಲಾಮಕ್ಕಳ ರಕ್ಷಣಾ ಘಟಕದ ಶಿವಲೀಲಾ ವನ್ನೂರು ಹೇಳಿದರು.
ಕನಕಗಿರಿ ತಾಲೂಕಿನ ಜೀರಾಳ ಗ್ರಾಮ ಪಂಚಾಯಿತಿ ಸಭಾಂಗಣದಲ್ಲಿಮಕ್ಕಳ ಹಕ್ಕು, ಕಾನೂನು ಮತ್ತು ಮಕ್ಕಳ ಸುರಕ್ಷತೆ ಕುರಿತು ನಡೆದ ಜಾಗೃತಿ ಕಾರ್ಯಕ್ರಮದಲ್ಲಿಮಾತನಾಡಿದರು.
18 ವರ್ಷದೊಳಗಿನ ಮಕ್ಕಳ ಮೇಲಿನ ದೌರ್ಜನ್ಯ ತಡೆಗೆ ಸರಕಾರ ತಂದಿರುವ ಪೋಕ್ಸೊ ಕಾಯಿದೆ ಬಗ್ಗೆ ವಿವರಿಸಿದರು. ಲೈಂಗಿಕ ದೌರ್ಜನ್ಯ ಎಸಗುವವರಿಗೆ 20 ವಷ
ದಿಂದ ಜೀವಿತಾವಧಿಯವರೆಗೆ ಶಿಕ್ಷೆ ಮತ್ತು ದಂಡ ವಿಧಿಸಲು ಕಾನೂನಿನಲ್ಲಿಅವಕಾಶವಿದೆ ಎಂದು ಎಚ್ಚರಿಸಿದರು.
ಗ್ರಾಮ ಮಟ್ಟದಲ್ಲಿಜಾಗೃತಿ ಮೂಡಿಸಲು ಗ್ರಾಮ ಮಟ್ಟದ ಮಕ್ಕಳ ರಕ್ಷಣಾ ಸಮಿತಿಯಲ್ಲಿಚರ್ಚಿಸಿ, ಮಕ್ಕಳ ಹಕ್ಕು, ಕಾನೂನು ಮತ್ತು ಮಕ್ಕಳ ಸುರಕ್ಷತೆ ಕುರಿತು
ಸಮುದಾಯಗಳಲ್ಲಿಜಾಗೃತಿಯನ್ನು ಮೂಡಿಸಿ, ಮಕ್ಕಳ ಮೇಲಿನ ಲೈಂಗಿಕ ಹಲ್ಲೆ, ಬಾಲ್ಯವಿವಾಹ ತಡೆದು ಬಾಲ್ಯವಿವಾಹ ಮುಕ್ತ ಜಿಲ್ಲೆಯನ್ನಾಗಿಸಲು ಸಹಕರಿಸುವಂತೆ ತಿಳಿಸಿದರು.
ಸಂಪನ್ಮೂಲ ವ್ಯಕ್ತಿಗಳಾದ ಪ್ರತಿಭಾ ಕಾಶಿಮಠ ಮಾತನಾಡಿದರು.
ಜೀರಾಳ ಗ್ರಾ.ಪಂ ಆಡಳಿತಾಧಿಕಾರಿ ಅಭಿಲಾಷ, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಚಂದುಸ್ವಾಮಿ ದೊಡ್ಡಮನಿ, ವಲಯ ಸಂಪನ್ಮೂಲ ವ್ಯಕ್ತಿ ಗೀತಾ, ಸಮೂಹ ಸಂಪನ್ಮೂಲ ಅಧಿಕಾರಿ ಕೊಟ್ರೇಶ, ಸಹಾಯಕ ಪೊಲೀಸ್ ಆರಕ್ಷಕ ನಿರೀಕ್ಷಕರಾದ ನಿಂಗಪ್ಪ, ಅಂಗನವಾಡಿ ಮೇಲ್ವಿಚಾರಕಿ ಚಂದ್ರಕಲಾ ಇದ್ದರು.
==
27-ಕೆಪಿಎಲ್ ವಿಠ್ಠಲ ಫೊಟೊ-22
ಕೊಪ್ಪಳ ಜಿಲ್ಲೆಯ ಕನಕಗಿರಿ ತಾಲೂಕಿನ ಜೀರಾಳ ಗ್ರಾಮ ಪಂಚಾಯಿತಿ ಸಭಾಂಗಣದಲ್ಲಿಮಕ್ಕಳ ಹಕ್ಕು, ಕಾನೂನು ಮತ್ತು ಮಕ್ಕಳ ಸುರಕ್ಷತೆ ಕುರಿತು ಜಾಗೃತಿ ಕಾರ್ಯಕ್ರಮ ನಡೆಯಿತು.

