ಮಂಗಳೂರು: ವಿ.ಆರ್ .ಎನ್ ಇನ್ಫೋಟೆಕ್ ಖಾಸಗಿ ಕಂಪನಿಯ ವತಿಯಿಂದ ಮಂಗಳೂರಿನಲ್ಲಿಖಾಲಿಯಿರುವ ಕಸ್ಟಮರ್ ಸಪೋರ್ಟ್ ಎಕ್ಸಿಕ್ಯೂಟಿವ್ ಅಥವಾ ಟೆಲಿಕಾಲರ್ ಹುದ್ದೆಗಳಿಗೆ ನೇರ ಸಂದರ್ಶನವನ್ನು ಏ.28 ರಂದು ಪಡೀಲ್ ಜಿಲ್ಲಾಧಿಕಾರಿ ಕಚೇರಿಯಲ್ಲಿರುವ ಜಿಲ್ಲಾಉದ್ಯೋಗ ವಿನಿಮಯ ಕಚೇರಿಯಲ್ಲಿಬೆಳಗ್ಗೆ 10 ರಿಂದ ಮಧ್ಯಾಹ್ನ 1.30 ರವರೆಗೆ ಆಯೋಜಿಸಲಾಗಿದೆ.
ನೇರ ಸಂದರ್ಶನದಲ್ಲಿಪದವಿ ಹೊಂದಿರುವ ಪುರುಷ ಹಾಗೂ ಮಹಿಳಾ ಅಭ್ಯರ್ಥಿಗಳು ಸ್ವ-ವಿವರವುಳ್ಳ ಬಯೋಡೇಟಾದೊಂದಿಗೆ ನೇರ ಸಂದರ್ಶನದಲ್ಲಿಭಾಗವಹಿಸಬಹುದು. ಹೆಚ್ಚಿನ ಮಾಹಿತಿಗೆ ಜಿಲ್ಲಾಉದ್ಯೋಗ ವಿನಿಮಯ ಕೇಂದ್ರವನ್ನು ಸಂಪರ್ಕಿಸಬಹುದು ಎಂದು ಜಿಲ್ಲಾಉದ್ಯೋಗಾಧಿಕಾರಿ ಪ್ರಕಟಣೆಯಲ್ಲಿತಿಳಿಸಿದ್ದಾರೆ.

