1,40,719 ಅರ್ಜಿ ವಿಲೇವಾರಿ, 11ಬಿ ಅಡಿ 82,640 ಸ್ವೀಕಾರ | ಸಚಿವ ಪ್ರಿಯಾಂಕ್ ಖರ್ಗೆ ಮಾಹಿತಿ

Contributed byshashidhar.nandikal@timesgroup.com|Vijaya Karnataka

ಇ-ಸ್ವತ್ತು 2.0 ತಂತ್ರಾಂಶದಡಿ ಅರ್ಜಿ ವಿಲೇವಾರಿ ಪ್ರಕ್ರಿಯೆ ಚುರುಕುಗೊಂಡಿದೆ. ಒಟ್ಟು 1,40,719 ಅರ್ಜಿಗಳನ್ನು ಅನುಮೋದಿಸಿ ವಿಲೇವಾರಿ ಮಾಡಲಾಗಿದೆ. 11ಬಿ ಅಡಿ 82,640 ಅರ್ಜಿಗಳು ಸ್ವೀಕೃತವಾಗಿವೆ. ಬಾಕಿ ಇರುವ ಅರ್ಜಿಗಳನ್ನು ತ್ವರಿತವಾಗಿ ವಿಲೇವಾರಿ ಮಾಡಲು ಅಧಿಕಾರಿಗಳಿಗೆ ಸೂಚಿಸಲಾಗಿದೆ. ಮುಂದಿನ 10 ದಿನಗಳಲ್ಲಿ ವಿದೇಶಿ ಅರ್ಜಿದಾರರಿಗೆ ಪಾಸ್‌ಪೋರ್ಟ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗುವುದು.

140719 application processing and 82640 applications approved under 11b minister priyank kharge

ವಿಕ ಸುದ್ದಿಲೋಕ ಬೆಂಗಳೂರು ರಾಜ್ಯಾದ್ಯಂತ ಇ-ಸ್ವತ್ತು 2.0 ತಂತ್ರಾಂಶದಡಿ ಸ್ವೀಕರಿಸುತ್ತಿರುವ ಅರ್ಜಿ ವಿಲೇವಾರಿ ಪ್ರಕ್ರಿಯೆ ತೀವ್ರಗೊಳಿಸಲಾಗಿದೆ. ಈವರೆಗೆ ಒಟ್ಟು 1,40,719 ಅರ್ಜಿ ಅನುಮೋದಿಸಿ ವಿಲೇವಾರಿ ಮಾಡಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ. ಹೊಸ ನಮೂನೆ 11ಬಿ ಅಡಿ ಈವರೆಗೆ 82,640 ಅರ್ಜಿ ಸ್ವೀಕೃತವಾಗಿದ್ದು, ನಾನಾ ಹಂತಗಳಲ್ಲಿಅನುಮೋದನೆಗೆ ಬಾಕಿ ಉಳಿದಿವೆ. ಈ ಅರ್ಜಿಗಳನ್ನು ತ್ವರಿತವಾಗಿ ವಿಲೇವಾರಿ ಮಾಡಲು ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಮಾಧ್ಯಮ ಪ್ರಕಟಣೆ ಹೊರಡಿಸಿದ್ದಾರೆ. ‘‘ಇ-ಸ್ವತ್ತು 2.0 ತಂತ್ರಾಂಶದಡಿ ಸಾರ್ವಜನಿಕರಿಂದ ಇದುವರೆಗೆ ಒಟ್ಟು 1,52,863 ಅರ್ಜಿಗಳು ಸ್ವೀಕೃತವಾಗಿವೆ. ಇವುಗಳಲ್ಲಿ7,896 ಅರ್ಜಿಗಳು ಗ್ರಾಮ ಪಂಚಾಯತಿ ಕಾರ್ಯದರ್ಶಿಗಳ ಲಾಗಿನ್ ನಲ್ಲಿ, 3,182 ಅರ್ಜಿಗಳು ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳ ಲಾಗಿನ್ ನಲ್ಲಿ, 4,036 ಅರ್ಜಿಗಳು ಗ್ರಾಮ ಪಂಚಾಯತಿ ಅಧ್ಯಕ್ಷರ/ಆಡಳಿತಾಧಿಕಾರಿ ಲಾಗಿನ್ ನಲ್ಲಿಹಾಗೂ 1,947 ಅರ್ಜಿಗಳು ತಾಲೂಕು ಪಂಚಾಯಿತಿ ಕಾರ್ಯ ನಿರ್ವಾಹಕ ಅಧಿಕಾರಿಗಳ ಲಾಗಿನ್ ನಲ್ಲಿಅನುಮೋದನೆಗಾಗಿ ಬಾಕಿಯಿವೆ. 950 ಅರ್ಜಿಗಳು ಕಾರ್ಯ ನಿರ್ವಾಹಕ ಅಧಿಕಾರಿಗಳಿಂದ ಅನುಮೋದನೆಗೊಂಡು ಪಂಚಾಯತ್ ಅಭಿವೃದ್ಧಿ

ಅಧಿಕಾರಿಗಳ ಲಾಗಿನ್ ನಲ್ಲಿವೆ. ಈ ರೀತಿ ನಾನಾ ಹಂತಗಳಲ್ಲಿಒಟ್ಟು 18,011 ಅರ್ಜಿಗಳು ಅನುಮೋದನೆಗಾಗಿ ಬಾಕಿಯಿವೆ,’’ ಎಂದು ಮಾಹಿತಿ ನೀಡಿದ್ದಾರೆ. ‘‘ಹೊರದೇಶದ ಅರ್ಜಿದಾರರಿಗೆ ಇ-ಸ್ವತ್ತು ತಂತ್ರಾಂಶದಲ್ಲಿಪಾಸ್ಪೋರ್ಟ್ ಮೂಲಕ ಅರ್ಜಿ ಸಲ್ಲಿಸಲು ಹಾಗೂ ಹೊಸ ಬಡಾವಣೆಗಳಿಗೆ ಇ-ಸ್ವತ್ತು ತಂತ್ರಾಂಶದಡಿ ಅರ್ಜಿ ಸಲ್ಲಿಸಲು ಅವಕಾಶವನ್ನು ಮುಂದಿನ 10 ದಿನದೊಳಗೆ ಕಲ್ಪಿಸಲಾಗುವುದು. ಸಾರ್ವಜನಿಕರು ಇ-ಸ್ವತ್ತು 2.0 ತಂತ್ರಾಂಶದ ಮೂಲಕ ಆನ್ ಲೈನ್ ನಲ್ಲಿಅರ್ಜಿ ಸಲ್ಲಿಸಲು ಹಾಗೂ ಸಾರ್ವಜನಿಕರಿಗೆ ಅನುಕೂಲವಾಗುವಂತೆ ಮಾಡಲಾಗಿದೆ. ಬಾಪೂಜಿ ಸೇವಾ ಕೇಂದ್ರಗಳಲ್ಲಿಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಗ್ರಾಮೀಣಾಭಿವೃದ್ಧಿ ಮತ್ತು

ಪಂಚಾಯತ್ ರಾಜ್ ಇಲಾಖೆಯು ವಿದ್ಯುನ್ಮಾನ ನಾಗರಿಕ ಸೇವಾ ವಿತರಣಾ ನಿರ್ದೇಶನಾಲಯದ ಸಹಯೋಗದೊಂದಿಗೆ ಇ-ಸ್ವತ್ತು ಅರ್ಜಿಗಳನ್ನು ಗ್ರಾಮ ಒನ್ , ಕರ್ನಾಟಕ ಒನ್ ಹಾಗೂ ಬೆಂಗಳೂರು ಒನ್ ಕೇಂದ್ರಗಳ ಮೂಲಕ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ,’’ ಎಂದು ಹೇಳಿದ್ದಾರೆ.