ಕೇರಳದಲ್ಲಿಮುಂದಿನ ನಾಲ್ಕು ದಿನ ಬೇಸಿಗೆ ಮಳೆÜ ಸಾಧ್ಯತೆ

Contributed bygangadhar.korekkana@gmail.com|Vijaya Karnataka

ಕಾಸರಗೋಡು: ಕೇರಳದಲ್ಲಿ ಮುಂದಿನ ನಾಲ್ಕು ದಿನಗಳ ಕಾಲ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಗಂಟೆಗೆ 40-50 ಕಿ.ಮೀ. ವೇಗದಲ್ಲಿ ಗಾಳಿ ಬೀಸಲಿದೆ. ಮಳೆಯ ಸಮಯದಲ್ಲಿ ಕಿಟಕಿ, ಬಾಗಿಲುಗಳನ್ನು ಮುಚ್ಚಿ ಸುರಕ್ಷಿತ ಸ್ಥಳದಲ್ಲಿರಬೇಕು. ವಿದ್ಯುತ್ ಉಪಕರಣಗಳಿಂದ ದೂರವಿರಲು ಸೂಚಿಸಲಾಗಿದೆ. ಜನರು ಎಚ್ಚರಿಕೆಯಿಂದ ಇರಬೇಕು.

advance warning of summer rain and strong winds in kerala

ಕಾಸರಗೋಡು: ಕೇರಳದ ಪ್ರತ್ಯೇಕ ಸ್ಥಳಗಳಲ್ಲಿ ಮುಂದಿನ 4 ದಿನಗಳವರೆಗೆ ಗುಡುಗು ಸಹಿತ ಮಳೆ ಮತ್ತು ಗಂಟೆಗೆ 40-50 ಕಿ.ಮೀ. ವೇಗದಲ್ಲಿಬಲವಾದ ಗಾಳಿ ಬೀಸುವ ಸಾಧ್ಯತೆಯಿದೆ ಎಂದು ಕೇಂದ್ರ ಹವಾಮಾನ ಇಲಾಖೆ ತಿಳಿಸಿದೆ.

ಗುಡುಗು ಸಹಿತ ಮಳೆ ಮುನ್ನೆಚ್ಚರಿಕೆ: ಬಲವಾದ ಗಾಳಿ ಮತ್ತು ಗುಡುಗು ಸಹಿತ ಮಳೆಯಾಗುವ ಸಮಯದಲ್ಲಿಕಿಟಕಿಗಳು ಮತ್ತು ಬಾಗಿಲುಗಳನ್ನು ಮುಚ್ಚಿಡಿ. ಬಾಗಿಲು ಮತ್ತು ಕಿಟಕಿಗಳ ಬಳಿ ನಿಲ್ಲಬೇಡಿ. ಕಟ್ಟಡದ ಒಳಗೆ ಇರಿ ಮತ್ತು ಸಾಧ್ಯವಾದಷ್ಟು ಗೋಡೆಗಳು ಅಥವಾ ನೆಲವನ್ನು ಮುಟ್ಟದಿರಲು ಪ್ರಯತ್ನಿಸಿ. ಗೃಹೋಪಯೋಗಿ ಉಪಕರಣಗಳ ವಿದ್ಯುತ್ ಸಂಪರ್ಕವನ್ನು ಕಡಿತಗೊಳಿಸಿ.ಗುಡುಗು ಸಹಿತ ಮಳೆಯ ಸಮಯದಲ್ಲಿವಿದ್ಯುತ್ ಉಪಕರಣಗಳಿಂದ ದೂರವಿರಬೇಕು ಎಂದು ಸೂಚನೆ ನೀಡಲಾಗಿದೆ.