ವಿಕ ಸುದ್ದಿಲೋಕ ಅಂಕೋಲಾ
ಇಂದಿನ ಒತ್ತಡದ ಜೀವನಶೈಲಿಯಲ್ಲಿಯುವಜನತೆ ತಮ್ಮ ಆರೋಗ್ಯದ ಕಡೆಗೆ ನಿರ್ಲಕ್ಷ್ಯ ವಹಿಸುತ್ತಿರುವುದು ಆತಂಕಕಾರಿ ವಿಷಯ. ಕೇವಲ ರೋಗ ಬಂದಾಗ ಚಿಕಿತ್ಸೆ ಪಡೆಯುವುದಕ್ಕಿಂತ ರೋಗ ಬರದಂತೆ ಮುನ್ನೆಚ್ಚರಿಕೆ ವಹಿಸುವುದು ಮುಖ್ಯ. ವಿದ್ಯಾರ್ಥಿ ಜೀವನದಲ್ಲಿಯೇ ಸಮತೋಲಿತ ಆಹಾರ, ನಿಯಮಿತ ವ್ಯಾಯಾಮ ಮತ್ತು ಯೋಗವನ್ನು ರೂಢಿಸಿಕೊಳ್ಳಬೇಕು ಎಂದು ತಾಲೂಕು ಆರೋಗ್ಯಾಧಿಕಾರಿ ಡಾ.ಜಗದೀಶ ನಾಯ್ಕ ಹೇಳಿದರು.
ಪಟ್ಟಣದ ಕೆಎಲ್ ಇ ಸಂಸ್ಥೆಯ ಶೇಷಗಿರಿ ಪಿಕಳೆ ಶಿಕ್ಷಣ ಮಹಾವಿದ್ಯಾಲಯದಲ್ಲಿಆಯೋಜಿಸಿದ್ದ ಆರೋಗ್ಯ ಉಚಿತ ತಪಾಸಣಾ ಶಿಬಿರದಲ್ಲಿಅವರು ಮಾತನಾಡಿದರು.
ಅಧ್ಯಕ್ಷತೆ ವಹಿಸಿದ್ದ ಉಪನ್ಯಾಸಕ ಮಂಜುನಾಥ ಇಟಗಿ ಮಾತನಾಡಿ, ‘‘ಶಿಕ್ಷಣ ಮತ್ತು ಆರೋಗ್ಯ ಎಂಬುದು ಒಂದು ನಾಣ್ಯದ ಎರಡು ಮುಖಗಳಿದ್ದಂತೆ. ವಿದ್ಯಾರ್ಥಿಗಳು ಆರೋಗ್ಯದ ಬಗ್ಗೆ ಕಾಳಜಿ ವಹಿಸಬೇಕು’’ ಎಂದರು.
ಡಾ. ಎಡ್ಲಿನ, ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಶೈಲಜಾ ಭಂಡಾರಿ ಹಾಗೂ ಪ್ರಾಥಮಿಕ ಆರೋಗ್ಯ ಸುರಕ್ಷಣಾಧಿಕಾರಿ ಇಂದಿರಾ ನಾಯ್ಕ, ಉಪನ್ಯಾಸಕಿ ಪ್ರವೀಣಾ ನಾಯಕ, ರೇಖಾ ಬೂದಿಹಾಳ, ಅಶ್ವಿನಿ ಗೌಡ, ಭರತ ಆಗೇರ ಇದ್ದರು. ಗಗನಾ ನಾಯಕ ಸ್ವಾಗತಿಸಿದರು. ಶ್ರೀನಿಧಿ ನಾಯಕ ನಿರೂಪಿಸಿದರು. ಅಂಕಿತಾ ಅಂಕೋಲೆಕರ ವಂದಿಸಿದರು.
ಈ ವಿಶೇಷ ಶಿಬಿರದಲ್ಲಿಕಾಲೇಜಿನ ವಿದ್ಯಾರ್ಥಿಗಳು ಹಾಗೂ ಸಿಬ್ಬಂದಿ ಸೇರಿದಂತೆ 64 ಜನರು ಆರೋಗ್ಯ ತಪಾಸಣೆ ಮಾಡಿಸಿಕೊಂಡರು.
30ಅಂಕೋಲಾ1
ಅಂಕೋಲಾದ ಕೆಎಲ್ ಇ ಶಿಕ್ಷಣ ಮಹಾವಿದ್ಯಾಲಯದಲ್ಲಿನಡೆದ ಆರೋಗ್ಯ ಶಿಬಿರದಲ್ಲಿಡಾ. ಜಗದೀಶ ನಾಯ್ಕ ಮಾತನಾಡಿದರು.

