ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಲತಾಕುಮಾರಿ ಸೂಚನೆ
ವಿಕ ಸುದ್ದಿಲೋಕ ಹಾಸನ
ಕುಡಿಯವ ನೀರಿನ ಅಭಾವ ಉಂಟಾಗಬಹುದಾದ ದುರ್ಬಲ ಪ್ರದೇಶಗಳನ್ನು ಗುರುತಿಸಿ ಟ್ಯಾಂಕರ್ ಹಾಗೂ ಖಾಸಗಿ ಬೋರ್ ವೆಲ್ ಮಾಲೀಕರೊಂದಿಗೆ ಒಡಂಬಡಿಕೆ ಮಾಡಿಕೊಂಡು ನೀರು ಒದಗಿಸಬೇಕು ಎಂದು ಜಿಲ್ಲಾಧಿಕಾರಿ ಕೆ.ಎಸ್ .ಲತಾಕುಮಾರಿ ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲಾಧಿಕಾರಿ ಕಚೇರಿಯಲ್ಲಿಜಿಲ್ಲೆಯ ಎಲ್ಲಾನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿಕುಡಿಯುವ ನೀರಿನ ಸಮಸ್ಯೆ ಕುರಿತು ಸಭೆ ನಡೆಸಿ ಮಾತನಾಡಿದರು.
‘‘ಜಿಲ್ಲೆಯಲ್ಲಿಕುಡಿಯುವ ನೀರಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ಮುಂಜಾಗ್ರತಾ ಕ್ರಮಗಳನ್ನು ಕ್ಯೆಗೊಳ್ಳಬೇಕು. ತಾಪಮಾನ ಹೆಚ್ಚಿದ್ದು, ಅತಿ ಹೆಚ್ಚು ತಾಪಮಾನದಿಂದ ಉಂಟಾಗಬಹುದು. ಆರೋಗ್ಯ ಸಮಸ್ಯೆಗೆ ಸಲಹೆ, ಪರಿಣಾಮಗಳ ವಿವರ ಹಾಗೂ ಅತಿ ಹೆಚ್ಚು ತಾಪಮಾನಕ್ಕೆ ಕಾಯಿಲೆಗೆ ಪ್ರಥಮ ಚಿಕಿತ್ಸೆಗಳ ಬಗ್ಗೆ ಜನರಲ್ಲಿಹೆಚ್ಚಿನ ಜಾಗೃತಿ ಮೂಡಿಸಬೇಕು,’’ಎಂದು ತಿಳಿಸಿದರು.
‘‘ಕುಡಿಯುವ ನೀರಿನ ಅಭಾವದ ಕುರಿತು ಎಲ್ಲಾಕಾರ್ಯನಿರ್ವಹಣಾ ಅಧಿಕಾರಿಗಳು ವರದಿಯನ್ನು ಸಲ್ಲಿಬೇಕು. ಜತೆಗೆ ಕುಡಿಯುವ ನೀರಿನ ಕುರಿತು ಸಹಾಯವಾಣಿ ನಿರಂತರವಾಗಿ ಕಾರ್ಯನಿರ್ವಹಿಸುವಂತೆ ನೋಡಿಕೊಳ್ಳಬೇಕು,’’ಎಂದು ಸೂಚಿಸಿದರು.
‘‘ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯ ಶಾಲೆಗಳು ಇ-ಖಾತಾ ಮಾಡಿಸಬೇಕು. ಇದಕ್ಕೆ ಶಿಕ್ಷಣ ಇಲಾಖೆ ಹಾಗೂ ನಗರ ಸ್ಥಳೀಯ ಸಂಸ್ಥೆಗಳ ಅಧಿಕಾರಿಗಳು ಸಮನ್ವಯತೆಯಿಂದ ಕರ್ತವ್ಯ ನಿರ್ವಹಿಸಬೇಕು. ಖಾತೆಗೆ ಬಾಕಿ ಇರುವುದನ್ನು ಪೂರ್ಣಗೊಳಿಸಲು ಕ್ರಮಕೈಗೊಳ್ಳಬೇಕು,’’ಎಂದು ತಿಳಿಸಿದರು.
‘‘ಹಸಿರು ಹಾಸನ ಯೋಜನೆಯಡಿ ಕ್ರಿಯಾ ಯೋಜನೆಯನ್ನು ಸಿದ್ಧಪಡಿಸಬೇಕು. ಶಾಲೆಗಳ ಮೈದಾನದ ಸುತ್ತ, ಕೆರೆ ಏರಿಗಳ ಸುತ್ತ, ರಸ್ತೆ ಬದಿಯಲ್ಲಿಸಸಿಗಳನ್ನು ಬೆಳಸಬೇಕು. ಬೇಲೂರು, ಸಕಲೇಶಪುರ ಹಾಗೂ ಆಲೂರು ತಾಲೂಕು ವ್ಯಾಪ್ತಿಯಲ್ಲಿಕಾಡಾನೆ ಹಾವಳಿ ಪ್ರದೇಶದಲ್ಲಿರುವ ಶಾಲೆಗಳನ್ನು ಗುರುತಿಸಿ ಪಟ್ಟಿ ಮಾಡಿ ನೀಡುವಂತೆ ಸೂಚಿಸಿದರಲ್ಲದೆ ವಾಹನ ವ್ಯವಸ್ಥೆ ಕಲ್ಪಿಸಲು ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗುವುದು,’’ಎಂದು ತಿಳಿಸಿದರು.
ಜಿಪಂ ಉಪ ಕಾರ್ಯದರ್ಶಿ ಬಾಬು, ಜಿಲ್ಲಾನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ರುದ್ರಮುನಿ, ಡಿಡಿಪಿಐ ಬಲರಾಮ್ , ತಾಲೂಕು ಮುಖ್ಯಾಧಿಕಾರಿಗಳು ಹಾಜರಿದ್ದರು.
ಫೋಟೊ ಸುದ್ದಿ

