ವಿಕ ಸುದ್ದಿಲೋಕ ಹನೂರು
ಹಿರಿಯ ನಾಯಕರ ತ್ಯಾಗ ಮತ್ತು ಬಲಿದಾನದ ಫಲವಾಗಿ 1980ರಲ್ಲಿ ಸ್ಥಾಪನೆಯಾದ ಭಾರತೀಯ ಜನತಾ ಪಾರ್ಟಿ ಇಂದು ದೇಶದ ಅತಿ ದೊಡ್ಡ ರಾಜಕೀಯ ಪಕ್ಷವಾಗಿ ಬೆಳೆದಿದೆ. ಈ ಸಾಧನೆಗೆ ಕಾರ್ಯಕರ್ತರ ಪರಿಶ್ರಮವೇ ಪ್ರಮುಖ ಕಾರಣ ಎಂದು ಮಲೆ ಮಾದೇಶ್ವರ ಮಂಡಲ ಅಧ್ಯಕ್ಷ ಮುರುಗೇಶ್ ತಿಳಿಸಿದರು.
ಹನೂರು ಬಿಜೆಪಿ ಒಬಿಸಿ ಮೋರ್ಚಾ ಜಿಲ್ಲಾಧ್ಯಕ್ಷ ಜನಧ್ವನಿ ವೆಂಕಟೇಶ್ ಅವರ ಕಚೇರಿಯಲ್ಲಿಆಯೋಜಿಸಿದ್ದ ಬಿಜೆಪಿ ಸಂಸ್ಥಾಪನಾ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು. ಪಕ್ಷವು ಎಲ್ಲವರ್ಗಗಳ ಹಿತಾಸಕ್ತಿ ಕಾಪಾಡುವ ನಿಟ್ಟಿನಲ್ಲಿಬದ್ಧವಾಗಿದ್ದು, ಬಡವರು, ಕಾರ್ಮಿಕರು, ರೈತರು ಹಾಗೂ ಮಹಿಳೆಯರ ಸರ್ವಾಂಗೀಣ ಅಭಿವೃದ್ಧಿಗೆ ಕೆಲಸ ಮಾಡುತ್ತಿದೆ. ಇದೇ ಹಾಧಿದಿಯಲ್ಲಿದೇಶದ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ನಾಯಕತ್ವದಲ್ಲಿಅಭಿವೃದ್ಧಿಯ ಕಾರ್ಯಗಳು ನಡೆಯುತ್ತಿದ್ದು, ಇಡೀ ವಿಶ್ವವೇ ಭಾರತದತ್ತ ಗಮನ ಹರಿಸುತ್ತಿದೆ. ಮುಂದಿನ ವಿಧಾನಸಭಾ ಚುನಾವಣೆಯಲ್ಲಿಕರ್ನಾಟಕದಲ್ಲಿಯೂ ಬಿಜೆಪಿ 150ಕ್ಕೂ ಅಧಿಕ ಸ್ಥಾನಗಳನ್ನು ಗೆದ್ದು ಅಧಿಕಾರಕ್ಕೆ ಬರಲಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.
ಹನೂರು ಮಂಡಲ ಅಧ್ಯಕ್ಷ ವೃಷಭೇಂದ್ರ ಮಾತನಾಡಿ, ದೇಶದಲ್ಲಿಬಿಜೆಪಿ ಆಡಳಿತ ಬಂದಾಗ ರಾಷ್ಟ್ರದ ಸಮಗ್ರತೆ, ಐಕ್ಯತೆ ಹಾಗೂ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ ನೀಡಲಾಗಿದೆ. ಜನರು ಬಿಜೆಪಿ ಮೇಲೆ ವಿಶ್ವಾಸವಿಟ್ಟು ಅಭಿವೃದ್ಧಿಯ ನಿರೀಕ್ಷೆ ಹೊಂದಿದ್ದಾರೆ. ಬಿಜೆಪಿ ತನ್ನ 47 ವರ್ಷಗಳ ಪಯಣದಲ್ಲಿಅನೇಕ ಸಾಧನೆಗಳನ್ನು ಮಾಡಿದ್ದು, ಪಕ್ಷದ ಇತಿಹಾಸವನ್ನು ಪ್ರತಿಯೊಬ್ಬ ಕಾರ್ಯಕರ್ತರೂ ತಿಳಿದುಕೊಳ್ಳುವುದು ಅಗತ್ಯ ಎಂದು ಸಲಹೆ ನೀಡಿದರು.
ಹನೂರು ಮಂಡಲ ಮಾಜಿ ಅಧ್ಯಕ್ಷ ಜಗನ್ನಾಥ ನಾಯ್ಡು, ಬಿ.ಎಲ್ .ಎ-1 ಲೋಕೇಶ್ ಜೆಟ್ಟಿ, ಪ್ರಧಾನ ಕಾರ್ಯದರ್ಶಿಗಳಾದ ಪುಟ್ಟರಾಜು, ಮಹದೇವ್ , ಮುರುಗೇಶ್ , ಉಪಾಧ್ಯಕ್ಷ ಕೃಷೆæ್ಣೕಗೌಡ, ಕಾರ್ಯದರ್ಶಿ ನಂಜುಂಡಸ್ವಾಮಿ, ಬೂತ್ ಅಧ್ಯಕ್ಷರಾದ ವೆಂಕಟರಾಜು, ಮಾಯಣ್ಣ, ಕಾಂತರಾಜು, ಶಿವಲಿಂಗಪ್ಪ, ಕುಮಾರಸ್ವಾಮಿ ಹಾಗೂ ಮುಖಂಡರಾದ ರವಿ, ಅರವಿಂದ್ , ಸುರೇಶ್ , ರಾಜು ಸೇರಿದಂತೆ ಹಲವಾರು ಪ್ರಮುಖರು ಭಾಗವಹಿಸಿದ್ದರು.
ಅಊಓ06ಊಓಖ01
ಪೋಟೊ;01ಹನೂರು ಬಿಜೆಪಿ ಓಬಿಸಿ ಮೋರ್ಚಾ ಜಿಲ್ಲಾಧ್ಯಕ್ಷ ಜನದ್ವನಿ ವೆಂಕಟೇಶ್ ಅವರ ಕಚೇರಿಯಲ್ಲಿಆಯೋಜಿಸಿದ್ದ ಬಿಜೆಪಿ ಸಂಸ್ಥಾಪನಾ ದಿನಾಚರಣೆ ಕಾರ್ಯಕ್ರಮದಲ್ಲಿ

