ನೇರ ಸಂದರ್ಶನ ನಾಳೆ
ಬಳ್ಳಾರಿ: ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಿಂದ ಏ.9 ರಂದು ಬೆಳಗ್ಗೆ 10 ರಿಂದ ಮಧ್ಯಾಹ್ನ 1 ಗಂಟೆಯವರೆಗೆ ನಗರದ ಹಳೆಯ ತಾಲೂಕು ಕಚೇರಿ ಆವರಣದಲ್ಲಿನ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿನೇರ ಸಂದರ್ಶನ ಏರ್ಪಡಿಸಲಾಗಿದೆ. ಐಟಿಐ (ಫಿಟ್ಟರ್ ) ಅಥವಾ ಯಾವುದೇ ಪದವಿ ಹೊಂದಿದ ಪುರುಷ ಅಭ್ಯರ್ಥಿಗಳು ಮಾತ್ರ ಸಂದರ್ಶನದಲ್ಲಿಭಾಗವಹಿಸಬಹುದಾಗಿದೆ. ಮಾಹಿತಿಗೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಮೊ.7619207762, 9663263086, 7676774293, 6360408094 ಗೆ ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.
13ರಂದು ಪಿಂಚಣಿ ಅದಾಲತ್
ಬಳ್ಳಾರಿ: ಕಾರ್ಮಿಕರ ಭವಿಷ್ಯ ನಿಧಿ ಸಂಸ್ಥೆಯ ಬಳ್ಳಾರಿ ಪ್ರಾದೇಶಿಕ ಕಚೇರಿಯಿಂದ ಪಿಂಚಣಿದಾರರ ಕುಂದು ಕೊರತೆ ಆಲಿಸಿ, ಪರಿಹರಿಸಲು ಏ.13ರಂದು ಬೆಳಗ್ಗೆ 11 ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರೆಗೆ ನಗರದ ಪ್ರಾದೇಶಿಕ ಕಚೇರಿಯಲ್ಲಿಪಿಂಚಣಿ ಅದಾಲತ್ ಕಾರ್ಯಕ್ರಮ ಏರ್ಪಡಿಸಲಾಗಿದೆ. ಬಳ್ಳಾರಿ, ವಿಜಯನಗರ, ಕೊಪ್ಪಳ, ಚಿತ್ರದುರ್ಗ ಜಿಲ್ಲೆಗಳ ಪಿಂಚಣಿದಾರರು ತಮ್ಮ ಕುಂದುಕೊರತೆಗಳಿದ್ದಲ್ಲಿಮಾಹಿತಿಗೆ ದೂ.08392-268943 ಗೆ ಸಂಪರ್ಕಿಸಬಹುದು ಎಂದು ಜಿಲ್ಲಾ ಪ್ರಾದೇಶಿಕ ಕಚೇರಿಯ ಸಹಾಯಕ ಭವಿಷ್ಯ ನಿಧಿ ಆಯುಕ್ತರಾದ ಮಾಲತಿ ಅವರು ಪ್ರಕಟಣೆಯಲ್ಲಿತಿಳಿಸಿದ್ದಾರೆ.

