ಕೃತಕ ಬುದ್ಧಿಮತ್ತೆ ಸಮರ್ಥವಾಗಿ ಬಳಸಿ
ಅಂತಾರಾಷ್ಟ್ರೀಯ ಸಮ್ಮೇಳನದಲ್ಲಿಶ್ರೀ ಗುಣನಾಥ ಸ್ವಾಮೀಜಿ ಆಶೀರ್ವಚನ
ವಿಕ ಸುದ್ದಿಲೋಕ ಚಿಕ್ಕಮಗಳೂರು
ಆಧುನಿಕ ಜೀವನ ಪದ್ಧತಿಯಲ್ಲಿಕೃತಕ ಬುದ್ಧಿಮತ್ತೆ ಮನುಷ್ಯನಿಗೆ ದೊಡ್ಡ ಸವಾಲಾಗಿ ಪರಿಣಮಿಸಿದೆ. ಪ್ರಸ್ತುತ ಕಾಲಕ್ಕೆ ಅದು ಬೇಡವಾದರೂ ಅದನ್ನು ಅನುಸರಿಸಿಕೊಂಡು ಸೂಕ್ತ ರೀತಿಯಲ್ಲಿಉಪಯೋಗಿಸಿಕೊಳ್ಳಬೇಕು ಎಂದು ಆದಿಚುಂಚನಗಿರಿ ಶೃಂಗೇರಿ ಶಾಖಾಮಠದ ಶ್ರೀ ಗುಣನಾಥ ಸ್ವಾಮೀಜಿ ಹೇಳಿದರು.
ನಗರದ ಎಐಟಿ ಕಾಲೇಜಿನ ಬಿಜಿಎಸ್ ಸಭಾಂಗಣದಲ್ಲಿಐಇಇಇ ಬೆಂಗಳೂರು ವಿಭಾಗದಿಂದ ಗುರುವಾರ ಆಯೋಜಿಸಿದ್ದ ‘ ಸ್ಮಾರ್ಟ್ ಎಲೆಕ್ಟ್ರಾನಿಕ್ಸ್ ಮತ್ತು ಮೆಷಿನ್ ಇನ್ಫಾಮ್ರ್ಯಾಟಿಕ್ಸ್ ’ ಉದಯೋನ್ಮುಖ ಸಂಶೋಧನೆ ಕುರಿತಾದ ಅಂತಾರಾಷ್ಟ್ರೀಯ ಸಮ್ಮೇಳನವನ್ನು ಉದ್ಘಾಟಿಸಿ ಆಶೀರ್ವಚನ ನೀಡಿದರು.
ಇಂದಿನ ದಿನಮಾನದಲ್ಲಿತಂತ್ರಜ್ಞಾನದ ವರ್ಣನೆ ಮಾಡುವುದು ಬಹಳ ಕಷ್ಟಸಾಧ್ಯ. ಪ್ರತಿಯೊಂದು ರಂಗದಲ್ಲೂತಂತ್ರಜ್ಞಾನ ಅವಶ್ಯಕವಾಗಿದೆ. ಈ ತಂತ್ರಜ್ಞಾನ ವ್ಯವಸ್ಥೆಗೆ ಅಂಟಿಕೊಂಡಿರುವ ಮನುಜ ಬಿಟ್ಟಿರಲಾಗದ ಸ್ಥಿತಿಗೆ ತಲುಪಿದ್ದಾನೆ. ಇದೀಗ ಎಐ ತಂತ್ರಜ್ಞಾನವು ಎಲ್ಲರಿಗೂ ಸವಾಲಾಗಿದ್ದು ಸಮರ್ಪಕವಾಗಿ ಬಳಸಿಕೊಳ್ಳುವ ಕಾರ್ಯ ಮಾಡಬೇಕಿದೆ ಎಂದರು.
ಆದಿಚುಂಚನಗಿರಿ ಮಠದಲ್ಲಿಇದೇ ಏ.15ರಂದು ಮಠದ ಸಂಸ್ಥಾಪಕರಾದ ಶ್ರೀ ಬಾಲಗಂಗಾಧರನಾಥ ಸ್ವಾಮೀಜಿ ಅವರ ಸಮಾಧಿ ಸ್ಥಳದಲ್ಲಿಶಿಲೆಗಳೊಂದಿಗೆ ದೇಗುಲ ಕೊಠಡಿ ನಿರ್ಮಾಣಗೊಳ್ಳುತ್ತಿದೆ. ಈ ಕಾರ ್ಯಕ್ರಮವನ್ನು ಪ್ರಧಾನಿ ನರೇಂದ್ರ ಮೋದಿ ಅವರು ಉದ್ಘಾಟಿಸಲಿದ್ದಾರೆ. ಜಿಲ್ಲೆಯ ಸರ್ವಸಮಾಜವು ಒಂದಾಗಿ ಕಾರ್ಯಕ್ರಮದಲ್ಲಿಭಾಗವಹಿಸಬೇಕು ಎಂದು ಮನವಿ ಮಾಡಿದರು.
ಮಂಗಳೂರು ಎನ್ ಐಟಿಟಿಇ ವಿಶ್ವವಿದ್ಯಾಲಯ ಕುಲಪತಿ ಡಾ. ಎಂ.ಎಸ್ .ಮೂಡಿತ್ತಾಯ ಮಾತನಾಡಿ, ಸ್ಮಾರ್ಟ್ ಎಲೆಕ್ಟ್ರಾನಿಕ್ಸ್ ಮತ್ತು ಮೆಷಿನ್ ಇನ್ಫಾಮ್ರ್ಯಾಟಿಕ್ಸ್ ಸಮ್ಮೇಳನವು ವಿದ್ಯಾರ್ಥಿಗಳ ಮನಸ್ಸುಗಳೊಂದಿಗೆ ಸಂವಹನ ನಡೆಸಲು ಉತ್ತಮ ಅವಕಾಶವನ್ನು ಒದಗಿಸುತ್ತಿದೆ. ಇದರಿಂದ ಪ್ರೇರೇಪಿತರಾಗುವ ಮೂಲಕ ಇತರರನ್ನು ಪ್ರೇರೇಪಿಸುವ ಕಾರ್ಯ ಮಾಡಬೇಕಿದೆ ಎಂದರು.
ಎಐಟಿ ಕಾಲೇಜು ಪ್ರಾಂಶುಪಾಲ ಡಾ. ಎಂ.ಎ.ಗೌತಮ್ ಮಾತನಾಡಿ, ಶ್ರೀಗಳ ಮಾರ್ಗದರ್ಶನದಲ್ಲಿಟ್ರಸ್ಟ್ ದೇಶಾದ್ಯಂತ 500ಕ್ಕೂ ಹೆಚ್ಚು ಶಿಕ್ಷಣ ಸಂಸ್ಥೆಗಳನ್ನು ಒಳಗೊಂಡಂತೆ ಗಮನಾರ್ಹವಾಗಿ ಪ್ರಗತಿ ಸಾಧಿಸಿದೆ. 70ಕ್ಕೂ ಹೆಚ್ಚು ಉನ್ನತ ಶಿಕ್ಷಣ ಸಂಸ್ಥೆಗಳನ್ನು ನಿರ್ವಹಿಸುತ್ತಿದ್ದು ಅವುಗಳಲ್ಲಿಹೆಚ್ಚಿನವು ಗ್ರಾಮೀಣ ಭಾಗದಲ್ಲಿಉತ್ತಮ ಸೇವೆ ಸಲ್ಲಿಸುತ್ತಿವೆ ಎಂದು ಹೇಳಿದರು.
ಐಇಇಇ ಬೆಂಗಳೂರು ವಿಭಾಗದ ಅಧ್ಯಕ್ಷ ಡಾ. ಚೆಂಗಪ್ಪ ಮಂಜಂದೀರಾ, ಸಿಐಎಸ್ ಡಾ. ಸುಮನ ಮರಡಿತ್ತಾಯ, ಇಸಿಎಂಐ ಪ್ರಕಟಣೆ ಅಧ್ಯಕ್ಷ ಡಾ. ಅನಿಲ್ ಕುಮಾರ್ , ಆದಿಚುಂಚನಗಿರಿ ವಿಶ್ವವಿದ್ಯಾಲಯದ ರಿಜಿಸ್ಟರ್ ಡಾ. ಸಿ.ಕೆ.ಸುಬ್ಬರಾಯ, ಎಐಟಿ ಆಡಳಿತ ಮಂಡಳಿ ಸದಸ್ಯ ಕೆ.ಮೋಹನ್ , ವಿದ್ಯಾರ್ಥಿ ಕಲ್ಯಾಣ ಅಧಿಕಾರಿ ಪ್ರೊ.ಸಂಗಾರೆಡ್ಡಿ ಹಾಗೂ ವಿವಿಧ ವಿಭಾಗದ ಮುಖ್ಯಸ್ಥರು, ವಿದ್ಯಾರ್ಥಿಗಳು ಉಪ ಸ್ಥಿತರಿದ್ದರು.
9ರುದ್ರಯ್ಯ-ಪಿ3
ಚಿಕ್ಕಮಗಳೂರಿನ ಎಐಟಿಯಲ್ಲಿಹಮ್ಮಿಕೊಂಡಿದ್ದ ಕಾರ್ಯಾಗಾರವನ್ನು ಗಣ್ಯರು ಉದ್ಘಾಟಿಸಿದರು.

