ದಾಂಡೇಲಿ : ಮೌಳಂಗಿಯ ಅಂಬೇಡ್ಕರ್ ಭವನದಲ್ಲಿ ಏ.10ರಂದು ಮಧ್ಯಾಹ್ನ 2 ರಿಂದ ಆರೋಗ್ಯ ಉಚಿತತಪಾಸಣಾ ಶಿಬಿರ ಹಮ್ಮಿಕೊಳ್ಳಲಾಗಿದೆ ಎಂದು ಲಯನ್ಸ್ ಕ್ಲಬ್ ಅಧ್ಯಕ್ಷೆ ಡಾ.ಗೌರಿ ಶೇಖರ ಹಂಚಿನಾಳಮಠ ಮತ್ತು ಬಂಗೂರನಗರ ಪದವಿ ಮಹಾವಿದ್ಯಾಲಯದ ಉಪ ಪ್ರಾಚಾರ್ಯ ಡಾ.ಎಸ್ .ಎಸ್ .ಹಿರೇಮಠ ತಿಳಿಸಿದರು.
ನಗರದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿಈ ಬಗ್ಗೆ ಮಾಹಿತಿ ನೀಡಿದರು. ‘‘ಲಯನ್ಸ್ ಕ್ಲಬ್ , ಬಂಗೂರನಗರ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಮಹಾವಿದ್ಯಾಲಯ ಹಾಗೂ ಕಾಲೇಜಿನ ರೆಡ್ ಕ್ರಾಸ್ ಮತ್ತು ರೆಡ್ ರಿಬ್ಬನ್ ಕ್ಲಬ್ , ರಾಷ್ಟ್ರೀಯ ಸೇವಾ ಯೋಜನಾ ಘಟಕ, ರೋವರ್ಸ್ ಮತ್ತು ರೇಂಜರ್ಸ್ ಘಟಕಗಳ ಆಶ್ರಯದಲ್ಲಿಶಿಬಿರ ಹಮ್ಮಿಕೊಳ್ಳಲಾಗಿದೆ. ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿಭಾಗವಹಿಸಿ ಶಿಬಿರದ ಪ್ರಯೋಜನ ಪಡೆದುಕೊಳ್ಳಬೇಕು’’ ಎಂದು ತಿಳಿಸಿದರು.
ಈ ಸಂದರ್ಭದಲ್ಲಿಲಯನ್ಸ್ ಕ್ಲಬ್ ಪ್ರಮುಖರಾದ ಡಾ.ಶೇಖರ ಹಂಚಿನಾಳಮಠ, ವಿ.ಪಿ.ಜೋಶಿ, ಪಿ.ಕೆ.ಜೋಶಿ ಮೊದಲಾದವರು ಇದ್ದರು.

